ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ (IND vs SL) ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಆಯ್ಕೆ ಸಮಿತಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ರೋಹಿತ್ ಶರ್ಮಾ (Rohit Sharma), ಕೆಎಲ್ ರಾಹುಲ್ (KL Rahul) ಮತ್ತು ವಿರಾಟ್ ಕೊಹ್ಲಿ (Virat Kohli) ಟಿ20 ಸರಣಿಯಿಂದ ಹೊರಗುಳಿದಿದ್ದು, ರಿಷಬ್ ಪಂತ್ (Rishabh Pant) ಟಿ20 ಮತ್ತು ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೇ ಅಚ್ಚರಿ ಎಂಬಂತೆ ಕೆಎಲ್ ರಾಹುಲ್ ಉಪನಾಯಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಭಾರತ ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ನೀಡಲಾಗಿದ್ದು, ಸೂರ್ಯಕುಮಾರ್ ಯಾದವ್ ಉಪನಾಯಕರಾಗಿದ್ದಾರೆ. ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ನಾಯಕರಾಗಿ ಮುಂದುವರಿದಿದ್ದಾರೆ. ಹಾರ್ದಿಕ್ ಪಾಂಡ್ಯ ಅವರನ್ನು ಏಕದಿನ ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ.
ರೋಹಿತ್ -ಕೊಹ್ಲಿ ಔಟ್:
ಇನ್ನು, ಬಾಂಗ್ಲಾದೇಶ ಸರಣಿ ವೇಳೆ ಗಾಯಗೊಂಡಿರುವ ರೋಹಿತ್ ಶರ್ಮಾ ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಲು ಸಾಧ್ಯವಾಗಲಿಲ್ಲ, ಆದ್ದರಿಂದ ಅವರು ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಆಡುತ್ತಾರೆಯೇ ಅಥವಾ ಇಲ್ಲವೇ ಎಂಬ ಅನುಮಾನವಿತ್ತು. ಆದರೆ ಇದೀಗ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ಆರಂಭದ 3 ಪಂದ್ಯಗಳ ಟಿ20 ಸರಣಿಯಿಂದ ಹೊರಗಿಟ್ಟಿದೆ. ಆದರೆ ಅವರು ಏಕದಿನ ಸರಣಿ ವೇಳೆಗೆ ಮತ್ತೆ ತಂಡಕ್ಕೆ ಸೇರಿಕೊಳ್ಳಲಿದ್ದಾರೆ. ಅಲ್ಲದೇ ರೋಹಿತ್ ಮುಂಬೈನಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿರುವುದು ಕಂಡುಬಂದಿದೆ. ಜೊತೆಗೆ ಕುಲದೀಪ್ ಯಾದವ್ ಸುದೀರ್ಘ ಸಮಯದ ನಂತರ ಟಿ20 ತಂಡಕ್ಕೆ ಮರಳಿದ್ದಾರೆ. ಅಲ್ಲದೇ ಟಿ20 ಸರಣಿಯಿಂದ ವಿರಾಟ್ ಕೊಹ್ಲಿ ಸಹ ಹೊರಗುಳಿದಿದ್ದಾರೆ.
#TeamIndia squad for three-match ODI series against Sri Lanka.#INDvSL @mastercardindia pic.twitter.com/XlilZYQWX2
— BCCI (@BCCI) December 27, 2022
ಇದನ್ನೂ ಓದಿ: IPL 2023: 8 ಬೌಲರ್ಸ್, 10 ಆಲ್ರೌಂಡರ್ಸ್; ಹೇಗಿರಲಿದೆ RCB 2023 ಪ್ಲೇಯಿಂಗ್ 11?
ಶ್ರೀಲಂಕಾ ಸರಣಿಗೆ ಭಾರತದ T20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ ಶಿವಂ ಮಾವಿ, ಮುಖೇಶ್ ಕುಮಾರ್.
#TeamIndia squad for three-match T20I series against Sri Lanka.#INDvSL @mastercardindia pic.twitter.com/iXNqsMkL0Q
— BCCI (@BCCI) December 27, 2022
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಭಾರತ- ಶ್ರೀಲಂಕಾ ಪ್ರವಾಸದ ವೇಳಾಪಟ್ಟಿ:
ಮೊದಲ ಟಿ20: ಜನವರಿ 3, 2023 ಮಂಗಳವಾರ - ಮುಂಬೈ
2ನೇ ಟಿ20: ಜನವರಿ 5, 2023 ಗುರುವಾರ - ಪುಣೆ
3ನೇ ಟಿ20: ಜನವರಿ 7, ಶನಿವಾರ - ರಾಜ್ಕೋಟ್
1ನೇ ಏಕದಿನ ಪಂದ್ಯ: ಜನವರಿ 10, ಮಂಗಳವಾರ - ಗುವಾಹಟಿ
2ನೇ ಏಕದಿನ ಪಂದ್ಯ: ಜನವರಿ 12, ಗುರುವಾರ - ಕೋಲ್ಕತ್ತಾ
3ನೇ ಏಕದಿನ ಪಂದ್ಯ: ಜನವರಿ 15, ರವಿವಾರ - ತಿರುವನಂತಪುರ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ