• Home
  • »
  • News
  • »
  • sports
  • »
  • T20 World Cup 2022: ಆಸೀಸ್​ನಲ್ಲಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ, ಈ ಸಲ ಕಪ್ ನಮ್ದೇ ಎಂದ ಫ್ಯಾನ್ಸ್​

T20 World Cup 2022: ಆಸೀಸ್​ನಲ್ಲಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ, ಈ ಸಲ ಕಪ್ ನಮ್ದೇ ಎಂದ ಫ್ಯಾನ್ಸ್​

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

T20 World Cup 2022: ಪರ್ತ್‌ಗೆ ಬಂದಿಳಿದ ಟೀಂ ಇಂಡಿಯಾ ಕಳೆದ ದಿನದ ಸೆಷನ್‌ಗಾಗಿ ವಾಕಾ ಮೈದಾನಕ್ಕೆ ಪ್ರವೇಶಿಸಿದೆ. ಅಲ್ಲಿಯೇ ಟೀಂ ಇಂಡಿಯಾದ ಮೊದಲ ತರಬೇತಿ ಸೆಷನ್ ನಡೆಯಿತು.

  • Share this:

ಭಾರತ ಮತ್ತೊಮ್ಮೆ ಟಿ20 ವಿಶ್ವಕಪ್ ಗೆಲ್ಲಬೇಕು ಎಂಬುದು ಕಳೆದ 15 ವರ್ಷಗಳ ಎಲ್ಲಾ ಭಾರತೀಯ ಕ್ರಿಕೆಟ್ ಪ್ರೇಮಿಗಳ ಕನಸು. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ 2007ರಲ್ಲಿ ಭಾರತಕ್ಕೆ ಮೊದಲ ಟಿ20 ವಿಶ್ವಕಪ್ ಗೆದ್ದುಕೊಟ್ಟಿತು. ಆದರೆ ಆ ಬಳಿಕ ಭಾರತ ತಂಡಕ್ಕೆ ಒಮ್ಮೆಯೂ ಆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಲಿಲ್ಲ. ಅದೇ ಟ್ರೋಫಿಯನ್ನು ಭಾರತಕ್ಕೆ ಮರಳಿ ತರಲು ರೋಹಿತ್ ಶರ್ಮಾ ಪಡೆ ಆಸ್ಟ್ರೇಲಿಯಾಗೆ ಹಾರಿದ್ದಾರೆ. ಗುರುವಾರ ಬೆಳಗ್ಗೆ ಭಾರತ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದ್ದು, ಟೀಂ ಇಂಡಿಯಾ ತಂಡದ ಸದಸ್ಯರು ಶುಕ್ರವಾರ ಮುಂಜಾನೆ ಆಸ್ಟ್ರೇಲಿಯಾದ ಪರ್ತ್‌ಗೆ ಆಗಮಿಸಿದ್ದಾರೆ. ಆ ಬಳಿಕ ಪರ್ತ್‌ನ ವಾಕಾ ಮೈದಾನದಲ್ಲಿ ಭಾರತ ತಂಡವೂ ಈ ಬಾರಿಯ ವಿಶ್ವಕಪ್ ಅಭಿಯಾನದ ಮುನ್ನ ಅಬ್ಯಾಸದಲ್ಲಿ ತೊಡಗಿಕೊಂಡಿದೆ. ಇದರ ಫೋಟೋವನ್ನು ಬಿಸಿಸಿಐ ಹಂಚಿಕೊಂಡಿದೆ.


ಟೀಮ್ ಇಂಡಿಯಾದ ತರಬೇತಿ ಅವಧಿ ಆರಂಭ:


ಪರ್ತ್‌ಗೆ ಆಗಮಿಸಿದ ನಂತರ ಟೀಂ ಇಂಡಿಯಾ ವಾಕಾ ಮೈದಾನಕ್ಕೆ ಪ್ರವೇಶಿಸಿತು. ಇಲ್ಲಿ ಟೀಂ ಇಂಡಿಯಾದ ಮೊದಲ ತರಬೇತಿ ಸೆಷನ್ ನಡೆಯಿತು. ಅಕ್ಟೋಬರ್ 23 ರಂದು ಭಾರತ ತಂಡದ ವಿಶ್ವಕಪ್ ಅಭಿಯಾನ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾ ಪರ್ತ್‌ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಮೊದಲ ಅಭ್ಯಾಸ ಪಂದ್ಯ ಅಕ್ಟೋಬರ್ 17 ರಂದು ಮತ್ತು ಎರಡನೇ ಅಭ್ಯಾಸ ಅಕ್ಟೋಬರ್ 19 ರಂದು ನಡೆಯಲಿದೆ.ಅಕ್ಟೋಬರ್ 23 ರಂದು ಗ್ರ್ಯಾಂಡ್ ಮ್ಯಾಚ್:


ಟೀಂ ಇಂಡಿಯಾ ವಿಶ್ವಕಪ್ ಅಭಿಯಾನದ ಆರಂಭಿಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಲಿದೆ. ಕಳೆದ ವರ್ಷ, ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಸೋಲಿಸಿದ್ದು ಪಾಕಿಸ್ತಾನ. ಆದರೆ ಈ ಬಾರಿ ಆ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಭಾರತ ಸಿದ್ಧವಾಗಿದೆ. ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಮುಖ್ಯವಾಗಿ, ಸುಮಾರು 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿರುವ ಎಂಸಿಜಿಯಲ್ಲಿ ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಒಂದು ತಿಂಗಳು ಮುಂಚಿತವಾಗಿ ಮಾರಾಟವಾಗಿವೆ. ಹೀಗಾಗಿ ಈ ಅಮೋಘ ಪಂದ್ಯದ ವೇಳೆ ಎರಡೂ ತಂಡಗಳಿಗೆ ಮೈದಾನದಲ್ಲಿ ಅಭಿಮಾನಿಗಳಿಂದ ಉತ್ತಮ ಬೆಂಬಲ ಸಿಗಲಿದೆ.


ಇದನ್ನೂ ಓದಿ: Virat Kohli: ವಿರಾಟ್ ಕೈಯಲ್ಲಿ ದುಬಾರಿ ವಾಚ್, ಕೊಹ್ಲಿ ಒಮ್ಮೆ ಹೇರ್​ ಕಟ್ ಮಾಡೋ ದುಡ್ಡಲ್ಲಿ ಸ್ಪ್ಲೆಂಡರ್ ಬೈಕೇ ಕೊಳ್ಬೋದಿತ್ತಂತೆ!


ಬುಮ್ರಾ ಬದಲು ಯಾರಿಗೆ ಅವಕಾಶ?:


ಏತನ್ಮಧ್ಯೆ, ಟೀಂ ಇಂಡಿಯಾ 15 ಆಟಗಾರರ ಬದಲಿಗೆ 14 ಆಟಗಾರರೊಂದಿಗೆ ಆಸ್ಟ್ರೇಲಿಯಾ ತಲುಪಿದೆ. ಅದೇ ಸಮಯದಲ್ಲಿ, ಜಸ್ಪ್ರೀತ್ ಬುಮ್ರಾ ಅವರ ಗಾಯದ ಸಮಸ್ಯೆಯಿಂದ ಸಂಪೂರ್ನ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಅವರಿಲ್ಲದೇ ಭಾರತದ ಆಟಗಾರರು ಆಸ್ಟ್ರೇಲಿಯಾ ಪ್ರವೇಶಿಸಿದ್ದಾರೆ. 15ನೇ ಆಟಗಾರನನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಬಿಸಿಸಿಐ ಹೇಳಿದೆ. ಅದಕ್ಕಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ದೀಪಕ್ ಚಹಾರ್ ಚರ್ಚೆಯಲ್ಲಿದ್ದಾರೆ.


ಇದನ್ನೂ ಓದಿ: Shubman Gill: ಏಕದಿನ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಶುಭಮನ್ ಗಿಲ್, ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್


ಟಿ20 ವಿಶ್ವಕಪ್‌ಗೆ ಭಾರತ ತಂಡ:


ರೋಹಿತ್ ಶರ್ಮಾ (ಸಿ), ಕೆಎಲ್ ರಾಹುಲ್ (ವಿಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (ಡಬ್ಲ್ಯುಕೆ), ದಿನೇಶ್ ಕಾರ್ತಿಕ್ (ಡಬ್ಲ್ಯುಕೆ), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ವೈ ಚಾಹಲ್, ಅಕ್ಷರ್ ಪಟೇಲ್, ಬಿ. ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.


ಸ್ಟ್ಯಾಂಡ್-ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

Published by:shrikrishna bhat
First published: