• Home
  • »
  • News
  • »
  • sports
  • »
  • Vinesh Phogat: WFI ಅಧ್ಯಕ್ಷನಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ, ರಾಜೀನಾಮೆಗೆ ಮುಂದಾದ ಬ್ರಿಜ್ ಭೂಷಣ್

Vinesh Phogat: WFI ಅಧ್ಯಕ್ಷನಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ, ರಾಜೀನಾಮೆಗೆ ಮುಂದಾದ ಬ್ರಿಜ್ ಭೂಷಣ್

ವಿನೇಶಾ ಫೋಗಟ್

ವಿನೇಶಾ ಫೋಗಟ್

ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಭಾರತೀಯ ಕುಸ್ತಿ ಪೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶಾ ಫೋಗಟ್ ಅವರು ಈ ಗಂಭೀರ ಆರೋಪ ಮಾಡಿದ್ದಾರೆ.

  • News18 Kannada
  • 3-MIN READ
  • Last Updated :
  • New Delhi, India
  • Share this:

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ, (WFI) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Bhrij Bhushan Singh) ವಿರುದ್ಧ ಮಹಿಳಾ ಕುಸ್ತಿಪಟುಗಳ (Wrestler) ಮೇಲೆ ಲೈಂಗಿಕ ಶೋಷಣೆ  ನಡೆಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಒಲಿಂಪಿಯನ್ ಕುಸ್ತಿಪಟು ವಿನೇಶಾ ಫೋಗಟ್ (Vinesh Phogat) ಅವರು ಈ ಗಂಭೀರ ಆರೋಪ ಮಾಡಿದ್ದು, ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಶೋಷಣೆಯ ವಿರುದ್ಧ ಒಂದಾಗಿರುವ ಕುಸ್ತಿ ಪಟುಗಳು ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಗೆ ಕುಳಿತಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಧರಣಿ ನಿರತರು ಆಗ್ರಹಿಸಿದ್ದಾರೆ.


ಬ್ರಿಜ್ ಭೂಷಣ್ ರಾಜೀನಾಮೆ:


ಕುಸ್ತಿಪಟುಗಳ ಆರೋಪದ ಹಿನ್ನೆಲೆಯಲ್ಲಿ ಭಾರತದ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಜನವರಿ 22 ರಂದು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ವರದಿಯಾಗಿದೆ. ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಹಲವಾರು ಕುಸ್ತಿಪಟುಗಳು ಜನವರಿ 18 ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಅಧ್ಯಕ್ಷರು ಮತ್ತು ಕುಸ್ತಿ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದರು.


ಏನಿದು ಆರೋಪ?


2021ರ ಟೋಕಿಯೋ ಒಲಿಂಪಿಕ್ ಕ್ರೀಡಾಕೂಟದ ನಂತರ ಕುಸ್ತಿ ಫೆಡರೇಶನ್‌ (ಡಬ್ಲ್ಯೂಎಫ್‌ಐ) ಜೊತೆ ಭಿನ್ನಾಭಿಪ್ರಾಯ ಹೊಂದಿರುವ ಏಷ್ಯನ್ ಗೇಮ್ಸ್ ಚಾಂಪಿಯನ್ ಕುಸ್ತಿಪಟು ವಿನೇಶಾ ಫೋಗಟ್ ಅವರು, ಕುಸ್ತಿ ಒಕ್ಕೂಟ ತನೆಗೆ ಮಾನಸಿಕ ಕಿರುಕುಳ ನೀಡಿರುವುದು ಮಾತ್ರವಲ್ಲದೇ, ಹಲವು ಮಹಿಳಾ ಕುಸ್ತಿಪಟುಗಳಿಗೆ ಕುಸ್ತಿ ಪೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಲಖನೌದಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ತರಬೇತಿ ಶಿಬಿರದಲ್ಲಿ ಕೂಡ ಕೆಲವು ತರಬೇತುದಾರರು ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಫೆಡರೇಶನ್ ಅಧ್ಯಕ್ಷರ ಮಾತನ್ನು ಪಾಲಿಸುವ ಕೆಲವು ಮಹಿಳಾ ಕುಸ್ತಿಪಟುಗಳು ಕೂಡ ಶಿಬಿರದಲ್ಲಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: Dasara Wrestling: ಹೊನಲು ಬೆಳಕಿನ ಕುಸ್ತಿ ಪಂದ್ಯ, ದಸರಾ ದಂಗಲ್ ಗೆದ್ದು ಬೀಗಿದ ಜಗಜಟ್ಟಿ ಯಾರು?


ಇನ್ನು ವಿನೇಶಾ ಫೋಗಟ್ ಅವರು ‘ತಾನು ಎಂದಿಗೂ ಲೈಂಗಿಕ ಶೋಷಣೆ ಅನುಭವಿಸಿಲ್ಲ’ ಎಂದು ಹೇಳಿದ್ದು, ಆದರೆ ಈ ಪ್ರತಿಭಟನೆಯಲ್ಲಿ ಸಂತ್ರಸ್ತರೊಬ್ಬರು ಭಾಗಿಯಾಗಿದ್ದಾರೆ. ಹೀಗಾಗಿ ಲೈಂಗಿಕ ಶೋಷಣೆ ಅನುಭವಿಸಿರುವ ಸಂತ್ರಸ್ತ ಕುಸ್ತಿಪಟುಗಳ ಜೊತೆ ನಿಲ್ಲುವುದಾಗಿ ವಿನೇಶಾ ಅವರು ಹೇಳಿದ್ದಾರೆ. ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಲೈಂಗಿಕ ಶೋಷಣೆಯ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸ್ಟಾರ್‌ ಕುಸ್ತಿಪಟುಗಳಾದ ವಿನೇಶಾ ಫೋಗಟ್, ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ಸುಮಿತ್ ಮಲಿಕ್ ಸೇರಿದಂತೆ ಇನ್ನಿತರ ಕುಸ್ತಿಪಟುಗಳು ಭಾಗಿಯಾಗಿದ್ದಾರೆ.


ಅಮಿತ್ ಶಾರನ್ನು ಭೇಟಿಯಾಗಿದ್ದ ಕುಸ್ತಿಪಟುಗಳು


ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪುಟುಗಳ ಮೇಲೆ ನಡೆಸುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ತಿಳಿಯುತ್ತಿದ್ದಂತೆ ವಿಚಲಿತರಾದ ವಿನೇಶಾ ಫೋಗಟ್ ಅವರು ಟೋಕಿಯೋ ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಅವರೊಂದಿಗೆ ಮೂರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಈ ಸಮಸ್ಯೆಗಳ ಕುರಿತು ಚರ್ಚಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಜರಂಗ್ ಪೂನಿಯಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿಮಗೆ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಭಾರತೀಯ ಕುಸ್ತಿಯಲ್ಲಿ ಸದ್ಯ ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ನಾವು ಮತ್ತೊಂದು ಕುಸ್ತಿ ಆಡಬೇಕಾಗಿದೆ ಎಂದು ಪೂನಿಯಾ ಹೇಳಿದ್ದಾರೆ.




ವಿವರಣೆ ಕೇಳಿದ ಕ್ರೀಡಾ ಸಚಿವಾಲಯ


ಲೈಂಗಿಕ ಶೋಷಣೆಯ ವಿರುದ್ಧ ಕುಸ್ತಿಪಟುಗಳು ಬೀದಿಗಿಳಿದ ಬೆನ್ನಲ್ಲೇ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್‌ಐನಿಂದ ವಿವರಣೆ ಕೇಳಿದ್ದು, ಈ ಗಂಭೀರ ಆರೋಪದ ಕುರಿತು ಮುಂದಿನ 72 ಗಂಟೆಗಳ ಒಳಗೆ ಉತ್ತರವನ್ನು ನೀಡಬೇಕು ಎಂದು ನಿರ್ದೇಶಿಸಿದೆ. ಒಂದು ವೇಳೆ 72 ಗಂಟೆಗಳ ಒಳಗೆ ಉತ್ತರ ನೀಡಲು ವಿಫಲವಾದರೆ ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ 2011ರ ನಿಬಂಧನೆ ಪ್ರಕಾರ ಕುಸ್ತಿ ಫೆಡರೇಶನ್ ವಿರುದ್ಧ ಕ್ರೀಡಾ ಸಚಿವಾಲಯವು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.

Published by:Avinash K
First published: