Thomas Cup 2022: ಥಾಮಸ್ ಕಪ್ ಗೆದ್ದ ಭಾರತ! ಪುರುಷರ ಬ್ಯಾಡ್ಮಿಂಟನ್ ತಂಡದ ವಿಜಯ ಪತಾಕೆ
ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಥಾಮಸ್ ಮತ್ತು ಉಬರ್ ಕಪ್ನ ಫೈನಲ್ ತಲುಪಿರಲಿಲ್ಲ. ಇದೇ ಮೊದಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡ ಅಮೋಘ ಸಾಧನೆ ಮಾಡಿದೆ.
ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡ ಇತಿಹಾಸ ಸೃಷ್ಟಿಸಿದೆ. ಭಾನುವಾರ ಥಾಯ್ಲೆಂಡ್ನ ಬ್ಯಾಂಕಾಕ್ನಲ್ಲಿ ನಡೆದ ಪ್ರತಿಷ್ಠಿತ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ (Thomas Cup 2022) ಫೈನಲ್ನಲ್ಲಿ ವೀರೋಚಿತ ಪ್ರಯತ್ನ ನಡೆಸಿದ (Thomas Cup Final Match Result) ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ (Indian Men's Badminton Team Beat Indonesia) ವಿಜಯದ ಪತಾಕೆ ಹಾರಿಸಿದ್ದಾರೆ. ಇದೇ ಮೊದಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡ ಅಮೋಘ ಸಾಧನೆ ಮಾಡಿದೆ.
ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಥಾಮಸ್ ಮತ್ತು ಉಬರ್ ಕಪ್ನ ಫೈನಲ್ ತಲುಪಿರಲಿಲ್ಲ. ಆದರೆ ಭಾರತೀಯ ಪುರುಷರು ಈ ಮಿತಿಯನ್ನು ಮುರಿದದ್ದು ಮಾತ್ರವಲ್ಲದೆ ಒಂದು ಹೆಜ್ಜೆ ಮುಂದೆ ಹೋಗಿ ಈ ಪ್ರಶಸ್ತಿ ಗೆದ್ದ 6 ದೇಶವಾಗಿ ಚೀನಾ, ಇಂಡೋನೇಷ್ಯಾ, ಜಪಾನ್, ಡೆನ್ಮಾರ್ಕ್ ಮಲೇಷ್ಯಾ ಸಾಲಿಗೆ ಸೇರ್ಪಡೆಗೊಂಡಿದೆ.
ಶುಭಾಶಯಗಳ ಮಹಾಪೂರ ಭಾರತೀಯ ಬ್ಯಾಡ್ಮಿಂಟನ್ ತಂಡದ ಈ ಮಹತ್ವದ ಸಾಧನೆಗೆ ದೇಶದ ಹಲವು ಪ್ರಮುಖ ವ್ಯಕ್ತಿಗಳು ಶುಭಹಾರೈಸಿದ್ದಾರೆ.
ಥಾಮಸ್ ಕಪ್ 2022 ರ ವಿಜಯ ಗಳಿಸಿದ ಭಾರತೀಯ ಬ್ಯಾಡ್ಮಿಂಟನ್ ತಂಡವನ್ನು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಒಲಿಂಪಿಕ್ ಪದಕ ವಿಜೇತೆ ಮತ್ತು ಶಟ್ಲರ್ ಸೈನಾ ನೆಹ್ವಾಲ್, ವಿಶ್ವಕಪ್ ವಿಜೇತ ಹರ್ಭಜನ್ ಸಿಂಗ್, ವೇಟ್ಲಿಫ್ಟರ್ ಮತ್ತು ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಸೇರಿದಂತೆ ಅನೇಕ ಪ್ರಮುಖ ತಾರೆಯರು ಅಭಿನಂದನೆ ಸಲ್ಲಿಸಿದ್ದಾರೆ.
ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಲಿ: ಪ್ರಧಾನಿ ನರೇಂದ್ರ ಮೋದಿ ಥಾಮಸ್ ಕಪ್ನಲ್ಲಿ ಭಾರತದ ಅತ್ಯುತ್ತಮ ಸಾಧನೆಯನ್ನು ಶ್ಲಾಘಿಸಿ ಇಡೀ ರಾಷ್ಟ್ರದ ಸಂತೋಷವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ ತಂಡದ ಎಲ್ಲರ ಶ್ರಮವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ ತಂಡದ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ. ತಂಡದ ಪ್ರದರ್ಶನವು ಭವಿಷ್ಯದ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.
The Indian badminton team has scripted history! The entire nation is elated by India winning the Thomas Cup! Congratulations to our accomplished team and best wishes to them for their future endeavours. This win will motivate so many upcoming sportspersons.
Pure show of grit and determination & India becomes the #ThomasCup champion for the 1️⃣st time in style, beating 14 times champions Indonesia 🇮🇩 3-0 in the finals 😎
ಐತಿಹಾಸಿಕ ವಿಜಯದ ನಂತರ ವಿಜೇತ ತಂಡವನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ₹ 1 ಕೋಟಿ ಬಹುಮಾನವನ್ನು ಘೋಷಿಸಿದ್ದಾರೆ.
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ