IND vs PAK Asia Cup 2022: ಇಂದು ಭಾರತ-ಪಾಕ್ ಪಂದ್ಯ​, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್ 11

IND vs PAK: ಇಂದು ಏಷ್ಯಾ ಕಪ್​ 2022ರ ಸೂಪರ್ 4 ಹಂತದ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಲಿವೆ. ಸರಿಯಾಗಿ ಒಂದು ವಾರದ ಅಂತರದಲ್ಲಿ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿದೆ.

IND vs PAK

IND vs PAK

  • Share this:
ಏಷ್ಯಾ ಕಪ್​ 2022ರ (Asia Cup 2022) ಲೀಗ್​ ಹಂತ ಈಗಾಗಲೇ ಮುಗಿದಿದೆ. ಭಾರತ ಸೇರಿದಂತೆ ಟೂರ್ನಿಯ ಪ್ರಮುಖ 4 ತಂಡಗಳಾದ ಪಾಕಿಸ್ತಾನ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಸೂಪರ್ 4 ಹಂತಕ್ಕೆ ತಲುಪಿದೆ. ಇದೀಗ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಿದ್ದ ಭಾರತ ಮತ್ತು ಪಾಕಿಸ್ತಾನ (IND vs PAK) ತಂಡಗಳು ಮತ್ತೊಮ್ಮೆ ಸೆಣಸಾಡಲಿವೆ. ನಿಖರವಾಗಿ ಒಂದು ವಾರದ ನಂತರ, ಈ ಎರಡು ತಂಡಗಳು ಮತ್ತೊಮ್ಮೆ ಇದೇ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಇಂದು ಏಷ್ಯಾ ಕಪ್​ನ (Asia Cup) ಸೂಪರ್ 4 ಹಂತದ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಲಿವೆ. ಕಳೆದ ಬಾರಿಯ ಸೋಲಿಗೆ ಪ್ರತ್ಯುತ್ತರವಾಗಿ ಕಂಬ್ಯಾಕ್ ಮಾಡಲು ಪಾಕ್​ ಸಿದ್ಧವಾಗಿದ್ದರೆ, ಇತ್ತ ಟೀಂ ಇಂಡಿಯಾ (Team India) ತನ್ನ ಹಳೆಯ ಲಯದಲ್ಲಿಯೇ ಗೆಲುವನ್ನು ಮುಂದುವರೆಸಿಕೊಂಡು ಹೋಗಲು ಸಿದ್ಧವಾಗಿದೆ. ಹಾಗಿದ್ದರೆ ಉಭಯ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂದು ತಿಳಿದುಕೊಳ್ಳೋಣ ಬನ್ನಿ.

ಪಂದ್ಯದ ವಿವರ:

ಏಷ್ಯಾ ಕಪ್​ 2022ರ ಸೂಪರ್​ 4 ಹಂತದ 2ನೇ ಭಾರತ ಮತ್ತು ಪಾಕ್​ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಟಾಸ್​ ಮತ್ತು 7:30 ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ಹಾಟ್‌ಸ್ಟಾರ್ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಪಿಚ್​ ರಿಪೋರ್ಟ್:

ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿನ ವಿಕೆಟ್ ಬ್ಯಾಟಿಂಗ್‌ಗೆ ಉತ್ತಮವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಬೌಲರ್‌ಗಳು ಹೊಸ ಚೆಂಡಿನೊಂದಿಗೆ ಹೆಚ್ಚಿನ ಸಹಾಯವನ್ನು ಪಡೆಯಬಹುದು. ಟಾಸ್ ಗೆದ್ದ ನಾಯಕನು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಖಚಿತವಾಗಿದೆ.

ಇದನ್ನೂ ಓದಿ: IND vs PAK Asia Cup 2022: ಪಾಕ್​ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್​ 11ನಲ್ಲಿ ಮಹತ್ವದ ಬದಲಾವಣೆ?

ಅಲ್ಲದೇ ಟಾಸ್​ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಏಕೆಂದರೆ ಕಳೆದ ಪಂದ್ಯದಲ್ಲಿಯೂ ಟಾಸ್​ ಗೆದ್ದ ತಂಡವೇ ಜಯ ಗಳಿಸಿದೆ. ಜೊತೆಗೆ ಟಾಸ್​ ಗೆದ್ದ ನಾಯಕ ಚೇಸಿಂಗ್ ಆಯ್ಕೆ ಮಾಡುವುದರಿಂದ ಹೆಚ್ಚು ಲಾಭವಾಗಲಿದೆ. ಪ್ರಮುಖವಾಗಿ ಇಂದು ಯಾವುದೇ ಮಳೆಯ ಮುನ್ಸೂಚನೆ ಇಲ್ಲವೆಂದು ಹವಾಮಾನ ಇಲಾಖೆ ತಿಳಿಸಿದ್ದು, ಪಂದ್ಯವು ಸಂಪೂರ್ಣವಾಗಿ ನಡೆಯಲಿದೆ. ಕಳೆದ ಪಂದ್ಯ ನಡೆದ ಮೈದಾನದಲ್ಲಯೇ ಇಂದಿನ ಪಂದ್ಯ ಸಹ ನಡೆಯಲಿದ್ದು, ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

IND vs PAK ಹೆಡ್​ ಟು ಹೆಡ್​:

ಇನ್ನು, ಉಭಯ ತಂಡಗಳ ಬಲಾಬಲ ನೋಡುವುದಾದರೆ, ಏಷ್ಯಾ ಕಪ್​ ಈ ಬಾರಿ ಟಿ20 ಮಾದರಿಯಲ್ಲಿ ನಡೆಯುತ್ತಿದೆ.  ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್​ನಲ್ಲಿ ಈವರೆಗೆ ಒಟ್ಟು 15 ಬಾರಿ ಮುಖಾಮುಖಿ ಆಗಿದೆ. ಈ ವೇಳೆ ಭಾರತ 9 ಬಾರಿ ಗೆದ್ದಿದೆ. ಪಾಕಿಸ್ತಾನ ಕೇವಲ 5 ಬಾರಿ ಗೆದ್ದಿದೆ. ಇದರ ನಡುವೆ ಒಂದು ಪಂದ್ಯ ರದ್ದಾಗಿತ್ತು. ಒಟ್ಟಾರೆಯಾಗಿ ಅಂಕಿಅಂಶಗಳ ಪ್ರಕಾರ ಭಾರತ ತಂಡ ಹೆಚ್ಚು ಬಲಿಷ್ಠವಾಗಿದೆ. ಆದರೆ ಪಾಕ್​ ಸಹ ಉತ್ತಮ ದಾಖಲೆ ಹೊಂದಿದ್ದು,  ಕಳೆದ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಸಲುವಾಗಿ ನಾಳೆ ಕಣಕ್ಕಿಳಿಯಲಿದೆ.

ಇದನ್ನೂ ಓದಿ: IND vs PAK Asia Cup 2022: ಟೀಂ ಇಂಡಿಯಾಗೆ ತಲೆನೋವಾದ ಪಾಕಿಸ್ತಾನದ ಈ 5 ಆಟಗಾರರು

IND vs PAK  ಸಂಭಾವ್ಯ ಪ್ಲೇಯಿಂಗ್ 11:

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್.

ಪಾಕಿಸ್ತಾನ ಸಂಭಾವ್ಯ ತಂಡ: ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಾನವಾಜ್ ದಹಾನಿ.
Published by:shrikrishna bhat
First published: