• Home
  • »
  • News
  • »
  • sports
  • »
  • IND vs SA: ಇಂದು ಭಾರತ-ಆಫ್ರಿಕಾ ಮೊದಲ ಟಿ20 ಪಂದ್ಯ, ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs SA: ಇಂದು ಭಾರತ-ಆಫ್ರಿಕಾ ಮೊದಲ ಟಿ20 ಪಂದ್ಯ, ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs SA

IND vs SA

IND vs SA: ಇಂದಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯು ಆರಂಭವಾಗಲಿದೆ. ಮೊದಲ ಪಂದ್ಯವು ತಿರುವನಂತಪುರ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಯಾವೆಲ್ಲಾ ಆಟಗಾರರು ಇಂದು ಕಣಕ್ಕಿಳಿಯಲಿದ್ದಾರೆ ಎಂದು ತಿಳಿಯೋಣ.

  • Share this:

ಆಸ್ಟ್ರೇಲಿಯಾ ವಿರುದ್ಧದ ಯಶಸ್ವಿ T20I ಸರಣಿಯ ನಂತರ, ಭಾರತವು ದಕ್ಷಿಣ ಆಫ್ರಿಕಾವನ್ನು ಮೂರು ಪಂದ್ಯಗಳ T20I ಸರಣಿಗೆ ಆತಿಥ್ಯ ವಹಿಸಲು ಸಿದ್ಧವಾಗಿದೆ. ಇಂದಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಮೊದಲ ಪಂದ್ಯವು ತಿರುವನಂತಪುರ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಟೀಂ ಇಂಡಿಯಾ ಮತ್ತು ಸೌತ್​ ಆಫ್ರಿಕಾ (South Africa) ತಂಡಗಳು ತಿರುವನಂತಪುರಗೆ ತಲುಪಿದೆ.  ಭಾರತ ಮತ್ತು ದಕ್ಷಿಣ ಆಫ್ರಿಕಾ ಈ ಕ್ಯಾಲೆಂಡರ್ ವರ್ಷದಲ್ಲಿ ಮೂರನೇ ಬಾರಿಗೆ ಎದುರಾಗಿದ್ದವು. ಎರಡು ತಂಡಗಳು ಮೊದಲು ಜನವರಿಯಲ್ಲಿ ಮತ್ತು ನಂತರ ಜೂನ್‌ನಲ್ಲಿ ಮುಖಾಮುಖಿಯಾಗಿದ್ದವು. ಹೀಗಾಗಿ ಇಂದಿನ ಪಂದ್ಯವು ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಉಭಯ ತಂಡಗಳ ಪ್ಲೇಯಿಂಗ್​ 11, ಹೆಡ್​ ಟು ಹೆಡ್​ ಎಲ್ಲದರ ಬಗ್ಗೆ ತಿಳಿಯೋಣ ಬನ್ನಿ.


ಪಂದ್ಯದ ವಿವರ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು  ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್​ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.


ಪಿಚ್​ ರಿಪೋರ್ಟ್:


ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಸ್ಟೇಡಿಯಂ 20-ಓವರ್ ಮಾದರಿಯಲ್ಲಿ ಕೇವಲ ಎರಡು ಪಂದ್ಯಗಳು ನಡೆದಿವೆ. ಕೊನೆಯ ಪಂದ್ಯವನ್ನು 2019 ರಲ್ಲಿ ನಡೆಯಿತು. ಇಲ್ಲಿ ಮೊದಲು ಬ್ಯಾಟ್ ಮಾಡುವ ತಂಡಕ್ಕೆ ಹೆಚ್ಚಿನ ನೆರವು ಸಿಗದಿರಬಹುದು. ಸುಮಾರು 170 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಗೆಲುವಿನ ಮೊತ್ತವಾಗಬಹುದು. ಟಾಸ್ ಗೆದ್ದ ನಾಯಕ ಚೇಸ್ ಮಾಡಲು ಯೋಚಿಸುವುದರಿಂದ ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳಬಹುದು.


ಇದನ್ನೂ ಓದಿ: Team India: ಬಿರಿಯಾನಿಗಾಗಿ ಹೋಟೆಲ್ ಸಿಬ್ಬಂದಿ ಜೊತೆ ಜಗಳವಾಡಿದ್ದ ಟೀಂ ಇಂಡಿಯಾ ಪ್ಲೇಯರ್ಸ್, ಅಷ್ಟಕ್ಕೂ ಆ ದಿನ ಏನಾಗಿತ್ತು?


ಗ್ರೀನ್ ಫೀಲ್ಡ್ ಸ್ಟೇಡಿಯಂ & IND vs SA ಹೆಡ್​ ಟು ಹೆಡ್​:


ಭಾರತ vs ನ್ಯೂಜಿಲೆಂಡ್: ನವೆಂಬರ್ 2017 - ಭಾರತ 6 ರನ್‌ಗಳಿಂದ ಗೆದ್ದಿತು
ಭಾರತ vs ವೆಸ್ಟ್ ಇಂಡೀಸ್: ಡಿಸೆಂಬರ್ 2019 - ವೆಸ್ಟ್ ಇಂಡೀಸ್ 8 ವಿಕೆಟ್‌ಗಳಿಂದ ಗೆದ್ದಿತು.


ಭಾರತ-ಆಫ್ರಿಕಾ ಒಟ್ಟು ಪಂದ್ಯ - 20
ಭಾರತದ ಗೆಲುವು - 11
ದಕ್ಷಿಣ ಆಫ್ರಿಕಾ ಗೆಲುವು - 08
NR- 1


ಆಫ್ರಿಕಾ ದಾಖಲೆಗೆ ಬ್ರೇಕ್​ ಹಾಕುತ್ತಾ ಟೀಂ ಇಂಡಿಯಾ?:


ದಕ್ಷಿಣ ಆಫ್ರಿಕಾ ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಐದು ಪಂದ್ಯಗಳ T20I ಸರಣಿಯನ್ನು ಆಡಿತ್ತು. ಬೆಂಗಳೂರಿನಲ್ಲಿ ನಡೆದಿದ್ದ ನಿರ್ಣಾಯಕ ಪಂದ್ಯ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಸರಣಿಯು 2-2ರಲ್ಲಿ ಕೊನೆಗೊಂಡಿತು. 2018 ರಿಂದ ತವರಿನಲ್ಲಿ ನಡೆದ T20I ದ್ವಿಪಕ್ಷೀಯ ಸರಣಿಯಲ್ಲಿ ಭಾರತವು ಇನ್ನೂ ದಕ್ಷಿಣ ಆಫ್ರಿಕಾವನ್ನು ಸೋಲಿಸಿಲ್ಲ.


ಇದನ್ನೂ ಓದಿ: Matthew Wade: 11 ತಿಂಗಳಲ್ಲಿ ಕೇವಲ 1 ಬಾರಿ ಔಟ್, ಕ್ಯಾನ್ಸರ್ ಗೆದ್ದವ ಇದೀಗ T20 ಕ್ರಿಕೆಟ್​ನ ಗ್ರೇಟ್​ ಫಿನಿಶರ್!


IND vs SA ಸಂಭಾವ್ಯ ತಂಡ:


ಭಾರತ ಸಂಭಾವ್ಯ ತಂಡ: ಕೆಎಲ್ ರಾಹುಲ್, ರೋಹಿತ್ ಶರ್ಮಾ (c), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್.


ದಕ್ಷಿಣ ಆಫ್ರಿಕಾ ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್(WK), ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್(ಸಿ), ಟ್ರಿಸ್ಟಾನ್ ಸ್ಟಬ್ಸ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ

Published by:shrikrishna bhat
First published: