ಐಪಿಎಲ್ (IPL) ಮುಗಿದ ಬಳಿಕ ಟೀಂ ಇಂಡಿಯಾ ತನ್ನ ಮೊದಲ ಅಂತಾರಾಷ್ಟ್ರೀಯ ಸರಣಿಯನ್ನು ದಕ್ಷಿಣ ಆಫ್ರಿಕಾ (South Africa) ವಿರುದ್ಧ ಆಡಲಿದೆ. ಇಂದಿನಿಂದ ಆರಂಭವಾಗುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ(IND vs SA) ಮುಖಾಮುಖಿಯಾಗಲಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ದೆಹಲಿಯಲ್ಲಿ ಆರಂಭವಾಗಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಪಂದ್ಯದ ಹಿಂದಿನ ದಿನ ಟೀಂ ಇಂಡಿಯಾಗೆ ದೊಡ್ಡ ಆಘಾತ ಉಂಟಾಗಿದೆ. ಭಾರತ ಕ್ರಿಕೆಟ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ರಾಹುಲ್ ಬದಲಿಗೆ ರಿಷಭ ಪಂತ್ (Rishabh Pant) ನಾಯಕನಾಗಿ ನೇಮಕಗೊಂಡಿದ್ದಾರೆ. ಹೀಗಾಗಿ ಈ ಸರಣಿಯನ್ನು ರಿಷಭ್ ಪಂತ್ ನಾಯಕತ್ವದಲ್ಲಿ ಮುನ್ನಡೆಯಲಿದೆ.
ಓಪನರ್ ಆಗಿ ಗಾಯಕ್ವಾಡ್ - ಕಿಶನ್:
ಕೆಎಲ್ ರಾಹುಲ್ ಸರಣಿಯಿಂದ ಔಟಾಗುವುದರೊಂದಿಗೆ ಟೀಂ ಇಂಡಿಯಾ ಆಡುವ 11ರ ಪಟ್ಟಿಯಲ್ಲಿ ಬದಲಾಗಿದೆ. ರಾಹುಲ್ ಭಾರತ ತಂಡದ ಭರವಸೆಯ ಆರಂಭಿಕ ಆಟಗಾರ. ಜೊತೆಗೆ ನಾಯಕ ಹಾಗೂ ಓಪನರ್ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದ್ದರಿಂದ ರಾಹುಲ್‌ಗೆ ಆರಂಭಿಕ ಜವಾಬ್ದಾರಿಯೂ ಹೆಚ್ಚಿತ್ತು. ಇದೀಗ ರಾಹುಲ್ ಬದಲಿಗೆ ರಿತುರಾಜ್ ಗಾಯಕ್ವಾಡ್ ಗೆ ಓಪನರ್ ಆಗಿ ಅವಕಾಶ ಸಿಗಲಿದೆ.
ಇನ್ನು, ರಾಹುಲ್ ಬದಲಿಗೆ ಆಡಲಿರುವ ಗಾಯಕ್ವಾಡ್ ಇದುವರೆಗೆ 3 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 13 ರನ್ ಸರಾಸರಿಯೊಂದಿಗೆ ಆಡಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಅವಕಾಶ ಸಿಕ್ಕಿಲ್ಲ. ಇದೀಗ ರಾಹುಲ್ ಅನುಪಸ್ಥಿತಿಯಲ್ಲಿ ಮೊದಲ ಬಾರಿಗೆ ಸಂಪೂರ್ಣ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿದೆ. ಯುವ ಜೋಡಿ ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ಸರಣಿಯಲ್ಲಿ ಭಾರತದ ಇನ್ನಿಂಗ್ಸ್ ತೆರೆಯಲಿದ್ದಾರೆ.
ಇದನ್ನೂ ಓದಿ: IND vs SA: ಟೀಂ ಇಂಡಿಯಾಗೆ ಬಿಗ್ ಶಾಕ್; T20 ಸರಣಿಯಿಂದ KL ರಾಹುಲ್ ಔಟ್!
ದಾಖಲೆಯ ಹೊಸ್ತಿಲಲ್ಲಿ ಟೀಂ ಇಂಡಿಯಾ:
ಇನ್ನು, ಭಾರತ ತಂಡ ಸತತ 12 ಟಿ20 ಪಂದ್ಯಗಳನ್ನು ಗೆದ್ದಿದ್ದು, ಈ ಮೂಲಕ ಅಫ್ಘಾನಿಸ್ತಾನ ತಂಡದೊಂದಿಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದೆ. ಆದರೆ ಇಂದಿನ ಪಂದ್ಯವನ್ನು ಟೀಂ ಇಂಡಿಯಾ ಗೆದ್ದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸತತ ಟಿ20 ಪಂದ್ಯಗಳನ್ನು ಗೆದ್ದ ವಿಶ್ವದಾಖಲೆ ಬರೆಯಲಿದೆ.
ಪಾಂಡ್ಯ ಮತ್ತು ಕಾರ್ತಿಕ್ ಕಂಬ್ಯಾಕ್:
ಈ ಸರಣಿಯಲ್ಲಿ ಮಿಂಚುವ ಮೂಲಕ ಅನೇಕ ಯುವ ಕ್ರಿಕೆಟಿಗರು ಮುಂಬರುವ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವ ನಿರೀಕ್ಷೆಯಲ್ಲಿದ್ದಾರೆ. ಏತನ್ಮಧ್ಯೆ, ಐಪಿಎಲ್ 2022 ರ ಋತುವಿನಲ್ಲಿ ಪಾದಾರ್ಪಣೆ ಮಾಡಿದ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಟಿ20 ವಿಶ್ವಕಪ್ ಬಳಿಕ ತಂಡದಿಂದ ಹೊರಗುಳಿದಿದ್ದ ಹಾರ್ದಿಕ್ ಈ ಸರಣಿಯೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರು ಎಂಟ್ರಿ ನೀಡಲಿದ್ದಾರೆ. ಇವರೊಂದಿಗೆ ದಿನೇಶ್ ಕಾರ್ತಿಕ್ ಸಹ ಮತ್ತೆ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡುತ್ತಿದ್ದಾರೆ.
ಇದನ್ನೂ ಓದಿ: Arjun Tendulkar: ತೆಂಡೂಲ್ಕರ್ ಹೆಸರನ್ನು ತೆಗೆದುಹಾಕಿ; ಅರ್ಜುನ್ ಕುರಿತು ಶಾಕಿಂಗ್ ಹೇಳಿಕೆ ನೀಡಿದ ಕಪಿಲ್ ದೇವ್
ಭಾರತ ಮತ್ತು ಆಫ್ರಿಕಾ ಸಂಭಾವ್ಯ ತಂಡ:
ಭಾರತ ತಂಡ: ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್.
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹರಾಜ್, ಐಡೆನ್ ಮರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಡ್ವೈನ್ ಪ್ರಿಟೋರಿಯಸ್, ಕಗಿಸೊ ರbಬಾಡ, ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ