ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ರಿಷಭ್ ಪಂತ್ ಇಂದು ಬೆಳಗ್ಗೆ ಅಪಘಾತಕ್ಕೀಡಾಗಿದ್ದಾರೆ. ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ (Dehradun) ಹೆದ್ದಾರಿಯಲ್ಲಿ ಪಂತ್ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಅವರಿಗೆ ಗಂಭೀರ ಗಾಯವಾಗಿದೆ. ಘಟನೆ ನಡೆದಾಗ ಪಂತ್ (Rishabh Pant) ರೂರ್ಕಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದರು. ಅಲ್ಲದೇ ತಾಯಿಗೆ ಸರ್ಪ್ರೈಸ್ ನೀಡುವ ಸಲುವಾಗಿ ಕಾರಿನಲ್ಲಿ ಒಬ್ಬರೇ ಮನೆಗೆ ಹೋಗುತ್ತಿದ್ದರು. ಅಪಘಾತದಲ್ಲಿ ಪಂತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ತಲೆ, ಬೆನ್ನು ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಸದ್ಯ ಅವರು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವತಃ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಪಂತ್ ಪರಿಸ್ಥಿತಿಯ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ಅಪಘಾತವಾದ ಬಳಿಕ ಪಂತ್ ಮಾತನಾಡಿರುವ ವಿಡಿಯೋ ಸಹ ಇದೀಗ ವೈರಲ್ ಆಗುತ್ತಿದ್ದು, ನೋಡುಗರ ಮನಸ್ಸು ಕರಗುವಂತಿದೆ.
ನಿದ್ರೆಗೆ ಜಾರಿದೆ ಎಂದ ಪಂತ್:
ರಿಷಬ್ ಪಂತ್ ಅವರ ಕಾರು ಮುಂಜಾನೆ 5:30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಚಿಕ್ಕನಿದ್ರೆಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸ್ವತಃ ಪಂತ್ ಹೇಳಿದ್ದಾರೆ. ಇದರ ಪರಿಣಾಮವಾಗಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ಸ್ವತಃ ಪಂತ್ ಅವರೇ ವೈದ್ಯರೊಂದಿಗೆ ಹೇಳಿಕೊಂಡಿದ್ದಾರೆ. ಅಪಘಾತದ ನಂತರ ಅವರ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಪಂತ್ ಕಿಟಕಿ ಒಡೆದು ಹೊರಬಂದರು ಮತ್ತು ಹರಿಯಾಣ ರೋಡ್ವೇಸ್ನ ಕಂಡಕ್ಟರ್ ಇದಕ್ಕೆ ಸಹಾಯ ಮಾಡಿದರು ಎಂದು ಹೇಳಿಕೊಂಡಿದ್ದಾರೆ.
#RishabhPant accident : first video after accident...Pant seen bleeding #GetwellSoon #Roorkee pic.twitter.com/Kr2jplLpd6
— Sonu Kanojia (@NNsonukanojia) December 30, 2022
ಪಂತ್ ಚಿಕಿತ್ಸೆಗೆ ಎಲ್ಲಾ ಸೌಲಭ್ಯ ನಿಡಲಾಗುತ್ತದೆ:
ರಿಷಭ್ ಪಂತ್ ಅಪಘಾತದ ಬಗ್ಗೆ ಬಿಸಿಸಿಐ ಅಪ್ಡೇಟ್ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದೆ. ಅವರಿಗೆ ಮಂಡಳಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಚಿಕಿತ್ಸೆಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುವುದು ಬಿಸಿಸಿಐನ ಜವಾಬ್ದಾರಿಯಾಗಿದೆ. ಈ ಕಷ್ಟದ ಸಮಯದಿಂದ ಪಂತ್ ಬೇಗ ಹೊರಬರಬೇಕು. ಇದಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಬಿಸಿಸಿಐ ತಿಳಿಸಿದೆ. ಅಲ್ಲದೇ ಪಂತ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Rishabh Pant Accident: ರಿಷಭ್ ಪಂತ್ ಅಪಘಾತದ ಭಯಾನಕ ವಿಡಿಯೋ, ರಸ್ತೆ ಮಧ್ಯೆ ಪ್ರಜ್ಞಾಹೀನವಾಗಿ ಬಿದ್ದಿದ್ದ ಪಂತ್!
ಮಹತ್ವದ ಟೂರ್ನಿಗಳಿಂದ ಪಂತ್ ಔಟ್?:
ಪಂತ್ ಮೊಣಕಾಲಿನ ಇಂಜುರಿಗೆ ಒಳಗಾಗಿದ್ದು, ಲಂಕಾ ಸರಣಿಯಿಂದ ಹೀಗಾಗಿ ದೂರ ಉಳಿಸಿದ್ದರು. ಇದರಿಂದಾಗಿ ಅವರು ಮುಂದಿನ ನ್ಯೂಜಿಲ್ಯಾಂಡ್ ಸರಣಿಗೆ ಮರಳಲಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಇದೀಗ ಅವರ ಕಾಲು ಮುರಿತವಾಗಿರುವುದರಿಂದ ಅವರ ಈ ವರ್ಷದ ಕ್ರಿಕೆಟ್ ವೃತ್ತಿ ಜೀವನದ ಬಗ್ಗೆ ಅನುಮಾನಗಳು ಮೂಡಿದೆ. ಅಲ್ಲದೇ ಈ ಬಾರಿಯ ಏಕದಿನ ವಿಶ್ವಕಪ್ಗೆ ಮರಳುತ್ತಾರೆಯೇ ಎಂಬ ಪ್ರಶ್ನೆ ಮೂಡದೆ.
ಪಂತ್ ಕುಟುಂಬಕ್ಕೆ ಧೈರ್ಯ ತುಂಬಿದ ಜಯ್ ಶಾ:
ಇದಲ್ಲದೆ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಟ್ವೀಟ್ ಮಾಡಿದ್ದಾರೆ, 'ರಿಷಭ್ ಪಂತ್ ಅವರು ಚೇತರಿಕೆಯ ಹಾದಿಯಲ್ಲಿ ಹೋರಾಡುತ್ತಿರುವಾಗ ನನ್ನ ಪ್ರಾರ್ಥನೆಗಳು ಅವರೊಂದಿಗೆ ಇವೆ. ನಾನು ಅವರ ಕುಟುಂಬ ಮತ್ತು ವೈದ್ಯರೊಂದಿಗೆ ಮಾತನಾಡಿದ್ದೇನೆ. ರಿಷಭ್ ಸ್ಥಿರವಾಗಿದ್ದು, ಸ್ಕ್ಯಾನ್ ಮಾಡಲಾಗುತ್ತಿದೆ. ನಾವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತೇವೆ‘ ಎಂದು ಅವರು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ