ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್; ಟೀಂ ಇಂಡಿಯಾ ನಾಯಕನಿಗೆ ಎಷ್ಟನೇ ಸ್ಥಾನ?

news18
Updated:August 23, 2018, 2:31 PM IST
ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್; ಟೀಂ ಇಂಡಿಯಾ ನಾಯಕನಿಗೆ ಎಷ್ಟನೇ ಸ್ಥಾನ?
news18
Updated: August 23, 2018, 2:31 PM IST
ನ್ಯೂಸ್ 18 ಕನ್ನಡ

ಐಸಿಸಿ ತನ್ನ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು ಬ್ಯಾಟಿಂಗ್​ನಲ್ಲಿ 2ನೇ ಸ್ಥಾನಕ್ಕೆ ಕುಸಿದಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೆ ನಂಬರ್ 1 ಪಟ್ಟವನ್ನು ಅಲಂಕರಿಸಿದ್ದಾರೆ.

ನಿನ್ನೆಯಷ್ಟೇ(ಆ. 22) ಮುಕ್ತಾಯಗೊಂಡ ಭಾರತ-ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು, ಕೊಹ್ಲಿ ಮೊದಲ ಇನ್ನಿಂಗ್ಸ್​ನಲ್ಲಿ 97 ಹಾಗೂ ಎರಡನೇ ಇನ್ನಿಂಗ್ಸ್​​ನಲ್ಲಿ 103 ರನ್​ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು.

 ಕೆಲ ದಿನಗಳ ಹಿಂದೆ ಐಸಿಸಿ ಬಿಡುಗಡೆಮಾಡಿದ ಟೆಸ್ಟ್​ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ಮೊದಲನೇ ಸ್ಥಾನದಿಂದ ಕೆಳಗಿಳಿದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರು ನಂವರ್ 1 ಸ್ಥಾನ ಅಲಂಕರಿಸಿದ್ದರು. ಆದರೆ ಸದ್ಯ ಐಸಿಸಿ ನೂತನ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಗೊಳಿಸಿದ್ದು 937 ಪಾಯಿಂಟ್​​ನೊಂದಿಗೆ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
First published:August 23, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...