ವಿರಾಟ್ ಕೊಹ್ಲಿ ಖಾತೆಗೆ ಮತ್ತೊಂದು ದಾಖಲೆ ಸೇರ್ಪಡೆ

news18
Updated:August 31, 2018, 6:26 PM IST
ವಿರಾಟ್ ಕೊಹ್ಲಿ ಖಾತೆಗೆ ಮತ್ತೊಂದು ದಾಖಲೆ ಸೇರ್ಪಡೆ
news18
Updated: August 31, 2018, 6:26 PM IST
ನ್ಯೂಸ್ 18 ಕನ್ನಡ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್​​ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನೂತನ ದಾಖಲೆ ಮಾಡಿದ್ದಾರೆ. ಟೆಸ್ಟ್​​ ಕ್ರಿಕೆಟ್​​​ನಲ್ಲಿ ವೇಗವಾಗಿ 6 ಸಾವಿರ ರನ್ ಪೂರೈಸಿದ ಎರಡನೇ ಆಟಗಾರ ಸದ್ಯ ಕೊಹ್ಲಿ ಆಗಿದ್ದಾರೆ.

ವಿರಾಟ್ ಕೊಹ್ಲಿ ಅವರು ಕ್ರೀಸ್​ಗೆ ಬಂದು 9 ರನ್​ ಗಳಿಸಿದಾಗ ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರತ ತಂಡದ ಪರ ಅತಿ ವೇಗವಾಗಿ 6 ಸಾವಿರ ರನ್ ಪೂರೈಸಿದ ಎರಡನೇ ಆಟಗಾರ ಎಂಬ ಶ್ರೇಯಕ್ಕೆ ಕೊಹ್ಲಿ ಪಾತ್ರರಾಗಿದ್ದಾರೆ. ಈ ಮೂಲಕ ಸುನಿಲ್ ಗವಾಸ್ಕರ್ ಬಳಿಕ ವೇಗವಾಗಿ 6 ಸಾವಿರ ರನ್ ಬಾರಿಸಿದ ಸಾಧನೆ ಕೊಹ್ಲಿ ಹೆಸರಿನಲ್ಲಿದೆ. ಗವಾಸ್ಕರ್ 117 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರೆ, ಕೊಹ್ಲಿ 119 ಇನ್ನಿಂಗ್ಸ್​ಗಳಲ್ಲಿ 6 ಸಾವಿರ ರನ್ ಬಾರಿಸಿದ್ದಾರೆ.68 ಇನ್ನಿಂಗ್ಸ್​​ನಲ್ಲಿ ಅತಿ ವೇಗವಾಗಿ 6 ಸಾವಿರ ರನ್ ಪೂರೈಸಿದ ದಾಖಲೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೊನಾಲ್ಡ್​ ಬ್ರಾಡ್ಮನ್ ಅವರ ಹೆಸರಿನಲ್ಲಿದೆ.
First published:August 31, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ