ಟೆಸ್ಟ್​​ ಕ್ರಿಕೆಟ್​ನಲ್ಲಿ ನೂತನ ದಾಖಲೆ; ಕೊಹ್ಲಿ ಈಗ ನಂ 1 ಬ್ಯಾಟ್ಸ್​ಮನ್​​​​

news18
Updated:August 5, 2018, 1:28 PM IST
ಟೆಸ್ಟ್​​ ಕ್ರಿಕೆಟ್​ನಲ್ಲಿ ನೂತನ ದಾಖಲೆ; ಕೊಹ್ಲಿ ಈಗ ನಂ 1 ಬ್ಯಾಟ್ಸ್​ಮನ್​​​​
news18
Updated: August 5, 2018, 1:28 PM IST
ನ್ಯೂಸ್ 18 ಕನ್ನಡ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆಯಾದರು ನಾಯಕ ವಿರಾಟ್ ಕೊಹ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್​​ನಲ್ಲಿ ನಂಬರ್ 1 ಬ್ಯಾಟ್ಸ್​ಮನ್​​​​ ಪಟ್ಟವನ್ನು ತನ್ನದಾಗಿಸಿದ್ದ ಆಸ್ಟ್ರೇಲಿಯಾ ತಂಡದ ಆಟಗಾರ ಸ್ವೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಕೊಹ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ 32 ತಿಂಗಳಿಂದ ನಂಬರ್ 1 ಸ್ಥಾನ ಅಲಂಕರಿಸಿದ್ದ ಸ್ಮಿತ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಅಲ್ಲದೆ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಭಾರತದ ಏಳನೇ ಬ್ಯಾಟ್ಸ್​ಮನ್​​ ಕೊಹ್ಲಿ ಆಗಿದ್ದಾರೆ. ಜೊತೆಗೆ 2011ರಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಈ ಸ್ಥಾನವನ್ನು ಅಲಂಕರಿಸಿದ್ದ ಬಳಿಕ ಇದೇ ಮೊದಲ ಬಾರಿಗೆ ಭಾರತದ ಆಟಗಾರ ವಿರಾಟ್ ಕೊಹ್ಲಿ ಈ ಹಂತಕ್ಕೇರಿದ್ದಾರೆ.

ಈ ಬಗ್ಗೆ ಐಸಿಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದು, ‘ಎಂಆರ್​​ಎಫ್​ ಟಯರ್ಸ್​​ ಐಸಿಸಿ ಟೆಸ್ಟ್​ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಮೊದಲನೇ ಸ್ಥಾನದಲ್ಲಿದ್ದ ಸ್ವೀಟ್ ಸ್ಮಿತ್ ಅವರನ್ನು ಹಿಂದಿಕ್ಕಿ ನಂಬರ್ 1 ಪಟ್ಟ ಏರಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಸಚಿನ್ ತೆಂಡೂಲ್ಕರ್ ಬಳಿಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್​ಮನ್​ ಕೊಹ್ಲಿ’ ಎಂದು ಐಸಿಸಿ ಹೇಳಿದೆ.

 
ನಿನ್ನೆಯಷ್ಟೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್​​ನಲ್ಲಿ ಕೊಹ್ಲಿ ಮೊದಲ ಇನ್ನಿಂಗ್ಸ್​ನಲ್ಲಿ 149 ಹಾಗೂ ಎರಡನೇ ಇನ್ನಿಂಗ್ಸ್​ನಲ್ಲಿ 51 ರನ್ ಬಾರಿಸಿದ್ದರು. ಸದ್ಯ ಕೊಹ್ಲಿ 934 ರೇಟಿಂಗ್​ನೊಂದಿಗೆ ಟೆಸ್ಟ್​ ರ್ಯಾಂಕಿಂಗ್ ಪಟ್ದಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, 929 ರೇಟಿಂಗ್​ ಹೊಂದಿ ಆಸ್ಟ್ರೇಲಿಯಾದ ಸ್ವೀವ್ ಸ್ಮಿತ್ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಜೋ ರೂಟ್ 865 ರೇಟಿಂಗ್​ನೊಂದಿಗೆ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಟೆಸ್ಟ್​ ಕ್ರಿಕೆಟ್​​ನಲ್ಲಿ ಒಟ್ಟು 67 ಪಂದ್ಯಗಳನ್ನು ಆಡಿರುವ ಕೊಹ್ಲಿ 5,703 ರನ್ ಕಲೆಹಾಕಿದ್ದಾರೆ. ಇದರಲ್ಲಿ 22 ಶತಕ ಹಾಗೂ 16 ಅರ್ಧಶತಕ ಸೇರಿದೆ. ಕೊಹ್ಲಿ ಅವರ ಗರಿಷ್ಠ ಸ್ಕೋರ್ 243 ಆಗಿದೆ.
First published:August 5, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...