ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2023) 16ನೇ ಆವೃತ್ತಿಗೆ ಕೆಲ ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಐಪಿಎಲ್ 2023ರ ಮೊದಲ ಪಂದ್ಯವು ಹಾರ್ದಿಕ್ ಪಾಂಡ್ಯ ನಾಯಕತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK vs GT) ನಡುವೆ ನಡೆಯಲಿದೆ. ಬಹು ನಿರೀಕ್ಷಿತ ಟಿ20 ಲೀಗ್‌ಗೆ ವೇದಿಕೆ ಸಜ್ಜಾಗಿದೆ. ಯುವ ಆಟಗಾರರಿಂದ ಹಿಡಿದು ಅನುಭವಿ ಆಟಗಾರರವರೆಗೂ ಅಬ್ಬರಿಸಲು ಸಿದ್ಧರಾಗಿದ್ದಾರೆ. ಆದರೆ ಈ ಬಾರಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ (Disney+ Hotstar) ಇರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಐಪಿಎಲ್ ಪಂದ್ಯಗಳನ್ನು ಆನಂದಿಸಲು ಬಯಸಿದರೆ, ನೀವು ಬೇರೆ ಅಪ್ಲಿಕೇಶನ್ ಬಳಸಬೇಕಾಗುತ್ತದೆ.
ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. 52 ದಿನಗಳ ಕಾಲ ನಡೆಯುವ ಈ ಟೂರ್ನಿಯ ಪಂದ್ಯಗಳು 12 ಸ್ಥಳಗಳಲ್ಲಿ ನಡೆಯಲಿವೆ. ಪ್ರತಿ ಬಾರಿಯಂತೆ, ಈ ಬಾರಿಯೂ ಎಲ್ಲಾ 10 ತಂಡಗಳು ತವರಿನಲ್ಲಿ 7 ಪಂದ್ಯಗಳನ್ನು ಮತ್ತು ಹೊರಗಡೆ 7 ಪಂದ್ಯಗಳನ್ನು ಆಡಲಿವೆ. ಈ ಅವಧಿಯಲ್ಲಿ 18 ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಈ ಮೆಗಾ ಟೂರ್ನಿಗೆ ಅಭಿಮಾನಿಗಳು ಕಾತುರರಾಗಿದ್ದಾರೆ.
ಪಂದ್ಯದ ವಿವರ:
ಐಪಿಎಲ್ 2023 ಯಾವಾಗ ಪ್ರಾರಂಭವಾಗುತ್ತದೆ?
ಐಪಿಎಲ್ 2023 ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ.
ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯ ಯಾವ ಎರಡು ತಂಡಗಳ ನಡುವೆ ನಡೆಯಲಿದೆ?
ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಮೊದಲ ಪಂದ್ಯ ಎಲ್ಲಿ ನಡೆಯಲಿದೆ?
ಐಪಿಎಲ್‌ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದನ್ನೂ ಓದಿ: CSK vs GT: ಚೊಚ್ಚಲ ಪಂದ್ಯದಲ್ಲಿ ಚೆನ್ನೈ-ಗುಜರಾತ್ ಮುಖಾಮುಖಿ, ಸಿಎಸ್ಕೆ ಪ್ಲೇಯಿಂಗ್ 11 ಹೇಗಿರಲಿದೆ?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯ ಎಷ್ಟು ಗಂಟೆಗೆ ನಡೆಯಲಿದೆ?
ಐಪಿಎಲ್‌ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ರಾತ್ರಿ 7:30 ರಿಂದ ನಡೆಯಲಿದೆ. ಟಾಸ್ ಸಂಜೆ 7:00 ಗಂಟೆಗೆ ನಡೆಯಲಿದೆ.
IPL 2023 ಪಂದ್ಯಗಳ ನೇರ ಪ್ರಸಾರ ಯಾವ ಟಿವಿ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ?
ಐಪಿಎಲ್ 2023 ಪಂದ್ಯಗಳ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಇರುತ್ತದೆ.
IPL 2023 ಪಂದ್ಯಗಳನ್ನು ಮೊಬೈಲ್‌ನಲ್ಲಿ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
Viacom 18 ರ Voot ಮತ್ತು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ನೀವು ಮೊಬೈಲ್‌ನಲ್ಲಿ IPL ಪಂದ್ಯಗಳ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಚೆನ್ನೈ-ಗುಜರಾತ್ ಸಂಭಾವ್ಯ ಪ್ಲೇಯಿಂಗ್ 11:
ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶಿವಂ ಮಾವಿ, ಆರ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಲ್.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವೇ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್, ಎಂಎಸ್ ಧೋನಿ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಮುಖೇಶ್ ಚೌಧರಿ, ದೀಪಕ್ ಚಾಹರ್, ಮಹೇಶ್ ಟೀಕ್ಷಣ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ