ಮಹಿಳಾ ಟಿ20 ವಿಶ್ವಕಪ್ 2023ರ (Womens T20 World Cup) ಪಂದ್ಯ ಇಂದು ಭಾರತ ಮತ್ತು ಪಾಕಿಸ್ತಾನ (INDW vs PAKW) ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಹೈ ವೋಲ್ಟೇಜ್ ಪಂದ್ಯ ಕೇಪ್ ಟೌನ್ ನಲ್ಲಿ ನಡೆಯಲಿದೆ. ಭಾರತ ತಂಡ ಈ ಹಿಂದೆ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿತ್ತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿದೆ. ಹರ್ಮನ್‌ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಭಾರತ ಮಹಿಳಾ ತಂಡವು ಟಿ20 ಮಾದರಿಯಲ್ಲಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವೆಂದು ಪರಿಗಣಿಸಲಾಗಿದೆ. 2022ರಲ್ಲಿ ಈ ಪಂದ್ಯಾವಳಿಯನ್ನು ಆಡಿದಾಗ, ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಭಾರತವು ಆತಿಥೇಯ ಆಸ್ಟ್ರೇಲಿಯಾದ ಎದುರು ಸೋಲನ್ನು ಎದುರಿಸಬೇಕಾಯಿತು.
ಒಂದೇ ಗುಂಪಿನಲ್ಲಿ ಉಭಯ ತಂಡಗಳು:
ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಬಿ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಹೊರತುಪಡಿಸಿ ಇಂಗ್ಲೆಂಡ್, ಐರ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳಿವೆ. 10 ತಂಡಗಳನ್ನು ತಲಾ 5ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎರಡೂ ಗುಂಪಿನಲ್ಲಿ ಅಗ್ರ 2 ತಂಡಗಳು ಸೆಮಿಫೈನಲ್ ತಲಪುತ್ತವೆ.
ಪಂದ್ಯದ ವಿವರ:
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಮಹಿಳೆಯರ T20 ವಿಶ್ವಕಪ್ ಪಂದ್ಯವು ಭಾರತ ಮತ್ತು ಪಾಕಿಸ್ತಾನ ನಡುವೆ ಇಂದು ಸಂಜೆ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮಹಿಳಾ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆ.
ಇದನ್ನೂ ಓದಿ: IPL ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್ ಅಪ್ಡೇಟ್
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ T20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಮಹಿಳಾ ಟಿ20 ವಿಶ್ವಕಪ್ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಭಾರತೀಯ ಕಾಲಮಾನ ಸಂಜೆ 6.30 ರಿಂದ ನಡೆಯಲಿದೆ. 6 ಗಂಟೆಗೆ ಟಾಸ್ ಆಗಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ T20 ವಿಶ್ವಕಪ್ ಪಂದ್ಯವನ್ನು ಯಾವ ಚಾನಲ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೋಡಬಹುದು.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ?
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯವನ್ನು ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ನೋಡಬಹುದು.
ಭಾರತ- ಪಾಕ್ ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಹರ್ಮನ್ಪ್ರೀತ್ ಕೌರ್, ರಿಚಾ ಘೋಷ್, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್, ಶಿಖಾ ಪಾಂಡೆ ಮತ್ತು ರಾಧಾ ಯಾದವ್
ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್ 11: ಸಿದ್ರಾ ಅಮೀನ್, ಮುನೀಬಾ ಅಲಿ, ನಿದಾ ದಾರ್, ಆಯೇಶಾ ನಸೀಮ್, ಸದಾಫ್ ಶಮಾಸ್, ಆಲಿಯಾ ರಿಯಾಜ್, ಸಿದ್ರಾ ನವಾಜ್, ಜವೇರಿಯಾ ಖಾನ್, ಬಿಸ್ಮಾ ಮರೂಫ್, ಐಮನ್ ಅನ್ವರ್ ಮತ್ತು ನಶ್ರಾ ಸಂಧು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ