ಮಹಿಳಾ ಪ್ರೀಮಿಯರ್ ಲೀಗ್ (WPL 2023) ನಾಳೆಯಿಂದ ಅದ್ಧೂರಿಯಾಗಿ ಆರಂಭವಾಗಲಿದೆ. ಈಗಾಗಲೇ ಎಲ್ಲಾ ತಂಡಗಳು ಮೊದಲ ಸೀಸನ್ಗಾಗಿ ಭರ್ಜರಿ ತಯಾರಿಯಲ್ಲಿದೆ. ಈ ಉದ್ಘಾಟನಾ ಆವೃತ್ತಿಯಲ್ಲಿ ಒಟ್ಟು 5 ತಂಡಗಳು ಭಾಗವಹಿಸುತ್ತಿವೆ. ಇದರಲ್ಲಿ ಗುಜರಾತ್ ಜೈಂಟ್ಸ್ (GT), ಮುಂಬೈ ಇಂಡಿಯನ್ಸ್ (MI), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಯುಪಿ ವಾರಿಯರ್ಸ್ ತಂಡಗಳು ಸೇರಿವೆ. ಲೀಗ್‌ನ ಮೊದಲ ಸೀಸನ್‌ನಲ್ಲಿ ಒಟ್ಟು 20 ಪಂದ್ಯಗಳು ಮತ್ತು 2 ಪ್ಲೇಆಫ್ ಪಂದ್ಯಗಳು ನಡೆಯಲಿವೆ. ಇದು 23 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದೊಂದಿಗೆ ಡಿವೈ ಪಾಟೀಲ್ ಕ್ರೀಡಾಂಗಣದಿಂದ ಲೀಗ್ ಆರಂಭವಾಗಲಿದೆ. ಎಲ್ಲಾ ಪಂದ್ಯಗಳು ರಾತ್ರಿ 7:30 ರಿಂದ ನಡೆಯಲಿವೆ. ಪ್ರೀಮಿಯರ್ ಲೀಗ್‌ನ ಅಂತಿಮ ಪಂದ್ಯವು ಮಾರ್ಚ್ 26 ರಂದು ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯಾವಳಿಯ ಸ್ವರೂಪ:
ಇನ್ನು, ಒಟ್ಟು 5 ತಂಡಗಳು ಸೆಣಸಲಿದ್ದು, ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಹಾಗೂ ಡಬಲ್ ಹೆಡ್ಡರ್ ಪಂದ್ಯಗಳಲ್ಲಿ ಮಧ್ಯಾಹ್ನ 3:30ಕ್ಕೆ ಒಂದು ಪಂದ್ಯ ನಡೆಯಲಿದೆ. ಉಳಿದಂತೆ ಮಾರ್ಚ್ 24ರಂದು ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಲೀಗ್‌ನ ಫೈನಲ್ ಪಂದ್ಯ ಮಾರ್ಚ್ 26 ರಂದು ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯಾವಳಿಯು ಒಟ್ಟು 23 ದಿನಗಳವರೆಗೆ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.
ಪಂದ್ಯದ ಲೈವ್ ಪ್ರಸಾರ:
ಇನ್ನು, ಮಹಿಳಾ ಪ್ರೀಮಿಯರ್ ಲೀಗ್ 2023ರ ಪಂದ್ಯಗಳು ಭಾರತದಲ್ಲಿ Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. JioCinema ಅಪ್ಲಿಕೇಶನ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು. ಪಂದ್ಯದ ಹೆಚ್ಚಿನ ಮಾಹಿತಿಗಾಗಿ News18 Kannada ವೆಬ್ಸೈಟ್ ಅನುಸರಿಸಿ.
ಇದನ್ನೂ ಓದಿ: WTC 2023 ಫೈನಲ್ಗೆ ಆಸೀಸ್ ಎಂಟ್ರಿ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಟೀಂ ಇಂಡಿಯಾ ಔಟ್?
ಮಹಿಳಾ ಐಪಿಎಲ್ 2023 ಸಂಪೂರ್ಣ ತಂಡ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್ ಠಾಕೂರ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀಥರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಪೂನಂ ಖೇಮ್ನಾರ್, ಕೋಮಲ್ ಝಂಝಾದ್, ಮೇಘನ್ ಶುಟ್, ಸಹನಾ ಪವಾರ್.
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್ (ನಾಯಕಿ), ನ್ಯಾಟ್ ಸೀವರ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀಥರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ಹುಮೈರಾ ಕಾಜಿ, ಪ್ರಿಯಾಂಕಾ ಬಾಲಾ, ಜೆ ಸೋನಮ್ ಯಾದವ್, ಜಿಂತಿಮಣಿ ಕಲಿತಾ, ನೀಲಂ ಬಿಷ್ಟ್.
ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ (ನಾಯಕಿ), ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್.
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ) ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಾಪ್, ಟಿಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಾನ್, ತಾನಿಯಾ ಭಾಟಿಯಾ, ಪೂನಂ ಯಾದವ್, ಜೆಸ್ ಜೊನಾಸ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮಂಡಲ್.
ಗುಜರಾತ್ ಜೈಂಟ್ಸ್: ಬೆತ್ ಮೂನಿ (ನಾಯಕಿ), ಆಶ್ಲೀಗ್ ಗಾರ್ಡ್ನರ್, ಸೋಫಿ ಡಂಕ್ಲೆ, ಅನ್ನಾ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಸಬ್ಬಿನೇನಿ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ಡಿ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ, ಪರುಣಿಕಾ ಸಿಸೋಡಿಯಾ, ಶಬ್ನಮ್ ಶಕಿಲ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ