ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್ (GG vs DC) ನಾಯಕ ಸ್ನೇಹ್ ರಾಣಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ ಅವರನ್ನು ಪ್ಲೇಯಿಂಗ್ 11ರಲ್ಲಿ ಕರೆತರಲು ಗುಜರಾತ್ ಸೋಫಿಯಾ ಡಂಕ್ಲೆ ಅವರನ್ನು ಕೈ ಬಿಟ್ಟಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಹೀನಾಯ ಸೋಲನುಭವಿಸಿತ್ತು. ಶನಿವಾರ ಗುಜರಾತ್ ಜೈಂಟ್ಸ್ ವಿರುದ್ಧ ಪುಟಿದೇಳುವ ಉತ್ಸಾಹದಲ್ಲಿದೆ. ಮೆಗ್ ಲ್ಯಾನಿಂಗ್ ಕ್ಯಾಪಿಟಲ್ಸ್‌ಗಾಗಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅವರ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮೀರಿಸಿ ಅಂತಿಮವಾಗಿ ಯಶಸ್ಸನ್ನು ಅನುಭವಿಸಿದ ಜೈಂಟ್ಸ್ ವಿರುದ್ಧ ಇತರ ಬ್ಯಾಟರ್‌ಗಳ ಬೆಂಬಲದ ಅಗತ್ಯವಿದೆ.
ಪಂದ್ಯದ ವಿವರ:
ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ WPL 2023 ಪಂದ್ಯವು ನವಿ ಮುಂಬೈನ DY ಪಾಟೀಲ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಈ ಪಂದ್ಯವನ್ನು ಭಾರತದಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.
🚨 Team Updates 🚨
Laura Wolvaardt & Georgia Wareham are in for @GujaratGiants while Laura Harris is in for the @DelhiCapitals
Follow the match 👉 https://t.co/ea9cEEkMGR#TATAWPL | #GGvDC pic.twitter.com/9KNlGPpASC
— Women's Premier League (WPL) (@wplt20) March 11, 2023
ಈಗಾಗಲೇ ಗುಜರಾತ್ ಮತ್ತು ಡೆಲ್ಲಿ 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 2 ಮತ್ತು ಗುಜರಾತ್ ಜೈಂಟ್ಸ್ 1 ಗೆಲುವು ದಾಖಲಿಸಿದೆ. ಈ ಮೂಲಕ ಡೆಲ್ಲಿ ತಂಡವು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ಗುಜರಾತ್ ತಂಡವು 4ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದ ಗೆಲ್ಲುವ ಮೂಲಕ ಪಾಯಿಂಟ್ ಟೇಬಲ್ನಲ್ಲಿ ಮೇಲೇರುವ ಇರಾದೆಯಲ್ಲಿದೆ ಗುಜರಾತ್ ತಂಡವಿದೆ. ಉಳಿದಂತೆ 3 ಗೆಲುವಿನೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದ್ದು, ಯುಪಿ ವಾರಿಯರ್ಸ್ 2 ಗೆಲುವಿನೊಂದಿಗೆ 3ನೇ ಸ್ಥಾನ ಮತ್ತು 4 ಸೋಲುಗಳೊಂದಿಗೆ ಬೆಂಗಳೂರು ತಂಡ ಕೊನೆಯ ಸ್ಥಾನದಲ್ಲಿದೆ.
ಇನ್ನು, ಡೆಲ್ಲಿ ತಂಡದ ಮೆಗ್ ಲಾನ್ನಿಂಗ್ ಆಡಿರುವ 3 ಪಂದ್ಯಗಳಿಂದ 61.66ರ ಸರಾಸರಿಯಲ್ಲಿ 185 ರನ್ ಗಳಿಸುವ ಮೂಲಕ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡದ ಸೈಕಾ ಇಶಾಕ್ ಅವರು 3 ಪಂದ್ಯದಿಂದ 9 ವಿಕೆಟ್ ಪಡೆದು ಟಾಪ್ ವಿಕೆಟ್ ಟೇಕರ್ ಆಗಿದ್ದಾರೆ.
ಗುಜರಾತ್ - ಡೆಲ್ಲಿ ಪ್ಲೇಯಿಂಗ್ 11:
ಗುಜರಾತ್ ಜೈಂಟ್ಸ್ ಪ್ಲೇಯಿಂಗ್ 11: ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ದಯಾಲನ್ ಹೇಮಲತಾ, ಸ್ನೇಹ್ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಮರಿಝನ್ನೆ ಕಪ್, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ನಾಯಕಿ), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ಟಾರಾ ನೋರಿಸ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ