ಭಾರತ ತಂಡದ ಕ್ರಿಕೆಟ್ ಪಯಣ 2022ರಲ್ಲಿ ಸಾಕಷ್ಟು ಏಳುಬೀಳಿನ ನಡುವೆ ಇತ್ತು ಎಂದು ಹೇಳಬಹುದು. ಏಕೆಂದರೆ ಎರಡು ದೊಡ್ಡ ಟೂರ್ನಿಗಳನ್ನು ಗೆಲ್ಲುವಲ್ಲಿ ತಂಡ ವಿಫಲವಾಗಿತ್ತು. ಈ ಹಿಂದೆ ಟೀಂ ಇಂಡಿಯಾ ಏಷ್ಯಾಕಪ್ನಲ್ಲಿ (Asia Cup 2022) ಫೈನಲ್ ತಲುಪಲು ಸಾಧ್ಯವಾಗಿರಲಿಲ್ಲ. ಅದೇ ಸಮಯದಲ್ಲಿ, ಟಿ20 ವಿಶ್ವಕಪ್ನ (T20 World Cup 2022) ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್ಗಳಿಂದ ಭಾರತವನ್ನು ಸೋಲಿಸಿತು. ಈ ವರ್ಷ ಭಾರತ ತಂಡ (Team India) ಹಲವು ಸರಣಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಟಿ20 ವಿಶ್ವಕಪ್, ಏಷ್ಯಾಕಪ್ನಂತಹ ಮಹತ್ವದ ಟೂರ್ನಿಗಳನ್ನು ಕೈಚಲ್ಲಿದೆ. ಹಾಗಿದ್ದರೆ ಈ ವರ್ಷ ಯಾವ ಆಟಗಾರರು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತಕ್ಕಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ.
ಟಿ20 ಕ್ರಿಕೆಟ್:
ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್. ಸೂರ್ಯಕುಮಾರ್ ಯಾದವ್ 2022ರಲ್ಲಿ 31 ಟಿ20 ಇನ್ನಿಂಗ್ಸ್ಗಳಲ್ಲಿ 46.56 ಸರಾಸರಿಯಲ್ಲಿ ಒಟ್ಟು 1164 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, ಅವರ ಸ್ಟ್ರೈಕ್ ರೇಟ್ ಕೂಡ 190 ರ ಆಸುಪಾಸಿನಲ್ಲಿದೆ. ಈ ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಸಾಧನೆಯನ್ನೂ ಮಾಡಿದ್ದಾರೆ. ಈ ವರ್ಷ ಅವರು ಟಿ20 ಕ್ರಿಕೆಟ್ನಲ್ಲಿ 2 ಶತಕ ಮತ್ತು 9 ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್:
2022 ರಲ್ಲಿ ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಈ ವರ್ಷ ಟಿ20, ಏಕದಿನ ಕ್ರಿಕೆಟ್ನಲ್ಲಿ ರಿಷಬ್ ಪಂತ್ ಸಂಪೂರ್ಣ ವಿಫಲರಾಗಿದ್ದಾರೆ. ಆದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ವರ್ಷ 6 ಪಂದ್ಯಗಳ 10 ಇನ್ನಿಂಗ್ಸ್ಗಳಲ್ಲಿ 578 ರನ್ ಗಳಿಸಿದ್ದಾರೆ. ಅವರ ಸರಾಸರಿ 64.22 ಆಗಿತ್ತು. ಒಟ್ಟು 2 ಶತಕ ಹಾಗೂ 3 ಅರ್ಧ ಶತಕ ಬಾರಿಸಿದ್ದಾರೆ.
ಏಕದಿನ ಕ್ರಿಕೆಟ್:
ಶ್ರೇಯಸ್ ಅಯ್ಯರ್ ಈ ವರ್ಷ ಭಾರತದ ಪರ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ವರ್ಷ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಯ್ಯರ್ 2022ರಲ್ಲಿ ಒಟ್ಟು 15 ODI ಇನ್ನಿಂಗ್ಸ್ಗಳಲ್ಲಿ ಭಾಗವಹಿಸಿದ್ದರು. ಈ 15 ಇನ್ನಿಂಗ್ಸ್ಗಳಲ್ಲಿ ಅವರು 55.69 ಸರಾಸರಿಯಲ್ಲಿ 724 ರನ್ ಗಳಿಸಿದ್ದಾರೆ. ಅವರು 1 ಶತಕ ಮತ್ತು 6 ಅರ್ಧಶತಕಗಳನ್ನು ಸಹ ಗಳಿಸಿದ್ದಾರೆ.
ಇದನ್ನೂ ಓದಿ: IND vs BAN 2nd Test: ಭಾರತ-ಬಾಂಗ್ಲಾ 2ನೇ ಟೆಸ್ಟ್ ಯಾವಾಗ? ಯಾರಿಗೆಲ್ಲಾ ಸಿಗಲಿದೆ ಚಾನ್ಸ್? ಇಲ್ಲಿದೆ ಸಂಪೂರ್ಣ ಮಾಹಿತಿ
ಯಾವದ್ಗೆ ಈ ವರ್ಷ ಭರ್ಜರಿ ಲಕ್:
ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ ಪ್ರಸಕ್ತ ವರ್ಷ (2022) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡು ಶತಕ ಬಾರಿಸಿದ್ದಾರೆ. ಈ ವೇಳೆ ಅವರು 2018ರಲ್ಲಿ ಈ ಸಾಧನೆ ಮಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೇ ಈ ವರ್ಷ ಅವರಿಗೆ ಲಕ್ಕಿ ಇಯರ್ ಎಂದರೂ ತಪ್ಪಾಗಲಾರದು.
ಸೂರ್ಯಕುಮಾರ್ ಯಾದವ್ ಈ ವರ್ಷ T20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅನೇಕ ಸ್ಮರಣೀಯ ಇನ್ನಿಂಗ್ಸ್ಗಳನ್ನು ಆಡಿದ್ದಾರೆ. ಈ ಕಾರಣದಿಂದಾಗಿ ಅವರು 7 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಸಂದರ್ಭದಲ್ಲಿ ಅವರು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ 2016ರಲ್ಲಿ 6 ಬಾರಿ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿಗೆ ಭಾಜನರಾಗಿದ್ದ ಕೊಹ್ಲಿ ಹೆಸರಿನಲ್ಲಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ