1.87 ಲಕ್ಷ ಜನರಿಗೆ ಕೊರೋನಾ ಲಸಿಕೆ, ವ್ಯಾಕ್ಸಿನ್​ನಿಂದ ಯಾವುದೇ ಅಡ್ಡ ಪರಿಣಾಮವಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೆ.ಸುಧಾಕರ್ ಅವರ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಜೆ.ಸಿ. ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು. ಖಾತೆ ಕಿತ್ತುಕೊಂಡಿದ್ದಕ್ಕೆ ಸುಧಾಕರ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಬಳಿಕ ಇಂದು ಮತ್ತೆ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಸುಧಾಕರ್ ಅವರಿಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಡಾ.ಕೆ. ಸುಧಾಕರ್

ಡಾ.ಕೆ. ಸುಧಾಕರ್

 • Share this:
  ಬೆಂಗಳೂರು (ಜನವರಿ 25); ಕೊರೊನಾ ಲಸಿಕೆ ಅಭಿಯಾನದಡಿ, ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಕೋವ್ಯಾಕ್ಸಿಕ್ ಲಸಿಕೆ ಮೊದಲಿಗೆ 20,000 ಡೋಸ್ ಬಂದಿತ್ತು. ನಂತರ ಮತ್ತೆ 1,46,240 ಡೋಸ್ ಬಂದಿದೆ. ಒಟ್ಟು 1,87,211 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದು ಅತಿ ಹೆಚ್ಚು ಎಂದು ತಿಳಿಸಿದರು.

  ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ಪರಿಣಾಮ ಆಗಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಹೆಚ್ಚು ಜನರು ಇದನ್ನು ಪಡೆಯಬೇಕು. ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಸಿಎಂ, ಮಂತ್ರಿಗಳಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಸುಮಾರು 500 ರಷ್ಟು ಜನಪ್ರಿಯ ವ್ಯಕ್ತಿಗಳಿಗೆ ಲಸಿಕೆ ನೀಡುವಂತೆ ಕ್ರಮ ವಹಿಸಲು ಪ್ರಧಾನಿಗಳಿಗೆ ಕೋರಲಾಗಿದೆ ಎಂದರು.

  ಇದನ್ನು ಓದಿ: ಕೊರೋನಾ ಲಸಿಕೆ ಬಗ್ಗೆ ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕೇಂದ್ರ ಸೂಚನೆ

  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಬ್ಬರ ಬಳಿ ಇದ್ದರೆ ನಿರ್ವಹಣೆ ಸುಲಭ. ಕೋವಿಡ್ ಲಸಿಕೆ ಬಂದಿರುವ ಈ ಸಮಯದಲ್ಲಿ ಎರಡೂ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು. ಯಾರಿಗೇ ಆದರೂ ಕೊಡಲಿ, ಆದರೆ ಒಬ್ಬರಿಗೇ ಖಾತೆ ನೀಡಲಿ. ಕೊರೋನಾ ತಾರ್ಕಿಕ ಅಂತ್ಯ ಕಾಣುವವರೆಗೂ ಒಂದಾಗಬೇಕು. ಮುಂದೆ ಯಾವುದೇ ಸರ್ಕಾರ ಬಂದರೂ ಹೀಗೆಯೇ ಇರಬೇಕು ಎಂದರು. ಮುಖ್ಯಮಂತ್ರಿಗಳಿಗೆ ಕಠಿಣ ಸವಾಲಿದೆ. ಲಭ್ಯವಿರುವ ಖಾತೆಯನ್ನು ಹಂಚುವುದು ಸಾಹಸದ ಕೆಲಸ. ಈಗ ನಮ್ಮ ಮುಂದೆ ಅತಿ ಹೆಚ್ಚು ಜನರಿಗೆ ಲಸಿಕೆ ನೀಡುವ ಸವಾಲಿದೆ ಎಂದರು.

  ಏತನ್ಮಧ್ಯೆ, ಕೆ.ಸುಧಾಕರ್ ಅವರ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಜೆ.ಸಿ. ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು. ಖಾತೆ ಕಿತ್ತುಕೊಂಡಿದ್ದಕ್ಕೆ ಸುಧಾಕರ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಬಳಿಕ ಇಂದು ಮತ್ತೆ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಸುಧಾಕರ್ ಅವರಿಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
  Published by:HR Ramesh
  First published: