ಮಹಾರಾಷ್ಟ್ರದ ಸೋಲಾಪುರ (Solapura, Maharashtra) ಜಿಲ್ಲೆಯ 11 ಗ್ರಾಮಗಳ (Villages) ಗ್ರಾಮಸ್ಥರು ತಮ್ಮ ಹಳ್ಳಿಗಳನ್ನು ಕರ್ನಾಟಕಕ್ಕೆ (Karnataka) ಸೇರಿಸುವಂತೆ ಜಿಲ್ಲಾಧಿಕಾರಿಗಳಿಗೆ (District Administration) ಮನವಿ ಮಾಡಿಕೊಂಡಿದ್ದಾರೆ. ನಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು (Basic Facilities) ಒದಗಿಸಿ ಇಲ್ಲವೇ ಕರ್ನಾಟಕಕ್ಕೆ ನಮ್ಮನ್ನು ಸೇರಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಕ್ಕಲಕೋಟ (Akkalakote) ತಾಲೂಕಿನ ಕಲ್ಲಕರ್ಜಾಲ್, ಕೆಗಾಂವ್, ಶೇಗಾಂವ್, ಕೊರ್ಸೆಗಾಂವ್, ಆಳಗೆ, ಧರಸಂಗ್, ಅಂದೇವಾಡಿ (ಖುರ್ದ್), ಹಿಲ್ಲಿ, ದೇವಿಕಾವಠೆ, ಮಂಗ್ರುಲ್, ಶಾವಾಲ್ ಗ್ರಾಮ ಪಂಚಾಯಿತಿಗಳು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸೊಲ್ಲಾಪುರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅನುಮತಿ ನೀಡುವಂತೆ ಗ್ರಾಮಗಳು ಜಿಲ್ಲಾಡಳಿತದ ಬಳಿ ಮನವಿ ಮಾಡಿಕೊಂಡಿವೆ.
ಈ ಮನವಿ ಹಿನ್ನೆಲೆ ಮಾಧ್ಯಮಗಳ ಜೊತೆ ಅಳಗಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷೆ ಸಗುಣಾಬಾಯಿ ಹತ್ತೊರೆ ಪ್ರತಿಕ್ರಿಯಿಸಿದ್ದಾರೆ. ನಮ್ಮ ಗ್ರಾಮಗಳಲ್ಲಿ ಸರಿಯಾದ ಕುಡಿಯುವ ಶುದ್ಧ ನೀರಿನ ವ್ಯವಸ್ಥೆ ಇಲ್ಲ. ಸಮರ್ಪಕವಾದ ವಿದ್ಯುತ್ ಪೂರೈಕೆಯೂ ಇಲ್ಲ. ಗ್ರಾಮಗಳಿಗೆ ಸರಿಯಾದ ರಸ್ತೆ ಇಲ್ಲದ ಕಾರಣ, ನಮ್ಮೂರಿಗೆ ಶಿಕ್ಷಕರು, ಆಸ್ಪತ್ರೆ ಸಿಬ್ಬಂದಿ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ವಾಸ್ತವಾಂಶವನ್ನು ಬಿಚ್ಚಿಬಿಟ್ಟರು.
ಶಿಕ್ಷಣದಿಂದ ವಂಚಿತರಾಗುತ್ತಿರುವ ಮಕ್ಕಳು
ರಸ್ತೆಗಳಿಲ್ಲದ ಕಾರಣ ಇಲ್ಲಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಗ್ರಾಮದಿಂದ ಪಟ್ಟಣದ ಪ್ರದೇಶಗಳಿಗೆ ಪರದಾಡುವಂತಾಗಿದೆ. ಯುವಕರು ಕಾಲ್ನಡಿಗೆ, ಖಾಸಗಿ ವಾಹನಗಳನ್ನೇ ಬಳಸುತ್ತಿದ್ದಾರೆ ಎಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.
ಕುಡಿಯುವ ನೀರಿನ ಸಮಸ್ಯೆ
ಹಿಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಪ್ಪಾಸಾಹೇಬ್ ಶಟಗಾರ ಮಾತನಾಡಿ, ತಮ್ಮ ಹಳ್ಳಿಗಳ ಶೋಚನೀಯ ಸ್ಥಿತಿ ಕುರಿತು ವಿವರಿಸಿದ್ದಾರೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ರಸ್ತೆಗಳು ಹದೆಗೆಟ್ಟಿವೆ ಎಂದರು.
ಉಜನಿ ಅಣೆಕಟ್ಟಿನಿಂದ ಮುಂಗಾರು ವೇಳೆ ಸಾಕಷ್ಟು ನೀರು ಬಿಡುಗಡೆ ಮಾಡಲಾಗುತ್ತದೆ. ಆದ್ರೆ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಬೇಸಿಗೆಯಲ್ಲಿ ನಮ್ಮ ಕೃಷಿ ಭೂಮಿಗೆ ನೀರು ತಲುಪಲ್ಲ. ಬೇಸಿಗೆ ಸಂದರ್ಭದಲ್ಲಿ ನೀರು ಬಿಡುಗಡೆ ಸಂಬಂಧ ಪ್ರತಿಬಾರಿಯೂ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳ ಮೊರೆ ಹೋಗಬೇಕು ಎಂದು ಅಪ್ಪಾಸಾಹೇಬ್ ಬೇಸರ ಹೊರ ಹಾಕಿದರು.
ಗ್ರಾಮದ ಸರ್ಕಾರಿ ಶಾಲೆಗಳು ಮೂಲಸೌಕರ್ಯದ ಕೊರತೆಯನ್ನು ಎದುರಿಸುತ್ತಿವೆ. ಆರೋಗ್ಯ ವ್ಯವಸ್ಥೆ ಉತ್ತಮವಾಗಿಲ್ಲ. ಗ್ರಾಮಗಳಿಗೆ ಸಮರ್ಪಕವಾ್ಗಿ ವಿದ್ಯುತ್ ಸಹ ಪೂರೈಕೆ ಆಗುತ್ತಿಲ್ಲ ಎಂದು ಸಮಸ್ಯೆಗಳ ಪಟ್ಟಿಯನ್ನೇ ಬಿಡುಗಡೆಗೊಳಿಸಿದರು.
ಇದನ್ನೂ ಓದಿ: Untouchability: ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ; ಗೋಮೂತ್ರದಿಂದ ಶುದ್ಧಿ!
ನಮಗೆ ಕರ್ನಾಟಕ ಸೇರಬೇಕೆಂಬ ಒಲವು ಇಲ್ಲ. ಆದ್ರೆ ಎಷ್ಟು ದಿನ ನಮಗಾಗುತ್ತಿರುವ ಅನ್ಯಾಯವನ್ನು ಸಹಿಸಿಕೊಳ್ಳಲು ಸಾಧ್ಯ. ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಕರ್ನಾಟಕ ಸೇರುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಅಪ್ಪಾಸಾಹೇಬ್ ಹೇಳುತ್ತಾರೆ.
ಬಸ್ ಸಂಚಾರ ಸ್ಥಗಿತ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದಲ್ಲಿ (Karnataka-Maharashtra Border) ಉದ್ವಿಘ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ (Bus) ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: RTI ಅರ್ಜಿ ನಿರಾಕರಿಸಿದರೆ 25,000 ರೂಪಾಯಿ ದಂಡ; ಸರ್ಕಾರದ ಖಡಕ್ ಎಚ್ಚರಿಕೆ
ಪೊಲೀಸರ ಸೂಚನೆ ಮೇರೆಗೆ ಬೆಳಗಾವಿ (Belagavi) ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ತೆರಳಬೇಕಿದ್ದ 400ಕ್ಕೂ ಹೆಚ್ಚು ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಬೆಳಗಾವಿಯಲ್ಲಿ NWKRTC ಸಂಚಾರ ಅಧಿಕಾರಿ ಕೆ.ಕೆ.ಲಮಾಣಿ ಹೇಳಿದ್ದಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ