ತುಮಕೂರು: ಇಂದು ತ್ರಿವಿಧ ದಾಸೋಹಿ ಕರ್ನಾಟಕ ರತ್ನ ಲಿಂಗೈಕ್ಯ ಶಿವಕುಮಾರ ಶ್ರೀಗಳ (Sri Sri Shivakumara Swamiji) 116ನೇ ಜನ್ಮ ಜಯಂತಿ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ (Siddaganga Mutt) ಸಕಲ ತಯಾರಿ ನಡೆಸಲಾಗುತ್ತಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ (Shivakumara Swamiji Gadduge) ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆ ರುದ್ರಾಭಿಷೇಕ ಮಹಾಮಂಗಳಾರತಿ ನೆರವೇರಿಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ (Election Code Of Conduct) ಹಿನ್ನೆಲೆಯಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ಭಾಗಿಯಾಗುತ್ತಿಲ್ಲ.
ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೇಲುಕೋಟೆಯಲ್ಲಿ ವೈರಮುಡಿ ಉತ್ಸವ
ಮೇಲುಕೋಟೆಯಲ್ಲಿ ಇಂದು ಪ್ರಸಿದ್ದ ವೈರಮುಡಿ ಉತ್ಸವ ಹಿನ್ನೆಲೆ ಜಿಲ್ಲಾಡಳಿತದ ಖಜಾನೆಯಿಂದ ರತ್ನಖಚಿತ ವೈರಮುಡಿ ಮೇಲುಕೋಟೆಗೆ ರವಾನೆ ಮಾಡಲಾಗಿದೆ. ವೈರಮುಡಿ ರವಾನೆಗೂ ಮುನ್ನಾ ಖಜಾನೆಯಲ್ಲಿ ಡಿಸಿ, ಎಸ್ಪಿ ,ಎಸಿ ,ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪೂಜೆ ಸಲ್ಲಿಸಿದರು.
ಪೂಜೆ ವೇಳೆ ಚಲುವ ನಾರಾಯರಾಣಸ್ಚಾಮಿಗೆ ಜೈಕಾರದ ಘೋಷಣೆ ಕೂಗಲಾಯ್ತು. ಪರಕಾಲ ಮಠದ ವಾಹನದಲ್ಲಿ ಭದ್ರತೆಯೊಂದಿಗೆ ಸ್ಥಾನಿಕ ಅರ್ಚಕರು ರತ್ನ ಖಚಿತ ವೈರಮುಡಿ ತೆಗೆದುಕೊಂಡು ಹೋದರು.
ಇದನ್ನೂ ಓದಿ: Crime News: ಬೈಕ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್; ಸ್ನೇಹಿತನನ್ನೇ ಬರ್ಬರವಾಗಿ ಕೊಂದು ದುಷ್ಕರ್ಮಿಗಳು ಎಸ್ಕೇಪ್
ಪ್ರತಿ ಗ್ರಾಮದಲ್ಲಿ ಗ್ರಾಮಸ್ಥರಿಂದ ಪೂಜೆ
ಮಂಡ್ಯ ನಗರದ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ವೈರಮುಡಿಗೆ ಮೊದಲ ಪೂಜೆ ನಡೆಯುತ್ತದೆ. ಮಂಡ್ಯ ಶ್ರೀರಂಗಪಟ್ಟಣ ಪಾಂಡವಪುರ ಮಾರ್ಗ ಮೇಲುಕೋಟೆ ತಲುಪಲಿದೆ. ವೈರಮುಡಿ ಸಾಗುವ ಮಾರ್ಗದ ಪ್ರತಿ ಗ್ರಾಮದಲ್ಲೂ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ