SSLC, PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಿ: ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ

ಇದು ಎಲ್ಲಾ ರಾಜ್ಯಗಳ ಪರೀಕ್ಷಾ ಮಂಡಳಿಗಳು, ಸಿಬಿಎಸ್​​ಇ ಮತ್ತು ಐಸಿಎಸ್​ಇ ಪರೀಕ್ಷಾ ಮಂಡಳಿಗಳು ನಡೆಸುವ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಅನ್ವಯವಾಗುತ್ತವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • News18
  • Last Updated :
  • Share this:
ಬೆಂಗಳೂರು: ಕೊರೋನಾ ಭೀತಿ ಮಧ್ಯೆ ದೇಶದ ಎಲ್ಲೆಡೆ ವಿದ್ಯಾರ್ಥಿಗಳ ಭವಿಷ್ಯದ ಕಾರಣಕ್ಕೆ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ತಯಾರಿ ನಡೆಯುತ್ತಿದೆ. ವಿದ್ಯಾರ್ಥಿಗಳ ಯೋಗಕ್ಷೇಮದ ದೃಷ್ಟಿಯಿಂದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಳ್ಳಾ ಅವರು ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಒಂದಷ್ಟು ಷರತ್ತು ವಿಧಿಸಿದ್ದಾರೆ.

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಮತ್ತೊಂದು ಪ್ರಮುಖ ವಿಚಾರವೆಂದರೆ ಕಂಟೈನ್​ಮೆಂಟ್ ಜೋನ್ ಎಂದು ಗುರುತಿಸಲಾಗಿರುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸುವಂತಿಲ್ಲ ಎಂದು ಆದೇಶಿಸಿದೆ.

ಇದು ಎಲ್ಲಾ ರಾಜ್ಯಗಳ ಪರೀಕ್ಷಾ ಮಂಡಳಿಗಳು, ಸಿಬಿಎಸ್​​ಇ ಮತ್ತು ಐಸಿಎಸ್​ಇ ಪರೀಕ್ಷಾ ಮಂಡಳಿಗಳು ನಡೆಸುವ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಅನ್ವಯವಾಗುತ್ತವೆ.

ಇದನ್ನೂ ಓದಿ: ರಾಜ್ಯದಲ್ಲೂ ಆರಂಭವಾಗಲಿದೆ ರೈಲು ಸೇವೆ; ಬೆಂಗಳೂರು-ಮೈಸೂರು-ಬೆಳಗಾವಿ ನಡುವೆ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಕೇಂದ್ರ ಗೃಹ ಕಾರ್ಯದರ್ಶಿ ಹೊರಡಿಸಿರುವ ಸೂಚನೆಗಳಿವು:

1) ಕಂಟೈನ್ಮೆಂಟ್ ಜೋನ್​ಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ಇಲ್ಲ.
2) ವಿದ್ಯಾರ್ಥಿಗಳು, ಬೋಧಕರು ಮತ್ತು ಪರೀಕ್ಷಾ ಸಿಬ್ಬಂದಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು
3) ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಬೇಕು. ಸಾಮಾಜಿಕ ಅಂತರ ಪಾಲನೆ ಕಡ್ಡಾಯ.
4) ಬೇರೆ ಬೇರೆ ಪರೀಕ್ಷಾ ಮಂಡಳಿಗಳಿರುವುದರಿಂದ ಪರೀಕ್ಷೆಗಳು ಬೇರೆ ಬೇರೆ ದಿನಾಂಕಗಳಲ್ಲಿರುವಂತೆ ನೋಡಿಕೊಳ್ಳಬೇಕು.
5) ಪರೀಕ್ಷಾರ್ಥಿಗಳನ್ನ ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು.

First published: