ಭೋಪಾಲ್​ನಲ್ಲೊಂದು ಪೈಶಾಚಿಕ ಕೃತ್ಯ; ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕಲ್ಲಿನಿಂದ ತಲೆ ಜಜ್ಜಿ ಕೊಲೆ

ಬಾಲಕಿಯ ಮೇಲೆ ಈ ಇಬ್ಬರೇ ಅತ್ಯಾಚಾರವೆಸಗಿದರೆ ಅಥವಾ ಈ ಪ್ರಕರಣದಲ್ಲಿ ಮತ್ತಷ್ಟು ಜನರ ಕೈವಾಡವಿದೆಯೇ? ಎಂಬ ಅಂಶ ವಿಧಿ ವಿಜ್ಞಾನ ಇಲಾಖೆ ವರದಿಯ ನಂತರ ತಿಳಿದುಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

MAshok Kumar | news18
Updated:May 2, 2019, 10:11 AM IST
ಭೋಪಾಲ್​ನಲ್ಲೊಂದು ಪೈಶಾಚಿಕ ಕೃತ್ಯ; ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕಲ್ಲಿನಿಂದ ತಲೆ ಜಜ್ಜಿ ಕೊಲೆ
ಬಂಧಿತ ಆರೋಪಿ.
  • News18
  • Last Updated: May 2, 2019, 10:11 AM IST
  • Share this:
ಭೋಪಾಲ್ (ಮಧ್ಯಪ್ರದೇಶ) : 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ನಂತರ ಕಲ್ಲಿನಿಂದ ತಲೆ ಜಜ್ಜಿ ಕೊಂದಿರುವ ಪೈಶಾಚಿಕ ಕೃತ್ಯ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ.

ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿ ಸಹಾಯ ಮಾಡಿದ ಆರೋಪದ ಮೇಲೆ ಮೃತ ಬಾಲಕಿಯ ಸಂಬಂಧಿಕಳೊರ್ವಳನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪ್ರಸ್ತುತ ಈ ಘಟನೆ ಇಡೀ ಮಧ್ಯಪ್ರದೇಶವನ್ನು ಬೆಚ್ಚಿ ಬೀಳಿಸಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ.

ಪ್ರಕರಣದ ಹಿನ್ನೆಲೆ: ಕಳೆದ ಮಂಗಳವಾರ ಅಪ್ರಾಪ್ತ ಬಾಲಕಿಯನ್ನು 16 ವರ್ಷದ ಆಕೆಯ ಸಂಬಂಧಿಯೊಬ್ಬಳು ಹತ್ತಿರದ ಮನುಬವನ್ ತೆಕ್ರಿ ಪ್ರದೇಶದ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ. ಈ ಸಂದರ್ಭದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಇಬ್ಬರು ಆರೋಪಿಗಳು ಬಾಲಕಿಯನ್ನು ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಕಲ್ಲಿನಿಂದ ತಲೆಯನ್ನು ಜಜ್ಜಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಬು ಪುತ್ರ ನಾರಾಯಣ್ ಸಾಯಿಗೆ ಜೀವಾವಧಿ ಶಿಕ್ಷೆ ಪ್ರಕಟ

ದೇವಾಲಯಕ್ಕೆ ತೆರಳಿದ ಮಗಳು ಮನೆಗೆ ಹಿಂದಿರುಗದಿದ್ದಾಗ ಆತಂಕಗೊಂಡ ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ದೂರನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಮೃತ ಬಾಲಕಿಯ ಮನೆಯ ಹತ್ತಿರವೇ ಇದ್ದ ಇಬ್ಬರು ಆರೋಪಿಗಳನ್ನು ಹಾಗೂ ಬಾಲಕಿಯ ಸಂಬಂಧಿಕಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸತ್ಯವನ್ನು ಬಯಲಿಗೆಳೆದಿದ್ದಾರೆ.

ಆದರೆ, ಬಾಲಕಿಯ ಮೇಲೆ ಈ ಇಬ್ಬರೇ ಅತ್ಯಾಚಾರವೆಸಗಿದರೆ ಅಥವಾ ಈ ಪ್ರಕರಣದಲ್ಲಿ ಮತ್ತಷ್ಟು ಜನರ ಕೈವಾಡವಿದೆಯೇ? ಎಂಬ ಅಂಶ ವಿಧಿ ವಿಜ್ಞಾನ ಇಲಾಖೆ ವರದಿಯ ನಂತರ ತಿಳಿದುಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಮಧ್ಯಪ್ರದೇಶದ ಮಂಡ್ಸಾರ್ ಜಿಲ್ಲೆಯಲ್ಲಿ ಇಬ್ಬರು ಕಿಡಿಗೇಡಿಗಳು 7 ವರ್ಷದ ಅಪ್ರಾಪ್ತ ಬಾಲಕಿಯನ್ನು ಶಾಲೆ ಎದುರೆ ಅಪಹರಣ ಮಾಡಿ ಅತ್ಯಾಚಾರವೆಸಗಿದ್ದರು. ಅಲ್ಲದೆ ಬಾಲಕಿಗೆ ಸಾಕಷ್ಟು ದೈಹಿಕ ಹಿಂಸೆ ನೀಡಿ ಕತ್ತು ಸೀಳಿ ಕೊಲೆಗೈದಿದ್ದರು. ಈ ಪ್ರಕರಣ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಆರೋಪಿಗಳನ್ನು ನೇಣಿಗೆ ಏರಿಸಬೇಕು ಎಂಬ ಕೂಗು ದೇಶದಾದ್ಯಂತ ಕೇಳಿಬಂದಿತ್ತು.ಇದನ್ನೂ ಓದಿ : ಇದು ನೀವೆಲ್ಲೂ ಕೇಳಿರದ ಕತೆ; ಮಹಿಳೆಯಿಂದಲೇ ಮಹಿಳೆ ಮೇಲೆ ಅತ್ಯಾಚಾರ!

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. 2016 ಹಾಗೂ 2017ರ ಅವಧಿಯಲ್ಲಿ ದೇಶದಲ್ಲೇ ಅತಿಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾದ ರಾಜ್ಯ ಎಂಬ ಕುಖ್ಯಾತಿಗೂ ಮಧ್ಯಪ್ರದೇಶ ಒಳಗಾಗಿದೆ.

ಘಟನೆ ಸಂಬಂಧ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಭೋಪಾಲ್​ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದ್ದಾರೆ. ಘಟನೆ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಮಲ್​ನಾಥ್ ಘಟನೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.

First published:May 2, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading