• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Cabinet Expansion: ಇಂದು ನೂತನ ಸಚಿವರ ಪದಗ್ರಹಣ, 24 ಶಾಸಕರಿಗೆ 'ಮಂತ್ರಿಭಾಗ್ಯ' ಫಿಕ್ಸ್!

Karnataka Cabinet Expansion: ಇಂದು ನೂತನ ಸಚಿವರ ಪದಗ್ರಹಣ, 24 ಶಾಸಕರಿಗೆ 'ಮಂತ್ರಿಭಾಗ್ಯ' ಫಿಕ್ಸ್!

ನೂತನ ಸಚಿವರ ಪ್ರಮಾಣ ವಚನ

ನೂತನ ಸಚಿವರ ಪ್ರಮಾಣ ವಚನ

ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಹಿನ್ನಲೆಯಲ್ಲಿ ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ (Congress) ಪಕ್ಷ ಸಿಎಂ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನು ಇಟ್ಟಿತ್ತು. ಡಿಕೆ ಶಿವಕುಮಾರ್ (DK Shivakumar) ಮನವೊಲಿಕೆ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಯಶಸ್ವಿಯಾಗಿದ್ದ ಕೈ ಹೈಕಮಾಂಡ್​ಗೆ ಸಚಿವ ಸ್ಥಾನ ಹಂಚಿಕೆ ಕೂಡ ತಲೆನೋವು ತಂದಿತ್ತು. ಈ ನಡುವೆ ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಡೆ​ಲ್ಲಿ ದೊರೆಗಳ ಜೊತೆ ಕುರ್ಚಿ ಹಂಚಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ನೂತನ ಸಚಿವ ಪಟ್ಟಿಯನ್ನು (Ministers List) ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎಲ್ಲಾ ಸಮುದಾಯ, ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇದರ ನಡುವೆ ಇಂದು ಬೆಳಗ್ಗೆ 11:30ಕ್ಕೆ ರಾಜಭವನದ (Raj Bhavan) ಗಾಜಿನ ಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.


ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ?


ಭೈರತಿ ಸುರೇಶ್, ಕೆ.ವೆಂಕಟೇಶ್, ಕೃಷ್ಣ ಬೈರೇಗೌಡ, ಡಾ.ಎಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ನಾಗೇಂದ್ರ,  ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ಎಂ.ಬಿ ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ, ಡಾ.ಎಂ.ಸಿ ಸುಧಾಕರ್.


ಇದನ್ನೂ ಓದಿ: Congress Guarantee: ‘ಕರೆಂಟ್‌ ಬಿಲ್‌ ಕಟ್ಬೇಡಿ, ಬಸ್‌ ಟಿಕೆಟ್‌ ತಗೊಳ್ಬೇಡಿ’ -‘ಕೈ’ ಗ್ಯಾರಂಟಿಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಸಮರ!


ಪಿ.ನರೇಂದ್ರಸ್ವಾಮಿ, ಎಚ್.ಕೆ. ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಭೋಸರಾಜು, ಈಶ್ವರ್‌ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ದೊರೆತಿದೆ.




ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ


ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಹಿನ್ನಲೆಯಲ್ಲಿ ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.


ಭದ್ರತೆಗಾಗಿ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, 2 ಡಿಸಿಪಿ, 4 ಎಸಿಪಿ, 10 ಇನ್ಸ್ ಪೆಕ್ಟರ್ ಸೇರಿದಂತೆ ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಫ್ತಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಹೆಚ್ಚಿನ ಭದ್ರತೆಗೆ ಕೆಎಸ್​ಆರ್​ಪಿ, ಸಿಎಆರ್​ ತುಕಡಿಗಳ ನಿಯೋಜಿಸಲಾಗಿದೆ.

top videos
    First published: