ಬೆಂಗಳೂರು(ಜೂ. 04): ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಸಿಬಿಎಸ್ಇ ಹಾಗೂ ಐಸಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಹೀಗಾಗಿ ರಾಜ್ಯದಲ್ಲೂ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಎಂಬ ಮನವಿಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.
ಆದರೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 8 ಲಕ್ಷ 75 ಸಾವಿರ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಪರೀಕ್ಷೆ ಇಲ್ಲದೆ ಅವರ ಕಲಿಕಾ ಮಟ್ಟ ನಿರ್ಧಾರವಾಗೋದು ಕಷ್ಟ. ಕಳೆದ ವರ್ಷ 9 ನೇ ತರಗತಿ ಪರೀಕ್ಷೆ ನಡೆದಿಲ್ಲ. CBSE ನಲ್ಲಿ ಮೂರು ತಿಂಗೊಳಿಗೊಮ್ಮೆ ವಿದ್ಯಾರ್ಥಿಗಳ ಇವ್ಯುಲೇಶನ್ ನಡೆಯುತ್ತೆ. ನಮ್ಮಲ್ಲಿ ಆ ಪದ್ಧತಿ ಇಲ್ಲ. ಹೀಗಾಗಿ ಎರಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಮಾಜ ವಿಜ್ಞಾನ, ಗಣಿತ, ವಿಜ್ಞಾನ- ಈ ಮೂರು ವಿಷಯ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತೆ. ಪ್ರಶ್ನೆಗಳು ಸರಳವಾಗಿರುತ್ತೆ. ನೇರವಾಗಿರುತ್ತೆ. ಬಹು ಆಯ್ಕೆ ಪ್ರಶ್ನೆಗಳು ಇರುತ್ತೆ ಎಂದು ಹೇಳಿದರು.
ಇದನ್ನೂ ಓದಿ:Gold Price Today: ಚಿನ್ನ ಕೊಳ್ಳುವವರಿಗೆ ಗುಡ್ ನ್ಯೂಸ್ ! ಬಂಗಾರದ ಬೆಲೆ ಇವತ್ತು ಜಾಸ್ತಿ ಆಗಿಲ್ಲ
ಜುಲೈ 18ರಿಂದ SSLC ಪರೀಕ್ಷೆ
ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಂದರೆ ಜುಲೈ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಆದರೆ ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಈ ಬಾರಿ 6000 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದೆ. ಒಂದು ರೂಮ್ ನಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.
ಆರೋಗ್ಯ ಇಲಾಖೆಯಿಂದ SOP ಬಿಡುಗಡೆ ಆಗುತ್ತೆ. ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡುತ್ತೇವೆ. ಬಿಇಒಗಳ ಮೂಲಕ ಬಹು ಆಯ್ಕೆ ಪ್ರಶ್ನೆಗಳ ಪರೀಕ್ಷೆ ಮಾಡುತ್ತಿದ್ದಾರೆ. ವಾಟ್ಸಪ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:Gangrape Update: ಹೆಣ್ಮಕ್ಕಳ ಶೋಷಣೆ ಮಾಡಿ ಕಾಮುಕರು ಎಷ್ಟು ಸಂಪಾದಿಸುತ್ತಿದ್ರು ಗೊತ್ತಾ? ಕೇಳಿ ಪೊಲೀಸರೇ ಶಾಕ್ !
ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ತುಂಬಾ ಚರ್ಚೆ ಆಗ್ತಿದೆ. ಕಳೆದ ವರ್ಷ ಬೇರೆ ಸವಾಲನ್ನು ಎದುರಿಸಿ ಪರೀಕ್ಷೆ ಮಾಡಿದ್ದೇವೆ. ಆದ್ರೆ ಈ ವರ್ಷ ತುಂಬಾ ಗಂಭೀರ ಪರಿಸ್ಥಿತಿ ಇದೆ. ಪರೀಕ್ಷೆ ಮಾಡಿ ಎಂದು ವರ್ಗ, ಮಾಡಬೇಡಿ ಎಂಬುವುದು ಮೊತ್ತೊಂದು ವರ್ಗ ಇದೆ. ತಜ್ಞ ಬಳಿ ಅಭಿಪ್ರಾಯ, ಪೋಷಕರ ಅಭಿಪ್ರಾಯ, ಮಕ್ಕಳ ಅಭಿಪ್ರಾಯ ಕೇಳಿದ್ದೇನೆ. ನಮ್ಮ ಇಲಾಖೆ ಜೊತೆ ಮೂರು ಸುತ್ತಿನ ಸಭೆ ನಡೆಸಿದ್ದೇನೆ. ಯಾವುದೇ ನಿರ್ಧಾರ ತಗೊಂಡ್ರು, ಟೀಕೆ, ಅಸಮಾಧಾನ ಆಗುತ್ತೆ. ಮಕ್ಕಳ ಆರೋಗ್ಯ ಹಿತದೃಷ್ಟಿ, ಮಕ್ಕಳ ಮುಂದಿನ ಭವಿಷ್ಯ ಬಗ್ಗೆ ತುಂಬ ಚಿಂತನೆ ನಡೆಸಿದ್ದೇನೆ ಎಂದು ಸುರೇಶ್ ಕುಮಾರ್ ಹೇಳಿದರು.
ಮೊದಲ ಪಿಯುಸಿ ಅಂಕದ ಆಧಾರದ ಮೇಲೆ 2nd PUC ಫಲಿತಾಂಶ
ಕಳೆದ ವರ್ಷದ ಮೊದಲ ಪಿಯುಸಿ ಪರೀಕ್ಷೆ ಎದುರಿಸಿದ್ರು. ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಆ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಕೊಡಲು ತಯಾರಿ ನಡೆಸಲಾಗಿದೆ. ಕೆಲ ಮಾನದಂಡಗಳ ಆಧಾರದ ಮೇಲೆ ಎ,ಬಿ,ಸಿ ಗ್ರೇಡ್ ಕೊಡುತ್ತೇವೆ. ಯಾವುದೇ ಮಗು ನನಗೆ ಕೊಟ್ಟಿರುವ ಅಂಕ ಸರಿ ಇಲ್ಲ ಎಂದು ಹೇಳಿದರೆ, ಆ ಮಕ್ಕಳಿಗೆ ಪರೀಕ್ಷೆ ನಡೆಸುವ ಕುರಿತು ಚಿಂತನೆ ನಡೆಸುತ್ತೇವೆ ಎಂದರು.
ಈ ವರ್ಷದ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಯಾವ ರೀತಿ ಗ್ರೇಡ್ ಕೊಡಬಹುದು. ಅವ್ರ ಕಲಿಕೆ ಬಗ್ಗೆ ಏನ್ ಮಾಡಬಹುದು ಎಂದು ತಿಳಿದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು ಬಗ್ಗೆ ಕೇಳಿದ್ದೇವೆ. ನಮ್ಮ ರಾಜ್ಯದಲ್ಲಿ ಈ ವರ್ಷ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದೇವೆ. ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಡ್ ಮುಖಾಂತರ ಅಂಕ ನೀಡ್ತೇವೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ