ಬೆಂಗಳೂರು: ನಿನ್ನೆಯಷ್ಟೇ 10ನೇ ತರಗತಿ (10th Class) ಪರೀಕ್ಷಾ ಫಲಿತಾಂಶ (Exam Result) ಬಂದಿದೆ. ಕೊರೋನಾ (Corona) ಆತಂಕದಲ್ಲೇ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು (Students), ಉತ್ತಮ ಅಂಕ (Marks) ಪಡೆದು ಗೆದ್ದು, ಬೀಗಿದ್ದಾರೆ. 10 ವರ್ಷಗಳಲ್ಲೇ ಅತ್ಯಧಿಕ ರಿಸಲ್ಟ್ ಬಂದಿದೆ. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ (Girls) ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು (Boys) ಪಾಸ್ (Pass) ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ (Grace Marks) ಮೂಲಕ ಪಾಸ್ ಆಗಿದ್ದಾರೆ. ಇದೀಗ ವಿದ್ಯಾರ್ಥಿಗಳ ಬದುಕಿನಲ್ಲಿ ಮತ್ತೊಂದು ಮಹತ್ವದ ಘಟ್ಟವಾದ ದ್ವಿತೀಯ ಪಿಯುಸಿ (2nd PUC) ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (Minister BC Nagesh) ಮಾಹಿತಿ ನೀಡಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ರಿಂದ ಮಾಹಿತಿ
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
✅ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ.
✅ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ.
✅ ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.#PUCKarnataka
— B.C Nagesh (@BCNagesh_bjp) May 20, 2022
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು. ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: SSLC Result 2022: ಬಡತನದಲ್ಲೂ ಕುಗ್ಗದ ಅಮಿತೋತ್ಸಾಹ, ಎಸ್ಎಸ್‌ಎಲ್‌ಸಿಯಲ್ಲಿ ಟಾಪರ್ ಆದ ವಿಜಯಪುರದ ಹುಡುಗ!
ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿದ್ದ ಪರೀಕ್ಷೆ
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಏಪ್ರಿಲ್ 22 ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ವಾರ್ಷಿಕ ಪ್ರಾರಂಭಇಸಿತ್ತು. ಏಪ್ರಿಲ್ 22ರಿಂದ ಶುರುವಾದ ಪರೀಕ್ಷೆ ಮೇ 18ರಂದು ಮುಕ್ತಾಯವಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದರು. ಇವರಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ಅಭ್ಯರ್ಥಿಗಳು 21,928 ಎಂದು ಇಲಾಖೆ ಮಾಹಿತಿ ನೀಡಿತ್ತು.
ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ
ನಿನ್ನೆ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿತ್ತು. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು ಪಾಸ್ ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ.
ಇದನ್ನೂ ಓದಿ: Supplementary Exam: ಫೇಲ್ ಆಗಿದ್ದಕ್ಕೆ ಭಯ ಬೇಡ, ನಿಮಗಿದೆ ಇನ್ನೊಂದು ಚಾನ್ಸ್; ಮೇ 27ರಿಂದ SSLC ಪೂರಕ ಪರೀಕ್ಷೆ
145 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಮಾರ್ಕ್ಸ್
ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ಅಂಕ ಪಡೆದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯೂ ಫಲಿತಾಂಶದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಮೆಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದ ಶೇಕಡಾ 91.32ರಷ್ಟು ವಿದ್ಯಾರ್ಥಿಗಳು ಹಾಗೂ ನಗರ ಪ್ರದೇಶದ ಶೇಕಡಾ 86.64ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿ ಪರಿಪೂರ್ಣ ಅಂಕ ಅಂದರೆ 625ಕ್ಕೆ 625 ಅಂಕಗಳನ್ನು 145 ಮಕ್ಕಳು ಪಡೆದಿದ್ದಾರೆ. ಈ ಪೈಕಿ 21 ಸರ್ಕಾರಿ ಶಾಲೆ, 8 ಅನುದಾನಿತ ಶಾಲೆ ಹಾಗೂ 116 ಖಾಸಗಿ ಶಾಲೆಗಳ ಮಕ್ಕಳು ಪೂರ್ಣ ಅಂಕ ಪಡೆದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ