2nd PUC Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಆಗಸ್ಟ್ 12 ರಿಂದ 25ರ ವರೆಗೆ ಪೂರಕ ಪರೀಕ್ಷೆ ನಡೆಸಲಿದೆ.  ಶಿಕ್ಷಣ ಇಲಾಖೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಜು.15): ದ್ವಿತೀಯ ಪಿಯುಸಿ (2nd PUC)  ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಆಗಸ್ಟ್ 12 ರಿಂದ 25ರ ವರೆಗೆ ಪೂರಕ ಪರೀಕ್ಷೆ (Supplementary Exam) ನಡೆಯಲಿದೆ. ಈ ಕುರಿತು  ಶಿಕ್ಷಣ ಇಲಾಖೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.  ಆಗಸ್ಟ್ 12 ರಂದು ಕನ್ನಡ, ಅರೇಬಿಕ್ ಭಾಷೆಗೆ ಪರೀಕ್ಷೆ ಇರಲಿದೆ, ಆಗಸ್ಟ್  13 ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯಕ್ಕೆ ಪರೀಕ್ಷೆ,  ಆಗಸ್ಟ್ 16ಕ್ಕೆ  ಹಿಂದಿ, ಮಲಯಾಳಂ, ತಮಿಳು, ತೆಲುಗು, ಮರಾಠಿ, ಸಂಸ್ಕೃತ, ಫ್ರೆಂಚ್ ಭಾಷೆಗೆ ಪರೀಕ್ಷೆ ನಡೆಯಲಿದೆ. 17 ರಂದು ಐಚ್ಛಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ‌ ಗಣಿತ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. ಕೊನೆ ದಿನ ಆಗಸ್ಟ್ 25 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ವಿಷಯಕ್ಕೆ ಪರೀಕ್ಷೆ ನಡೆಯಲಿದೆ

2nd PUC ಪೂರಕ ಪರೀಕ್ಷೆಗೆ ವೇಳಾಪಟ್ಟಿ

ಆಗಸ್ಟ್ 12 ರಂದು- ಕನ್ನಡ, ಅರೇಬಿಕ್

ಆಗಸ್ಟ್ 13 ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ಆಗಸ್ಟ್ 16 ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ,ಉರ್ದು, ಸಂಸ್ಕೃತ,ಫ್ರೆಂಚ್

ಆಗಸ್ಟ್ 17 ಐಚ್ಚಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ

ಆಗಸ್ಟ್ 18 ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಆಗಸ್ಟ್ 19 ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ

ಆಗಸ್ಟ್ 20 ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ಆಗಸ್ಟ್ 22 ಇಂಗ್ಲೀಷ್, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಆಗಸ್ಟ್ 23 ಅರ್ಥಶಾಸ್ತ್ರ, ಜೀವಶಾಸ್ತ್ರ

ಆಗಸ್ಟ್ 24 ಇತಿಹಾಸ, ಸಂಖ್ಯಾಶಾಸ್ತ್ರ

ಆಗಸ್ಟ್ 25 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

4,22,966 ವಿದ್ಯಾರ್ಥಿಗಳು ಉತ್ತೀರ್ಣ

ಈ ವರ್ಷ ಒಟ್ಟು 6,83,563 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸೈನ್ಸ್‌ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು. ಶೇಕಡಾ 68.72ರಷ್ಟು ಬಾಲಕಿಯರು ಮತ್ತು ಶೇಕಡಾ 55.22ರಷ್ಟು ಬಾಲಕರು ತೇರ್ಗಡೆ ಹೊಂದಿದ್ದರು.

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು. ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ವರ್ಷದ ದ್ವಿತೀಯ ಪಿಯಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿತ್ತು.

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು.

ಉತ್ತರ ಪ್ರತಿ ಡೌನ್​ಲೋಡ್​ ಮಾಡಿಕೊಳ್ಳಲು ಇಂದೇ ಕೊನೆ ದಿನ

ದ್ವಿತೀಯ ಪಿಯು ಪರೀಕ್ಷೆ ಉತ್ತರ ಪ್ರತಿಗಳನ್ನು ಸ್ಕ್ಯಾನ್ಡ್‌ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಇತ್ತೀಚಿಗಷ್ಟೆ ದಿನಾಂಕ ವಿಸ್ತಾರಣೆ ಮಾಡಲಾಗಿತ್ತು. ಇದೀಗ ಉತ್ತರ ಪ್ರತಿ ಡೌನ್​ಲೋಡ್​ ಮಾಡಿಕೊಳ್ಳಲು ಇಂದೇ ಕೊನೆಯ ದಿನ ಎಂದು ಶಿಕ್ಷಣ ಇಲಾಖೆ (Department of Education) ಮಾಹಿತಿ ನೀಡಿದೆ. ಇನ್ನುವಿದ್ಯಾರ್ಥಿಗಳು ಪುಟಗಳನ್ನು ಡೌನ್‌ಲೋಡ್‌ ಮಾಡಿಕೊಂಡ ನಂತರ ನ್ಯೂನತೆಗಳು  ಕಂಡುಬಂದರೆ  jdexam.dpue@gmail.com ಗೆ ಮನವಿ ಕಳುಹಿಸಬಹುದು. ಅಥವಾ 080–23083860, 23083864  ನಂಬರ್​ಗೆ ಕರೆ ಮಾಡಿ ನಿಮ್ಮ ಸಮಸ್ಯೆ ತಿಳಿಸಬಹುದಾಗಿದೆ.

ಉತ್ತರ ಪತ್ರಿಕೆಯನ್ನು ಡೌನ್​ಲೋಡ್​ ಮಾಡಿಕೊಳ್ಳೋದು ಹೇಗೆ?

ಉತ್ತರ ಪತ್ರಿಕೆಗಾಗಿ ಈಗಾಗಲೇ ಅರ್ಜಿ ಸಲ್ಲಿಸಿರೋ ವಿದ್ಯಾರ್ಥಿಗಳ ಮೊಬೈಲ್​ಗೆ ಓಟಿಪಿ

ಅರ್ಜಿ ಸಲ್ಲಿಸುವ ವೇಳೆ ನೀಡಿರೋ ಮೊಬೈಲ್‌ಗೆ ಓಟಿಪಿ ಕಳಿಸಲಿರೋ ಶಿಕ್ಷಣ ಇಲಾಖೆ

ಓಟಿಪಿ ಬಂದ ಬಳಿಕ ವೆಬ್‌ಸೈಟ್‌ನಲ್ಲಿ ಪ್ರತಿ ಡೌನ್‌ಲೋಡ್ ಮಾಡಬಹುದು

ವಿದ್ಯಾರ್ಥಿಗಳಿಗೆ ಉಪಯುಕ್ತವಾಗೋ ನಿಟ್ಟಿನಲ್ಲಿ ಸರಳೀಕರಣ ಮಾಡಲಾಗಿದೆ
Published by:Pavana HS
First published: