• Home
  • »
  • News
  • »
  • state
  • »
  • Student Arrest: ಮಂಗಳೂರು ಕಿಸ್ಸಿಂಗ್ ಕೇಸ್​: ಮತ್ತೆ ಮೂವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

Student Arrest: ಮಂಗಳೂರು ಕಿಸ್ಸಿಂಗ್ ಕೇಸ್​: ಮತ್ತೆ ಮೂವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ವಿದ್ಯಾರ್ಥಿಗಳ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಮೊದಲು ಐವರು ವಿದ್ಯಾರ್ಥಿಗಳನ್ನು ಬಂಧಿಸಿ ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇದೀಗ ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • Share this:

ಮಂಗಳೂರು (ಜು. 24): ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್​ ಪ್ರಕರಣಕ್ಕೆ (Kissing Case) ಸಂಬಂಧಿಸಿದಂತೆ ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ವಶಕ್ಕೆ ಪಡೆಯದ ವಿದ್ಯಾರ್ಥಿಗಳ  (Student) ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್​​ (Apartment) ನಲ್ಲಿ ವಾಸವಿದ್ದ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರನ್ನು (Students) ರೂಮಿಗೆ ಕರೆಸಿಕೊಂಡು ಟ್ರುತ್ ಆ್ಯಂಡ್ ಡೇರ್ ಗೇಮ್ ಮೂಲಕ ಅವರಿಗೆ ಕಿಸ್ಸಿಂಗ್ ಮಾಡಿ ಅನುಚಿತವಾಗಿ ವರ್ತಿಸಿ ಅದರ ವಿಡಿಯೋ ಮಾಡಿದ್ದರು.


ಕಿಸ್ಸಿಂಗ್ ಕೇಸ್​ಗೆ ಸಂಬಂಧಿಸಿದಂತೆ 8 ಮಂದಿ ಬಂಧನ


ವಿದ್ಯಾರ್ಥಿಗಳ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದರು.ಈ ಸಂಬಂಧ 3 ಪ್ರತ್ಯೇಕ ಪೋಕ್ಸೊ ಪ್ರಕರಣ ದಾಖಲಾಗಿವೆ. ತನಿಖೆ ನಡೆಸುತ್ತಿರುವ ಪೊಲೀಸರು ಈ ಮೊದಲು ಐವರು ವಿದ್ಯಾರ್ಥಿಗಳನ್ನು ಬಂಧಿಸಿ ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇದೀಗ ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 3 ಪೋಕ್ಸೊ ಪ್ರಕರಣಗಳಲ್ಲಿ ಈವರೆಗೆ 8 ಮಂದಿಯನ್ನು ವಶಕ್ಕೆ ಪಡೆದಂತಾಗಿದೆ.


ಇದನ್ನೂ ಓದಿ: Basavaraj Bommai: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ


ಏನಿದು ಕಿಸ್ಸಿಂಗ್ ಪ್ರಕರಣ


ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಹುಚ್ಚಾಟದ ವಿಡಿಯೋ ವೈರಲ್ ಆಗಿತ್ತು. ಮನೆಯೊಂದರಲ್ಲಿ ನಡೆದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಕಿಸ್ಸಿಂಗ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಆಕ್ರೋಶಕ್ಕೂ ಕಾರಣವಾಗಿತ್ತು. ಇಲ್ಲಿ ಪಂದ್ಯದ ನಿಯಮದಂತೇ ಎಲ್ಲರ ಎದುರೇ ಚುಂಬನ ಮಾಡಬೇಕು. ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ವಿಡಿಯೋದಲ್ಲಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಇರುವುದನ್ನ ಸಹ ಕಾಣಬಹುದಾತಿತ್ತು. ಅಲ್ಲದೇ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಪರಸ್ಪರ ಲಿಪ್ ಕಿಸ್ ಮಾಡುತ್ತಿದ್ದು, ಇತರ ವಿದ್ಯಾರ್ಥಿಗಳು ಅವರನ್ನು ಹುರಿದುಂಬಿಸುತ್ತಿರುವುದು ಸಹ ರೆಕಾರ್ಡ್ ಆಗಿತ್ತು.


ಅಪಾರ್ಟ್‌ಮೆಂಟ್‌ನಲ್ಲಿ ಕಿಸ್ಸಿಂಗ್ ಸ್ಪರ್ಧೆ


ಈ ತಂಡದ ಇಬ್ಬರು ವಿದ್ಯಾರ್ಥಿಗಳು ಬಾವುಟಗುಡ್ಡೆಯಲ್ಲಿರುವ ಅಪಾರ್ಟ್ಮೆಂಟ್​ನಲ್ಲಿ ರೂಂ ಪಡೆದಿದ್ದರು. ಅಲ್ಲಿ ಈ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ರೂಂನಲ್ಲಿ ವಿದ್ಯಾರ್ಥಿಗಳು ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳನ್ನು ತೆಗೆದುಕೊಳ್ಳುತ್ತಿದ್ದರು  ಎನ್ನಲಾಗಿದೆ. ಈ ಘಟನೆ ನಡೆದು ನಾಲ್ಕು ತಿಂಗಳುಗಳು ಆಗಿದೆ. ವಿಡಿಯೋ ಮಾಡಿದ ವಿದ್ಯಾರ್ಥಿ ಇತ್ತೀಚಿಗೆ ತನ್ನ ತರಗತಿಯ ವಾಟ್ಸಪ್ ಗ್ರೂಪ್​ಗೆ ವಿಡಿಯೋ ಹಾಕಿದ್ದಾನೆ . ಬಳಿಕ ಇದು ವೈರಲ್ ಆಗಿತ್ತು.


ಪೋಕ್ಸೋ ಮತ್ತು ಐಟಿ ಕಾಯ್ದೆ ಅಡಿ ಪ್ರಕರಣ


ಇನ್ನು ದೌರ್ಜನ್ಯ ‌ನಡೆಸಿದ ಮತ್ತು ಒಳಗಾದ ಎಲ್ಲರೂ ಅಪ್ರಾಪ್ತ ವಿದ್ಯಾರ್ಥಿಗಳು ಎನ್ನಲಾಗಿದೆತ ಸದ್ಯ ಎಂಟು ವಿದ್ಯಾರ್ಥಿಗಳ ವಿರುದ್ದ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನು ಐಟಿ ಕಾಯಿದೆಯಡಿ ಕೂಡ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ:  Vijayanand Kashapanavar: ನಟಿ ಜೊತೆಗಿನ ಫೋಟೋ ವೈರಲ್; 2ನೇ ಮದ್ವೆಯಾದ್ರಾ ಕಾಶಪ್ಪನವರ್?


ಅಗತ್ಯ ಬಿದ್ದರೆ ವಿಚಾರಣೆಗೆ ಹಾಜರಾಗಲು ಸೂಚನೆ


ಪ್ರಕರಣ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈನ ಬಗ್ಗೆ ವಿಚಾರಣೆ ನಡೆಸಿದ ಬಾಲ ನ್ಯಾಯಾಲಯವು ವಿದ್ಯಾರ್ಥಿಗಳನ್ನು ಹೆತ್ತವರ ಕಸ್ಟಡಿಗೆ ನೀಡಿದ್ದು, ಅಗತ್ಯ ಬಿದ್ದಾಗ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚಿಸಲಾಗಿದೆ.


ಪ್ರೇಯಸಿ ರುಂಡದ ಜೊತೆ ಠಾಣೆಗೆ ಬಂದ ಪ್ರಿಯಕರ; ಬೇರೆ ಮದ್ವೆಯಾದ್ರೂ ಯುವತಿ ಮೇಲೆ ಮೋಹ


ಕಳೆದ ಎರಡ್ಮೂರು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಆತ ಮನೆಯವರ ಒತ್ತಾಯದ ಮೇರೆಗೆ ಮೂರು ತಿಂಗಳ ಹಿಂದೆ ಮದುವೆಯಾಗಿದ್ದನು. ಯುವತಿ ಎಲ್ಲವನ್ನೂ ಮರೆತಯ ತನ್ನ ವಿದ್ಯಾಭ್ಯಾಸದತ್ತ ಗಮನ ನೀಡಿದ್ದಳು. ಇದೀಗ ಆ ಯುವತಿ ಪ್ರಿಯಕರನಿಂದಲೇ ಕೊಲೆಯಾಗಿದ್ದಾಳೆ.

23 ವರ್ಷದ ನಿರ್ಮಲಾ ಕೊಲೆಯಾದ ಯುವತಿ. ಭೋಜರಾಜ್ ಕೊಲೆ ಆರೋಪಿ. ಇಬ್ಬರು ವಿಜಯನಗರ ಜಿಲ್ಲೆಯ ಕಾನಹೊಸಹಳ್ಳಿಯ ನಿವಾಸಿಗಳು. ನಿರ್ಮಲಾ ಮತ್ತು ಭೋಜರಾಜ್ ಪ್ರೀತಿಸುತ್ತಿದ್ದರು. ಆದ್ರೆ ಬೋಜರಾಜ್ ಮನೆಯವರು ತೋರಿಸಿದ ಯುವತಿಯನ್ನು ಮದುವೆಯಾಗಿದ್ದರಿಂದ ನಿರ್ಮಲಾ ಮೌನವಾಗಿದ್ದರು.

Published by:Pavana HS
First published: