ಚಿಕ್ಕಮಗಳೂರು(ಫೆ.10): ಕೊರೊನಾ ವೈರಸ್ ಹರಡುವ ಆತಂಕದಲ್ಲಿರುವಾಗಲೇ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದೆ. ಜನರಲ್ಲಿ ಭಾರೀ ಆತಂಕ ಮೂಡಿಸಿರುವ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸದ್ಯ ಮೂವರು ಕಾರ್ಮಿಕರಲ್ಲಿ ಮಂಗನ ಜ್ವರ ಕಾಣಿಸಿಕೊಂಡಿದ್ದು ಆತಂಕ ಹೆಚ್ಚಿಸಿದೆ.
ಚಿಕ್ಕಮಗಳೂರಿನ ಎನ್.ಆರ್.ಪುರದ ಮಡಬೂರಿನಲ್ಲಿ ಮೂವರು ಕಾರ್ಮಿಕರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ. ಕಾರ್ಮಿಕರು ಅಸ್ಸಾಂ ಮೂಲದವರು ಎಂದು ತಿಳಿದು ಬಂದಿದೆ. ಆ ಕಾರ್ಮಿಕರಲ್ಲಿ ಮಂಗನ ಕಾಯಿಲೆ ಇರುವುದನ್ನು ಜಿಲ್ಲಾ ಇಲಾಖೆಯು ದೃಢಪಡಿಸಿದೆ. ಕಾರ್ಮಿಕರಿಂದ ಬೇರೆಯವರಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
ಬೆಂಗಳೂರಿನಲ್ಲಿ ಅನೈತಿಕ ಸಂಬಂಧ ಹೊಂದಿದ್ದ ಗಂಡನ ಮೇಲೆ ಬಿಸಿ ಎಣ್ಣೆ ಸುರಿದ ಹೆಂಡತಿ!
ಗ್ರಾಮಕ್ಕೆ ವಿಚಕ್ಷಣ ವೈದ್ಯ ಸುಭಾಷ್ ನೇತೃತ್ವದ ತಂಡ ದೌಡಾಯಿಸಿದ್ದು, ತಪಾಸಣೆ ನಡೆಸಿದ್ದಾರೆ. ಮಂಗನ ಕಾಯಿಲೆ ಹರಡಿರುವ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮವನ್ನು ಹಾಟ್ ಸ್ಪಾಟ್ ಎಂದು ಪರಿಗಣಿಸಲಾಗಿದೆ. ಸ್ಥಳದ 5 ಕಿ.ಮೀ. ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ನಿರೋಧಕ ಲಸಿಕೆ ಹಾಕಲಾಗುತ್ತಿದೆ. 6 ರಿಂದ 65 ವರ್ಷದ ವಯೋಮಾನದವರಿಗೆ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಲಾಗುತ್ತಿದೆ.
ಇನ್ನು,
ಸೋಂಕು ತಗುಲಿರುವ ಮೂವರು ಕಾರ್ಮಿಕರನ್ನು ಶಿವಮೊಗ್ಗದ ಮಗ್ಗಾನ್ ಆಸ್ಪತ್ರೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ ಅಂತಾ ಆಸ್ಪತ್ರೆಗೆ ಬಂದಾಗ ಮಂಗನ ಕಾಯಿಲೆ ಇರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆಯಲ್ಲಿ ಸಿಬ್ಬಂದಿಗೆ ಕಾಯಿಲೆ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ.
ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆ: ಹೇಯ ಕೃತ್ಯಕ್ಕೆ ಸಾಕ್ಷಿಯಾದ ಚಾಮರಾಜನಗರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ