ಬೆಂಗಳೂರು (ಜು.2): ಮಂಕಿಪಾಕ್ಸ್ (Monkeypox) ಸೋಂಕು ತಡೆಗಟ್ಟುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯಲ್ಲಿ ನಡೆಯಿತು. ಜುಲೈ 22ರಂದು ವಿಶ್ವ ಆರೋಗ್ಯ ಸಂಸ್ಥೆ ಈ ಪಿಡುಗನ್ನು ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿ ಎಂದು ಘೋಷಣೆ ಮಾಡಿದ್ದು ವಿಶ್ವದಾದ್ಯಂತ ಸುಮಾರು 80 ದೇಶಗಳಲ್ಲಿ, 20,000 ಜನರಲ್ಲಿ ಈ ಸೋಂಕು ಕಂಡು ಬಂದಿದೆ. ಭಾರತದಲ್ಲಿ ಇದುವರೆಗೆ 6 ಕೇಸ್ ಪತ್ತೆ ಆಗಿದೆ.
3 ಜನರ ಪೈಕಿ ಇಬ್ಬರಿಗೆ ನೆಗಟಿವ್
ಕೇರಳದಲ್ಲಿ 4 ಮತ್ತು ದೆಹಲಿಯಲ್ಲಿ 2 ಸೇರಿದಂತೆ ಈವರೆಗೂ ಭಾರತದಲ್ಲಿ ಒಟ್ಟು 6 ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು ಕರ್ನಾಟಕದಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ರಾಜ್ಯದಲ್ಲಿ ಸೋಂಕು ಲಕ್ಷಣ ಕಂಡುಬಂದಿದ್ದ 3 ಜನರ ಪೈಕಿ ಇಬ್ಬರಿಗೆ ನೆಗಟಿವ್ ಎಂದು ಧೃಡಪಟ್ಟಿದ್ದು ಬೆಲ್ಜಿಯಂ ಮೂಲದ ವ್ಯಕ್ತಿಯೊಬ್ಬರನ್ನ ಪರೀಕ್ಷೆಗೊಳಪಡಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಶಂಕಿತ ಪ್ರಕರಣಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ
ಶಂಕಿತ ಪ್ರಕರಣಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲು ಬೆಂಗಳೂರಿನ ಇಂದಿರಾನಗರದ ಸಾಂಕ್ರಾಮಿಕ ರೋಗ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಡೆಸಿಗ್ನೇಟೆಡ್ ಆಸ್ಪತ್ರೆ ಎಂದು ಗುರುತಿಸಲಾಗಿದೆ.
ಶಂಕಿತ ಪ್ರಕರಣಗಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲು ಬೆಂಗಳೂರಿನ ಇಂದಿರಾನಗರದ ಸಾಂಕ್ರಾಮಿಕ ರೋಗ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಡೆಸಿಗ್ನೇಟೆಡ್ ಆಸ್ಪತ್ರೆ ಎಂದು ಗುರುತಿಸಲಾಗಿದೆ.
3/5
— Dr Sudhakar K (@mla_sudhakar) August 2, 2022
ಸೋಂಕು ನಿಯಂತ್ರಣಕ್ಕಾಗಿ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಕೇರಳದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಸೇರಿದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: HDK Warning: 'ಇನ್ನೆಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರ್ತಿದ್ದಾರೆ ಅಮಿತ್ ಶಾ?'
ಮಂಕಿಪಾಕ್ಸ್ ಕೊರೊನಾ ಸೋಂಕಿನಷ್ಟು ವೇಗವಾಗಿ ಹರಡುವುದಿಲ್ಲವಾದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಆದಾಗ್ಯೂ ಶುಚಿತ್ವ ಕಾಪಾಡುವುದು, ಸೋಂಕಿನ ಲಕ್ಷಣ ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಮುಂತಾದ ಮುನ್ನೆಚ್ಚರಿಕೆಗಳನ್ನು ಪಾಲಿಸುವ ಮೂಲಕ ಮಂಕಿಪಾಕ್ಸ್ ತಡೆಗಟ್ಟಲು ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು
1. ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು.
2. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
3. ಸೋಂಕಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಬಹುದಾದ ಖಾಸಗಿ ಸಂಸ್ಥೆಗಳನ್ನು ಗುರುತಿಸಬೇಕು
4. ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವಂತೆ ಸೂಚಿಸಿದರು.
5. ಮಂಕಿಪಾಕ್ಸ್ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವ್ಯಾಪಕವಾಗಿ ಪ್ರಚಾರ ಕಾರ್ಯ ಕೈಗೊಳ್ಳುವುದು.
ಇದನ್ನೂ ಓದಿ: AAP Complaint: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ; ಲೋಕಾಯುಕ್ತಕ್ಕೆ ದೂರು
ಸಭೆಯಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ:ಅರುಂಧತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶ್ರೀಕರ್, ಆರೋಗ್ಯ ಟಾಸ್ಕ್ ಫೋರ್ಸ್ ಅಧ್ಯಕ್ಷ ಡಾ: ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ