ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥ - ಅಡುಗೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಪ್ರಾಥಮಿಕ ಚಿಕಿತ್ಸೆ ನಂತರ ಸೇಡಂ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ದಾಖಲು ಮಾಡಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ

ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳು

ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳು

  • Share this:
ಕಲಬುರ್ಗಿ(ಫೆ.14) : ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ ನಡೆದಿದೆ.

ಶಿಲಾರಕೋಟ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ವಿದ್ಯಾರ್ಥಿಗಳು, ಸಂಜೆ ವೇಳೆಗೆ ವಾಂತಿ-ಬೇಧಿ ಮಾಡಿಕೊಳ್ಳ ಆರಂಭಿಸಿದ್ದರು. ವಿದ್ಯಾರ್ಥಿಗಳು ವಾಂತಿ-ಬೇಧಿ ಮಾಡಿಕೊಳ್ಳೋದನ್ನು ನೋಡಿ ಗಾಬರಿಗೊಂಡ ಶಿಕ್ಷಕರು, ಪೋಷಕರು ತಕ್ಷಣ ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನಂತರ ಸೇಡಂ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ದಾಖಲು ಮಾಡಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಅಡುಗೆ ಮಾಡುವವರ ನಿರ್ಲಕ್ಷಯದಿಂದಲೇ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ರೈತ ಸಂಘಟನೆಗಳ ದುಂಡು ಮೇಜಿನ ಸಭೆ - ತೊಗರಿ ಖರೀದಿ ಮಿತಿ ಹೆಚ್ಚಳಕ್ಕೆ ಆಗ್ರಹ

ಹುಳು ಬಿದ್ದ ಸಾಮಾಗ್ರಿಯೊಂದಿಗೆ ಅಡುಗೆ ಮಾಡುತ್ತಿದ್ದರೆಂಬ ಆರೋಪವೂ ಈ ಹಿಂದೆ ಕೇಳಿಬಂದಿತ್ತು. ಇದೀಗ ಬಿಸಿಯೂಟದಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುವಂತಾಗಿದೆ. ಘಟನಾ ಸ್ಥಳಕ್ಕೆ ಪಿಐ ತಿಮ್ಮರಾಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
First published: