ತುಮಕೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ದಿನದಿಂದಲೂ ಪಕ್ಷಾಂತರ ಪರ್ವ ಮುಂದುವರಿದಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ಬಹಿರಂಗವಾಗಿಯೇ ಜೆಡಿಎಸ್ ಹಾಗೂ ಬಿಜೆಪಿ (Congress And JDS) ಕಾರ್ಯಕರ್ತರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಇದೀಗ ತುಮಕೂರಿನಲ್ಲಿ (Tumakuru) ಕಾಂಗ್ರೆಸ್ಗೆ ಬಿಜೆಪಿ ಟಕ್ಕರ್ ನೀಡಿದೆ. ತುರುವೇಕೆರೆಯಲ್ಲಿ (Turuvekere) ಸುಮಾರು 300 ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ಸೇರಿದಂತೆ 300 ಕ್ಕೂ ಹೆಚ್ಚು ಮುಖಂಡರು ಬಿಜೆಪಿ ಸೇರಿದ್ದಾರೆ.
ತುರುವೇಕೆರೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆಮೆಲ್ ಕಾಂತರಾಜು ಸ್ಪರ್ಧೆ ಮಾಡಿದ್ದಾರೆ. ಬೆಮೆಲ್ ಕಾಂತರಾಜು ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ತುರುವೇಕೆರೆ ಕ್ಷೇತ್ರದ ಸಿಎಸ್ ಪುರ, ದಬ್ಬೆಘಟ್ಟ, ಮಾಯಸಂದ್ರ ಹೋಬಳಿಯ ಭಾಗದ ಸುಮಾರು 300ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ಗೆ ಗುಡ್ಬೈ ಹೇಳಿದ್ದಾರೆ.
ಇಂದು ತುರುವೇಕೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡು, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ
ಗೋಕಾಕ್‌ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಸೋಲಿಸಲು ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ.
ಇದನ್ನೂ ಓದಿ: Rizwan Arshad: ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ರಾಜಕೀಯ ಜೀವನ ಹೀಗಿದೆ
ಗೋಕಾಕ್ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ನಾಮಪತ್ರ ವಾಪಸ್ ಪಡೆದುಕೊಂಡಿರುವ ಚಂದನ್ ಗಿಡ್ಡನವರ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಡಾ.ಮಹಾಂತೇಶ ಕಡಾಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ