ಮಹಾ ಶಿವರಾತ್ರಿಯಂದು ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿಯಾಗಿ 300 ಬಸ್ ಸೇವೆ

ನಾಲ್ಕು ಅಥವಾ ಹೆಚ್ಚು ಮಂದಿ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ, ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್‌ ಒಮ್ಮೆಲೇ ಕಾಯ್ದಿರಿಸಿದರೆ, ವಾಪಸ್‌ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಬೆಂಗಳೂರು: ಮಹಾಶಿವರಾತ್ರಿಯ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಫೆಬ್ರವರಿ 20, 21ರಂದು ರಾಜ್ಯ ಮತ್ತು ಹೊರ ರಾಜ್ಯದ ನಾನಾ ಪ್ರದೇಶಗಳಿಗೆ ಹೆಚ್ಚುವರಿಯಾಗಿ 300 ವಿಶೇಷ ಬಸ್​ಗಳ ಸೇವೆಯನ್ನು ಒದಗಿಸಿದೆ. ಹಾಗೆಯೇ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಫೆಬ್ರವರಿ 23ರಂದು ವಿಶೇಷ ಬಸ್​ ಸೇವೆ ವ್ಯವಸ್ಥೆಯನ್ನು ಕಲ್ಪಿಸಿದೆ.

  ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ , ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಸೇರಿದಂತೆ ಇನ್ನಿತರೆ ಸ್ಥಳಗಳಿಗೆ ವಿಶೇಷ ಬಸ್‌ಗಳು ಹೆಚ್ಚುವರಿಯಾಗಿ ಓಡಲಿವೆ.

  ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ಸಂಚರಿಸಲಿವೆ. ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಮುಂತಾದ ಪ್ರದೇಶಗಳಿಗೆ ತೆರಳುವ ಐಷಾರಾಮಿ ಬಸ್‌ಗಳು ಶಾಂತಿನಗರದಲ್ಲಿನ ಡಿಪೊ 4 ಮತ್ತು ಡಿಪೊ 2ರ ಮುಂಭಾಗದಿಂದ ಕಾರ್ಯಾಚರಣೆಗೊಳ್ಳಲಿವೆ.

  ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರ 18ನೇ ಅಡ್ಡರಸ್ತೆ, ಬನಶಂಕರಿ, ಜೀವನಭೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ.

  ಇದನ್ನು ಓದಿ: ಕನಕಪುರ ಮೆಡಿಕಲ್​ ಕಾಲೇಜ್​ ಸ್ಥಳಾಂತರ ಎಷ್ಟು ಸರಿ?; ಸಿಎಂ ಭೇಟಿಯಾಗಿ ಸರ್ಕಾರದ ಕ್ರಮ ಪ್ರಶ್ನಿಸಿದ ಡಿಕೆ ಶಿವಕುಮಾರ್​​

  ನಾಲ್ಕು ಅಥವಾ ಹೆಚ್ಚು ಮಂದಿ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ, ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್‌ ಒಮ್ಮೆಲೇ ಕಾಯ್ದಿರಿಸಿದರೆ, ವಾಪಸ್‌ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ.
  First published: