ದಾವಣಗೆರೆಯಲ್ಲಿ ಡಿವೈಡರ್​ಗೆ ಕಾರು ಡಿಕ್ಕಿ; ನಾಲ್ವರ ದುರ್ಮರಣ

news18
Updated:September 8, 2018, 10:06 AM IST
ದಾವಣಗೆರೆಯಲ್ಲಿ ಡಿವೈಡರ್​ಗೆ ಕಾರು ಡಿಕ್ಕಿ; ನಾಲ್ವರ ದುರ್ಮರಣ
news18
Updated: September 8, 2018, 10:06 AM IST
-ಹೆಚ್​ಎಂಪಿ ಕುಮಾರ್, ನ್ಯೂಸ್​ 18 ಕನ್ನಡ

ದಾವಣಗೆರೆ,(ಸೆ.08): ಡಿವೈಡರ್​​ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ವಿನಯ್ (27), ಅಜಯ್ (32) ವಿನಯ್ (30) ಸ್ಥಳದಲ್ಲಿಯೇ ಸಾವನ್ನಪ್ಪಿದರೇ, ಸಿದ್ದಪ್ಪ (28) ಎಂಬಾತ  ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು,  ಜಿಲ್ಲಾ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.

ಮೃತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಡಿಟಿಡಿಸಿ ಕೊರಿಯರ್ ಉದ್ಯೋಗಿಗಳಾಗಿದ್ದರು. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕೆಎ 42. ಎಂ 9491 ಕ್ರಿಯೇಟ್ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
First published:September 8, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...