Student Suicide: ದ್ವಿತೀಯ PUC ಪರೀಕ್ಷೆಯಲ್ಲಿ ಫೇಲ್​ ಆದವರು ಪ್ರಾಣವನ್ನೇ ಕಳೆದುಕೊಂಡ್ರು; ರಾಜ್ಯಾದ್ಯಂತ ನಾಲ್ವರ ಸೂಸೈಡ್

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಫೇಲ್ ಆಗಿದ್ದಕ್ಕೆ ಹಾಗೂ ಕಡಿಮೆ ಅಂಕ ಪಡೆದಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳು ದೃತಿಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೊಡಗು (ಜೂ 18): ಇಂದು ದ್ವಿತೀಯ ಪಿಯುಸಿ (2nd PUC) ಫಲಿತಾಂಶ (Result) ಪ್ರಕಟವಾಗಿದೆ. 5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ. ಫೇಲ್ ಆಗಿದ್ದಕ್ಕೆ ಹಾಗೂ ಕಡಿಮೆ ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು ದೃತಿಗೆಟ್ಟು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಕೊಡಗಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಪಡೆದಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವನ ಹಳ್ಳಿ ನಿವಾಸಿ ಸಂಧ್ಯಾ (18) ಮೃತ ದುರ್ದೈವಿ, ಕುಶಾಲನಗರ ವಿವೇಕಾನಂದ ಕಾಲೇಜಿನಲ್ಲಿ PUC ಓದುತ್ತಿದ್ದ ವಿದ್ಯಾರ್ಥಿನಿ ಸಂಧ್ಯಾ, ಹೆರೂರು ನಿವಾಸಿ ನಿವೃತ ಯೋಧ  ಸುಭಾಷ್ ಪುತ್ರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯದಲ್ಲೂ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಡ್ಯದ ಶ್ರೀರಂಗಪಟ್ಟಣದ ಮಹದೇವಪುರದಲ್ಲಿ ಪರೀಕ್ಷೆಯಲ್ಲಿ ಫೇಲ್​ ಆದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಪಂದನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಮಂಡ್ಯದ ಸಾಂತೋಂ ಕಾಲೇಜಿನ ಪಿಸಿಎಂಬಿ ವ್ಯಾಸಂಗ ಮಾಡ್ತಿದ್ದ ಸ್ಪಂದನಾ ಫಿಸಿಕ್ಸ್, ಕೆಮಿಸ್ಟ್ರಿ ಹಾಗೂ ಮ್ಯಾಥಮೆಟಿಕ್ಸ್ ನಲ್ಲಿ ಅನುತೀರ್ಣಳಾಗಿದ್ದು, ಇದ್ರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕ್ತಿದ್ದಾರೆ.

ಕಾರವಾರದಲ್ಲೂ ನೇಣಿಗೆ ಶರಣಾದ ವಿದ್ಯಾರ್ಥಿ

ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣ ಹಿನ್ನಲೆ ಕಾರವಾರದಲ್ಲೂ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಪ್ರಣಮ್ ಈಶ್ವರ್ ನಾಯ್ಕ (18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ‌ ಕಡ್ಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಎ.ವಿ ಬಾಳಿಗ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿ, ವಿಜ್ಞಾನದಲ್ಲಿ ಅನುತ್ತೀರ್ಣಗೊಂಡ ಹಿನ್ನಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕುಮಟಾ‌ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ

ಇದನ್ನೂ ಓದಿ:Bengaluru: ಸ್ಯಾಂಡಲ್​ವುಡ್​ ಯುವ ನಟನ ಬರ್ಬರ ಹತ್ಯೆ

ಗದಗದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ  ಸಾವನ್ನಪ್ಪಿದ್ದಾಳೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪವಿತ್ರಾ ಲಿಂಗದಾಳ (18) ಎಂಬಾಕೆಯನ್ನು ಗದಗ ಜಿಮ್ಸ್  ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ. ಗದಗ ತಾಲೂಕಿನ ಹರ್ತಿ ಗ್ರಾಮದ ಪವಿತ್ರಾ ಲಿಂಗದಾಳ,  ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಫೇಲ್ ಆಗಿದ್ದಳು. ಫಲಿತಾಂಶದ ಬಳಿಕ ತೀವ್ರವಾಗಿ ನೊಂದಿದ್ದ ಪವಿತ್ರಾ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ಲು ತಕ್ಷಣ ಮನೆಯವರು ನೋಡಿ ಆಕೆಯನ್ನಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಪವಿತ್ರಾ ಸಾವನ್ನಪ್ಪಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಿದರು. 5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ. 5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ. ಒಟ್ಟು ಬಾಲಕಿಯರು ಶೇ.68.72 ಮತ್ತು  ಬಾಲಕರು ಶೇ.55.22 ಉತ್ತೀರ್ಣರಾಗಿದ್ದಾರೆ. 3,37,006 ಬಾಲಕಿಯರ ಪೈಕಿ 2,31,586  ಪಾಸ್ ಆಗಿದ್ದಾರೆ. 3,46,557 ಬಾಲಕರಲ್ಲಿ 1,91,380 ಮಕ್ಕಳು ಪಾಸ್ ಆಗಿದ್ದಾರೆ.

ಇದನ್ನೂ ಓದಿ: BS Yediyurappa: ಶಿಥಿಲಾವಸ್ಥೆ ತಲುಪಿದ ಬಿ ಎಸ್ ಯಡಿಯೂರಪ್ಪ ಓದಿದ ಶಾಲೆ

ದಕ್ಷಿಣ ಕನ್ನಡ ಫಸ್ಟ್,  ಚಿತ್ರದುರ್ಗ ಲಾಸ್ಟ್​

ಇನ್ನೂ ಜಿಲ್ಲಾವಾರು ಫಲಿತಾಂಶ ನೋಡೋದಾದ್ರೆ ದಕ್ಷಿಣ ಕನ್ನಡ ಅಗ್ರಸ್ಥಾನ ಶೇ.88.02 ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ. ಉಡುಪಿ ಶೇ. 86.38 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಮತ್ತು ವಿಜಯಪುರ ಶೇ.77.14 ಫಲಿತಾಂಶದೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.49.31 ಫಲಿತಾಂಶದೊಂದಿಗೆ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿ 61.80 ಫಲಿತಾಂಶ ಇತ್ತು ಈ ಬಾರಿ 0.8% ಈ ಬಾರಿ ಹೆಚ್ಚಳವಾಗಿದೆ.
Published by:Pavana HS
First published: