Rain in Karnataka: ಇಂದಿನಿಂದ ಐದು ದಿನ ರಾಜ್ಯಾದ್ಯಂತ ಭಾರೀ ಮಳೆ; ಬಹುತೇಕ ಕಡೆ ಯಲ್ಲೋ ಅಲರ್ಟ್​ ಘೋಷಣೆ

ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

news18-kannada
Updated:June 21, 2020, 8:56 AM IST
Rain in Karnataka: ಇಂದಿನಿಂದ ಐದು ದಿನ ರಾಜ್ಯಾದ್ಯಂತ ಭಾರೀ ಮಳೆ; ಬಹುತೇಕ ಕಡೆ ಯಲ್ಲೋ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಜೂ.21): ಈಗಾಗಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಹೀಗಾಗಿಯೇ ಕಳೆದ ಮೂರು ವಾರಗಳಿಂದ ಜೋರು ಮಳೆಯಾಗುತ್ತಿದೆ. ಇತ್ತೀಚೆಗಂತೂ ಸುರಿದ ಭಾರೀ ಮಳೆಗೆ ಶಿವಮೊಗ್ಗದ ಗಾಜನೂರು ಸೇರಿದಂತೆ ಇತರ ಜಲಾಶಯಗಳು ಭರ್ತಿಯಾಗಿವೆ. ಇದರ ಪರಿಣಾಮ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಿರುವಾಗಲೇ ರಾಜ್ಯ ಹವಾಮಾನ ಇಲಾಖೆ ಮಳೆ ಕುರಿತಾದ ಮತ್ತೊಂದು ಮಹತ್ತರ ಮಾಹಿತಿ ನೀಡಿದೆ.

ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇನ್ನು, ರಾಜ್ಯ ಹವಾಮಾನ ಇಲಾಖೆ ನೀಡಿದ ಮಾಹಿತಿ ಆಧಾರದ ಮೇರೆಗೆ ಮುಂಜಾಗೃತ ಕ್ರಮವಾಗಿ ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: International yoga day 2020: ಕೋವಿಡ್​​-19 ವಿರುದ್ಧ ಹೋರಾಡಲು ಯೋಗ ಪ್ರಮುಖ ಅಸ್ತ್ರ - ನರೇಂದ್ರ ಮೋದಿ
First published: June 21, 2020, 8:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading