ಶಿವರಾತ್ರಿಯಂದು ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಇನ್ನೂ ಅಪಘಾತದಿಂದ ಕೆ‌ಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬಸ್‌ನಲ್ಲಿದ್ದ 35ಜನ ಪ್ರಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸವನ್ನು ತಪ್ಪಿಸಲು ಹೋಗಿ ಕೆ‌ಎಸ್‌ಆರ್‌ಟಿ‌ಸಿ ಬಸ್ ಚಾಲಕ ಬಸ್‌ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ.

zahir | news18
Updated:March 5, 2019, 10:32 AM IST
ಶಿವರಾತ್ರಿಯಂದು ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ
ಸಾಂದರ್ಭಿಕ ಚಿತ್ರ
zahir | news18
Updated: March 5, 2019, 10:32 AM IST
ಅಭಿಷೇಕ್ ಡಿ.ಆರ್.

ನೆಲಮಂಗಲ (ಮಾ 05): ಶಿವರಾತ್ರಿ ದಿನದಂದು ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ಬರುತ್ತಿದ್ದ ವಾಹನವೊಂದು ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ಸಾವನ್ನಪ್ಪಿದ್ದಾರೆ.

ನೆಲಮಂಗಲ ತಾಲ್ಲೂಕಿನ ಯಂಟಗಾನಹಳ್ಳಿ ಬಳಿ ಸೋಮವಾರ ರಾತ್ರಿ ಈ ಅಪಘಾತವೊಂದು ಸಂಭವಿಸಿದ್ದು, ಹಾಸನ ಮಾರ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಕಾರ್ಪಿಯೋ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಬೆಂಗಳೂರಿನಿಂದ ಹಾಸನ ಮಾರ್ಗಕ್ಕೆ ತೆರಳುತ್ತಿದ್ದ ಕೆ‌ಎಸ್‌ಆರ್‌ಟಿಸಿ ಐರಾವತ ಬಸ್‌ಗೆ ಹೊಡೆದಿದೆ.

ಅಪಘಾತದ ರಭಸಕ್ಕೆ ನಾಯಂಡಹಳ್ಳಿಯ ಪಂತರಪಾಳ್ಯ ನಿವಾಸಿಗಳಾದ ದಂಪತಿಗಳು 43 ವಯಸ್ಸಿನ ಏಳುಮಲೈ, 35 ವರ್ಷದ ಕಮಲ ಸೇರಿದಂತೆ ಮಕ್ಕಳಾದ 10 ವರ್ಷದ ಗೀತಾ, 13 ವರ್ಷದ ಕಿರಣ್ ಹಾಗೂ 14 ವರ್ಷದ ಗಿರಿಧರ್ ಸ್ಥಳದಲ್ಲೇ ಅಸುನೀಗಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರಲ್ಲಿ ಉತ್ಸಾಹ ಮೂಡಿಸಲು ಏರ್​ ಇಂಡಿಯಾದಲ್ಲಿ ಮೊಳಗಲಿದೆ ಜೈ ಹಿಂದ್ ಘೋಷಣೆ

ಇನ್ನೂ ಅಪಘಾತದಿಂದ ಕೆ‌ಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬಸ್‌ನಲ್ಲಿದ್ದ 35ಜನ ಪ್ರಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸವನ್ನು ತಪ್ಪಿಸಲು ಹೋಗಿ ಕೆ‌ಎಸ್‌ಆರ್‌ಟಿ‌ಸಿ ಬಸ್ ಚಾಲಕ ಬಸ್‌ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಎ‌ಎಸ್ಪಿ ಸುಜೀತ್ ಸ್ಥಳಕ್ಕೆ ಭೇಟಿ ನೀಡಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Loading...

ಇದನ್ನೂ ಓದಿ: ಹುತಾತ್ಮ ಯೋಧರ ಕುಟುಂಬಕ್ಕೆ 110 ಕೋಟಿ ರೂ. ನೆರವು ನೀಡಲು ಮುಂದಾದ ಅಂಧ ವಿಜ್ಞಾನಿ..!
First published:March 5, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626