• Home
 • »
 • News
 • »
 • state
 • »
 • Chitradurga: ಶಾಲೆಯಲ್ಲಿ ಬಿಸಿಯೂಟ ತಿಂದು 50 ಮಕ್ಕಳು ಅಸ್ವಸ್ಥ

Chitradurga: ಶಾಲೆಯಲ್ಲಿ ಬಿಸಿಯೂಟ ತಿಂದು 50 ಮಕ್ಕಳು ಅಸ್ವಸ್ಥ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಅನ್ನ ಹಾಗೂ ತರಕಾರಿ ಸಾಂಬಾರ್​ ಮಾಡಿದ್ರು. ಎಲ್ಲಾ ಮಕ್ಕಳು ಅದೇ ಊಟ ಮಾಡಿದ್ದಾರೆ. ಊಟ ತಿಂದ ಬಳಿಕ 50 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ.

 • News18 Kannada
 • 5-MIN READ
 • Last Updated :
 • Chitradurga
 • Share this:

ಚಿತ್ರದುರ್ಗ (ಜು 21):  ಬಿಸಿಯೂಟ (Bisiyuta) ಸೇವಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು (Student) ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಇಸಾಮುದ್ರ ಗೊಲ್ಲರಹಟ್ಟಿ (Gollarahatti) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (Govt Primary School) ಈ ಘಟನೆ‌ ನಡೆದಿದೆ. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (Health Center) ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 


ಅನ್ನ, ಸಾಂಬಾರ್ ಊಟ ಮಾಡಿದ್ದ ಮಕ್ಕಳು


ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಅನ್ನ ಹಾಗೂ ತರಕಾರಿ ಸಾಂಬಾರ್​ ಮಾಡಿದ್ರು. ಎಲ್ಲಾ ಮಕ್ಕಳು ಅದೇ ಊಟ ಮಾಡಿದ್ದಾರೆ. ಊಟ ತಿಂದ ಬಳಿಕ 50 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 7 ಮಂದಿಯನ್ನು ಚಿಕಿತ್ಸೆಗೆಂದು ದಾವಣಗೆರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


ಆಸ್ಪತ್ರೆಗೆ ತಹಶೀಲ್ದಾರ್, ಬಿಇಒ​ ಭೇಟಿ


ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಚಿತ್ರದುರ್ಗ ತಹಶೀಲ್ದಾರ್ ಸತ್ಯ ನಾರಾಯಣ್, ಬಿಇಒ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಶಾಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ FSL  ಪ್ರಯೋಗಾಲಯಕ್ಕೆ ಮಧ್ಯಾಹ್ನದ ಊಟದ ಸ್ಯಾಂಪಲ್ ರವಾನೆ ಮಾಡಲಾಗಿದೆ.


ಇದನ್ನೂ ಓದಿ: B S Yediyurappa: ಕೂಸು ಹುಟ್ಟುವ ಮುನ್ನವೇ ಕುಲಾವಿ; HDK, ಡಿಕೆಶಿ ಕಿತ್ತಾಟಕ್ಕೆ ಯಡಿಯೂರಪ್ಪ ಟಾಂಗ್


ಕಲಬುರ್ಗಿಯಲ್ಲಿ ಈ ಹಿಂದೆ ಅಸ್ವಸ್ವರಾಗಿದ್ದ ವಿದ್ಯಾರ್ಥಿಗಳು


ಕಲಬುರ್ಗಿಯಲ್ಲೂ ಇಂತಹದ್ದೆ ಘಟನೆ ನಡೆದಿತ್ತು. ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ  ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ  ನಡೆದಿತ್ತು. ಶಿಲಾರಕೋಟ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ವಿದ್ಯಾರ್ಥಿಗಳು, ಸಂಜೆ ವೇಳೆಗೆ ವಾಂತಿ-ಬೇಧಿ ಮಾಡಿಕೊಳ್ಳ ಆರಂಭಿಸಿದ್ದರು. ವಿದ್ಯಾರ್ಥಿಗಳು ವಾಂತಿ-ಬೇಧಿ ಮಾಡಿಕೊಳ್ಳೋದನ್ನು ನೋಡಿ ಗಾಬರಿಗೊಂಡ ಶಿಕ್ಷಕರು, ಪೋಷಕರು ತಕ್ಷಣ ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು


ಪ್ರಾಥಮಿಕ ಚಿಕಿತ್ಸೆ ನಂತರ ಸೇಡಂ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ದಾಖಲು ಮಾಡಲಾಗಿತ್ತು. ಈ ಪೈಕಿ 28 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಅಡುಗೆ ಮಾಡುವವರ ನಿರ್ಲಕ್ಷಯದಿಂದಲೇ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು


ಇದನ್ನೂ ಓದಿ: Karnataka Politics: ಸಿಎಂ ಕುರ್ಚಿಗೆ ಡಿಕೆಶಿ-ಹೆಚ್​ಡಿಕೆ ಫೈಟ್, ರಾಮನಗರದಲ್ಲೇ ಸವಾಲಿಗೆ ಸವಾಲ್


ಮಧ್ಯಾಹ್ನದ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ


ಹಾವೇರಿ: ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ಸರ್ಕಾರಿ ಶಾಲೆಯ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರು. ಊಟ ಮಾಡಿದ ಮಾಡಿದ ಬಳಿಕ 80ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಮಕ್ಕಳಿಗೆ ಶಾಲೆಯಲ್ಲಿ ಮಾಡಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದು ನಂತರ ತಿಳಿದು ಬಂದಿದೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಭೇದಿಯಿಂದ 80ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರು


ಅಸ್ವಸ್ಥ ಮಕ್ಕಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಸ್ವಸ್ಥಗೊಂಡ ಮಕ್ಕಳು ಅಪಾಯದಿಂದ ಪಾರಾಗಿದ್ದರು ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ ವಡಗೇರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲಾ ಬಾಲಕನೊಬ್ಬನ ತಟ್ಟೆಗೆ ಬಡಿಸಿದ ಊಟದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಬಳಿಕ, ಬಾಲಕನಿಗೆ ವಾಂತಿ ಕಾಣಿಸಿಕೊಂಡಿತ್ತು. ಒಬ್ಬ ಬಾಲಕನಿಗೆ ವಾಂತಿ ಆಗ್ತಿದ್ದಂತೆ ಗಾಬರಿಗೊಂಡು ಮಕ್ಕಳು ಅಸ್ವಸ್ಥಗೊಂಡಿದ್ದರು.

Published by:ಪಾವನ ಎಚ್ ಎಸ್
First published: