ಕಲಬುರ್ಗಿಯಲ್ಲಿ ಕಲುಷಿತ ನೀರು ಸೇವನೆ: ವಾಂತಿ-ಬೇಧಿಯಿಂದ 60 ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿಕಿತ್ಸೆಗಾಗಿ ಕೆಲ ಜನರನ್ನು ಖಾಸಗಿ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕಲಬುರ್ಗಿ(ಫೆ. 22) : ಕಲುಷಿತ ನೀರು ಸೇವಿಸಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಚಿತ್ತಾಪೂರ ತಾಲೂಕಿನ ಅಲ್ಲೂರ್(ಬಿ) ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗೆ ಕಲುಷಿತ ನೀರು ಸೇರಿದ್ದರಿಂದ ವಾಂತಿ-ಬೇಧಿ ಪ್ರಕರಣ ನಡೆದಿದೆ ಎನ್ನಲಾಗಿದೆ.

ಬೋರವೆಲ್​ನಿಂದ ಗ್ರಾಮಕ್ಕೆ ಪೈಪ್ ಲೈನ್ ಮುಖಾಂತರ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮದ ಜಲಮೂಲಗಳ ಪೈಕಿ ಎರಡು ಮೂಲಗಳು ಕುಡಿಯಲು ಯೋಗ್ಯವಿಲ್ಲ ಎನ್ನಲಾಗಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರಿಗೆ ಅಲ್ಲೂರು(ಕೆ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಚಿಕಿತ್ಸೆಗಾಗಿ ಕೆಲ ಜನರನ್ನು ಖಾಸಗಿ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ತಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೈದ್ಯರ ತಂಡ ಭೇಟಿ

ವಾಂತಿ-ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ತಂಡವೊಂದು ಅಲ್ಲೂರು(ಬಿ) ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಕಾಲರಾ ನಿಯಂತ್ರಣಾಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ ಹಾಗೂ ಚಿತ್ತಾಪುರ ತಾಲೂಕು ವೈದ್ಯಾಧಿಕಾರಿ ಡಾ. ಸುರೇಶ್ ನೇಕಿನ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ವಾಂತಿ-ಬೇಧಿಗೆ ಗುರಿಯಾದವರನ್ನು ಪರೀಕ್ಷಿಸಿದ್ದಾರೆ.

ಇದನ್ನೂ ಓದಿ : ಕಲಬುರ್ಗಿಯ ಐತಿಹಾಸಿಕ ಬಹುಮನಿ ಕೋಟೆ ಒತ್ತುವರಿ ತೆರವಿಗೆ ಡಿಸಿ ಸೂಚನೆ

ಗ್ರಾಮಕ್ಕೆ ಪೂರೈಕೆ ಮಾಡುತ್ತಿರುವ ನೀರಿನ ಸ್ಯಾಂಪಲ್​ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಶುಚಿತ್ವಕ್ಕಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ವೈದ್ಯರ ತಂಡವೊಂದನ್ನು ಗ್ರಾಮದಲ್ಲಿಯೇ ಬೀಡು ಬಿಡುವಂತೆ ಸೂಚಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕೈಗೊಳ್ಳಲಾಗಿದೆ.
First published: