ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು 7 ದಿನ ಬಾಕಿ; ಇಂದು ಸುಪ್ರೀಂನಲ್ಲಿ ನಿರ್ಧಾರವಾಗುತ್ತಾ ಅನರ್ಹ ಶಾಸಕರ ರಾಜಕೀಯ ಭವಿಷ್ಯ?

ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆ. 30 ಕೊನೆಯ ದಿನವಾಗಿರುವುದರಿಂದ ಅನರ್ಹ ಶಾಸಕರಿಗೆ ಆತಂಕ ಶುರುವಾಗಿದೆ. ಹೀಗಾಗಿ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಚುನಾವಣೆಗೆ ತಡೆ ನೀಡುವಂತೆ ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಅನರ್ಹ ಶಾಸಕರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

Sushma Chakre | news18-kannada
Updated:September 23, 2019, 9:15 AM IST
ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು 7 ದಿನ ಬಾಕಿ; ಇಂದು ಸುಪ್ರೀಂನಲ್ಲಿ ನಿರ್ಧಾರವಾಗುತ್ತಾ ಅನರ್ಹ ಶಾಸಕರ ರಾಜಕೀಯ ಭವಿಷ್ಯ?
ಅನರ್ಹ ಶಾಸಕರು
  • Share this:
ನವದೆಹಲಿ (ಸೆ. 23): ಕಾಂಗ್ರೆಸ್​ ಮತ್ತು ಜೆಡಿಎಸ್​ಗೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದೆ. ಇದರಿಂದ ಅನರ್ಹ ಶಾಸಕರ ಚಡಪಡಿಕೆ ಇನ್ನಷ್ಟು ಹೆಚ್ಚಾಗಿದೆ. 17 ಶಾಸಕರು ತಮ್ಮನ್ನು ಅನರ್ಹಗೊಳಿಸಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆ ಅರ್ಜಿ ವಿಚಾರಣೆ ಇಂದಿಗೆ ಮುಂದೂಡಲ್ಪಟ್ಟಿತ್ತು.

2 ದಿನಗಳ ಹಿಂದೆಯೇ ನವದೆಹಲಿಗೆ ತೆರಳಿರುವ ಎಲ್ಲಾ 17 ಅನರ್ಹ ಶಾಸಕರು ತಮ್ಮ ಪರ ವಕೀಲ ಮುಕುಲ್ ರೋಹ್ಟಗಿ ಜೊತೆ ಚರ್ಚೆ ನಡೆಸಿದ್ದಾರೆ. ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆ. 30 ಕೊನೆಯ ದಿನವಾಗಿರುವುದರಿಂದ ಅನರ್ಹ ಶಾಸಕರಿಗೆ ಆತಂಕ ಶುರುವಾಗಿದೆ. ಹೀಗಾಗಿ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಚುನಾವಣೆಗೆ ತಡೆ ನೀಡುವಂತೆ ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಅನರ್ಹ ಶಾಸಕರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ 17 ಶಾಸಕರನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಶಾಸಕರ ಅರ್ಜಿ ವಿಚಾರಣೆಯನ್ನು ನ್ಯಾ. ಎನ್​.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ಕೈಗೆತ್ತಿಕೊಂಡಿತ್ತು. ಇನ್ನೂ ಆ ಅರ್ಜಿಯ ಅಂತಿಮ ಆದೇಶ ಹೊರಬಿದ್ದಿಲ್ಲ. ಹೀಗಾಗಿ, ಈ ಬಾರಿಯ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ಕುತೂಹಲ ಹಾಗೇ ಉಳಿದುಕೊಂಡಿದೆ. ಒಂದುವೇಳೆ ಅರ್ಜಿಯ ಆದೇಶ ಹೊರಬೀಳುವುದು ತಡವಾದರೂ ಅನರ್ಹ ಶಾಸಕರಿಗೆ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗುವುದಿಲ್ಲ. ಒಂದುವೇಳೆ ನ್ಯಾಯಮೂರ್ತಿಗಳು ಅನರ್ಹರ ಶಾಸಕರ ಪರವಾಗಿ ತೀರ್ಪು ನೀಡದಿದ್ದರೂ ಈ ಬಾರಿಯ ಚುನಾವಣೆಯಲ್ಲಿ 176 ಶಾಸಕರಿಗೆ ಸ್ಪರ್ಧಿಸಲು ಅವಕಾಶ ಸಿಗುವುದಿಲ್ಲ.

ಮೈತ್ರಿ ಸರ್ಕಾರ ಕೆಡವಿದವರ ಸೋಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ರಣತಂತ್ರ; ರಾಜಧಾನಿಯ ಎರಡು ಕ್ಷೇತ್ರಗಳಲ್ಲಿ ನಾಳೆ ನಡೆಯಲಿದೆ ಮಹತ್ವದ ಸಭೆ!

ಇಂದು ಸುಪ್ರೀಂಕೋರ್ಟ್​ನಲ್ಲಿ 2 ಮಧ್ಯಂತರ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಅನರ್ಹರ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. 15 ಕ್ಷೇತ್ರಗಳ ಉಪಚುನಾವಣೆ ಪ್ರಕ್ರಿಯೆಗೆ ತಡೆ ನೀಡುವಂತೆ ತಮಿಳುನಾಡಿನ ಕೇಸ್ ಉಲ್ಲೇಖಿಸಿ ಮಧ್ಯಂತರ ಅರ್ಜಿ ಸಲ್ಲಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಅನರ್ಹರಾಗಿದ್ದ 18 ಶಾಸಕರು 2019ರಲ್ಲಿ ಸ್ಪರ್ಧಿಸಿದ್ದರು. ಈ ಪ್ರಕರಣವನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

(ವರದಿ: ಧರಣೀಶ್ ಬೂಕನಕೆರೆ)

First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading