• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Kodagu: ಮಕ್ಕಳಿಗೆ ಉಂಗುರ ಕೊಡುವ ಮುನ್ನ ಹುಷಾರ್​​; ರಿಂಗ್​ ನುಂಗಿ 8 ತಿಂಗಳ ಕಂದಮ್ಮ ಸಾವು

Kodagu: ಮಕ್ಕಳಿಗೆ ಉಂಗುರ ಕೊಡುವ ಮುನ್ನ ಹುಷಾರ್​​; ರಿಂಗ್​ ನುಂಗಿ 8 ತಿಂಗಳ ಕಂದಮ್ಮ ಸಾವು

ಉಂಗುರ ನುಂಗಿ ಮಗು ಸಾವು (ಸಾಂದರ್ಭಿಕ ಚಿತ್ರ)

ಉಂಗುರ ನುಂಗಿ ಮಗು ಸಾವು (ಸಾಂದರ್ಭಿಕ ಚಿತ್ರ)

ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣ ವೈದ್ಯರ ಸಲಹೆ ಮೇರೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಮಗುವಿನ ಆರೋಗ್ಯ ಪರಿಶೀಲನೆ ನಡೆಸಿದ ವೈದ್ಯರ ತಂಡ ಸತತವಾಗಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆಯಲು ಯಶಸ್ವಿಯಾಗಿದ್ದರು. ಆದರೆ ಬೆಳಗ್ಗೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. 

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • Kodagu, India
  • Share this:

ಮಡಿಕೇರಿ: ಆಟವಾಡುತ್ತಾ 8 ತಿಂಗಳ ಮಗು ಉಂಗುರ (Ring) ನುಂಗಿದ ಪರಿಣಾಮ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬುವರ ಎಂಟು ತಿಂಗಳ ಮಗು ರಿಜ್ವಾನ್ ಚಿಕಿತ್ಸೆ (Treatment) ಫಲಕಾರಿಯಾಗದೆ ಮೃತಪಟ್ಟಿದೆ. ಬುಧವಾರ ರಾತ್ರಿ ವೇಳೆ ಮಗು ಆಕಸ್ಮಿಕವಾಗಿ ಆಟವಾಡುತ್ತಾ (Playing) ಉಂಗುರ ನುಂಗಿದೆ. ಈ ವೇಳೆ ಮಗುವಿಗೆ ಉಸಿರಾಟದ ಸಮಸ್ಯೆ (Breathing Problem) ಕಾಣಿಸಿಕೊಂಡಿದ್ದು, ಕೂಡಲೇ ಪೋಷಕರು ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.


ಶಸ್ತ್ರಚಿಕಿತ್ಸೆ ಮಾಡಿದರು ಬದುಕಿ ಉಳಿಯಲಿಲ್ಲ ಮಗು


ಆದರೆ ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣ ವೈದ್ಯರ ಸಲಹೆ ಮೇರೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಮಗುವಿನ ಆರೋಗ್ಯ ಪರಿಶೀಲನೆ ನಡೆಸಿದ ವೈದ್ಯರ ತಂಡ ಸತತವಾಗಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆಯಲು ಯಶಸ್ವಿಯಾಗಿದ್ದರು. ಆದರೆ ಬೆಳಗ್ಗೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ.


ಇದನ್ನೂ ಓದಿ: Karnataka Rains: ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ! ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ? ಇಲ್ಲಿದೆ ಮಾಹಿತಿ


ಮೃತ ಪಟ್ಟ ಕಂದಮ್ಮ


ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು; ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ


ಚಿಕ್ಕಬಳ್ಳಾಪುರದ ಗೌರಿಬಿದನೂರು ಆಸ್ಪತ್ರೆಯಲ್ಲಿ ಮೂರು ವರ್ಷದ ಮಗು ಮೃತಪಟ್ಟಿದೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.


ಮಗುವಿಗೆ ಉಸಿರಾಟದ ಸಮಸ್ಯೆ ಎದುರಾದ ಕಾರಣ ಪೋಷಕರು ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಹೊರಚೀಟಿ ಪಡೆದುಕೊಂಡ ಬಳಿಕ ಸಿಬ್ಬಂದಿ, ವೈದ್ಯರು ಇಲ್ಲ ನಾಳೆ ಬನ್ನಿ. ತುರ್ತು ಚಿಕಿತ್ಸೆ ಅವಶ್ಯಕವಿದ್ದರೆ ಬೇರೆ ಆಸ್ಪತ್ರೆ ತೆರಳುವಂತೆ ಸಲಹೆ ನೀಡಿದ್ದರಂತೆ.


ಇದನ್ನೂ ಓದಿ: Karnataka Election: ಸಿದ್ದರಾಮಯ್ಯಗೆ ಡಬಲ್ ಶಾಕ್! ಎರಡು ಕ್ಷೇತ್ರ ಬೇಡ, ಒಂದೇ ಕ್ಷೇತ್ರ ಸಾಕು ಎಂದ ಹೈಕಮಾಂಡ್?


ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ


ಇದರಿಂದ ಸುಮಾರು ಸಮಯ ಆಸ್ಪತ್ರೆಯಲ್ಲಿ ವೈದ್ಯರಿಗಾಗಿ ಕಾದ ಪೋಷಕರು ವೈದ್ಯರು ಸಿಗದೆ ಮನೆಗೆ ವಾಪಸ್ ಆಗಿದ್ದಾರೆ. ಆದರೆ ಮರುದಿನ ಬೆಳಗ್ಗೆ ಮಗುವಿನ ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ ಕೂಡಲೇ ಮಗುವನ್ನು ಕರೆದುಕೊಂಡು ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದರಂತೆ.




ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಮೊದಲು ಮಗುವನ್ನು ಕರೆತಂದ ವೇಳೆ ವೈದ್ಯರು ಕರ್ತವ್ಯದಲ್ಲಿದ್ದರು, ಆದರೆ ಆಸ್ಪತ್ರೆಯಲ್ಲಿ ಇರಲಿಲ್ಲವಂತೆ.


ಆಸ್ಪತ್ರೆಯ ಸಿಬ್ಬಂದಿ ಯಾವುದೇ ಸ್ಪಷ್ಟ ಮಾಹಿತಿ ನೀಡಿದ ಕಾರಣ ಪೋಷಕರು ಮಗುವನ್ನು ವಾಪಸ್ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.

First published: