ಜನವರಿ 6ರಿಂದ ಧಾರವಾಡದಲ್ಲಿ 84ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಕ್ಷರ ಜಾತ್ರೆ ಮುಂದೂಡಿಕೆಗೆ ಕಾರಣವೇನು?

HR Ramesh | news18
Updated:October 24, 2018, 8:29 AM IST
ಜನವರಿ 6ರಿಂದ ಧಾರವಾಡದಲ್ಲಿ 84ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಕ್ಷರ ಜಾತ್ರೆ ಮುಂದೂಡಿಕೆಗೆ ಕಾರಣವೇನು?
HR Ramesh | news18
Updated: October 24, 2018, 8:29 AM IST
ನ್ಯೂಸ್ 18 ಕನ್ನಡ

ಬೆಂಗಳೂರು (ಅ.24): ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು ಡಿಸೆಂಬರ್ ಮೊದಲ ವಾರದಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಈಗ ಜನವರಿ 6ರಿಂದ 8ರವರೆಗೆ ಸಮ್ಮೇಳನ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಈ ಮೊದಲು ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಮೊದಲ ವಾರದಲ್ಲಿ ನಡೆಸಲು ಸಮಯ ನಿಗದಿ ಮಾಡಲಾಗಿತ್ತು. ಆದರೆ, ಸಮ್ಮೇಳನದ ಸಿದ್ಧತೆಗೆ ಕಾಲಾವಕಾಶ ಕಡಿಮೆ ಇರುವುದರಿಂದ ಮುಂದೂಡುವಂತೆ ಅಭಿಪ್ರಾಯ ಕೇಳಿಬಂದಿತು. ಅದರಂತೆ ಧಾರವಾಡದಲ್ಲಿ ಸ್ವಾಗತ ಸಮಿತಿ ಸದಸ್ಯರು ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಸಭೆ ನಡೆಸಿ, ಸಮ್ಮೇಳನ ಮುಂದೂಡಿಕೆ ನಿರ್ಧಾರಕ್ಕೆ ಬಂದಿದ್ದಾರೆ.

ಸಮ್ಮೇಳನ ಮುಂದೂಡಿಕೆಗೆ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಅವರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ಮನು ಬಳಿಗಾರ್​ ತಿಳಿಸಿದರು.

ಇದನ್ನು ಓದಿ: 84 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕಂಬಾರ ಆಯ್ಕೆ

ಕಳೆದ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 8 ಕೋಟಿ ರೂ. ಬಿಡುಗಡೆ ಮಾಡಿತ್ತು. ಆನಂತರ 2 ಕೋಟಿ ರೂ.ಬಿಡುಗಡೆ ಮಾಡಲಾಯಿತು. ಈ ಬಾರಿಯ ಸಮ್ಮೇಳನಕ್ಕೆ ನಾವು 10ರಿಂದ 12 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಬಳಿಗಾರ್​ ತಿಳಿಸಿದರು.

First published:October 24, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ