ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ; ಒಂದೇ ದಿನ 61 ಸಾವಿರ ಪ್ರಕರಣಗಳು ಪತ್ತೆ

Coronavirus India Update: ಶುಕ್ರವಾರ 933 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 42 ಸಾವಿರದ ಗಡಿ‌ ದಾಟಿದ್ದು 42,518ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 14,27,006 ಜನ ಮಾತ್ರ.

news18-kannada
Updated:August 8, 2020, 11:36 AM IST
ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ; ಒಂದೇ ದಿನ 61 ಸಾವಿರ ಪ್ರಕರಣಗಳು ಪತ್ತೆ
Coronavirus India Update
  • Share this:
ನವದೆಹಲಿ (ಆಗಸ್ಟ್​ 8): ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು ಹರಡುವಿಕೆ ಈಗ ಶರವೇಗ ಪಡೆದುಕೊಂಡಿದೆ. ಕೊರೊನಾ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ತೀವ್ರಗೊಂಡಾಗ‌ ಅನ್ ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 20 ಲಕ್ಷದ ಗಡಿ ದಾಟಿದೆ. ಅದೂ ಅಲ್ಲದೆ ಮೂರನೇ ಹಂತದ ಅನ್ಲಾಕ್‌ ಕೂಡ ಜಾರಿ ಆಗುತ್ತಿದ್ದಂತೆ ಪ್ರತಿದಿನವೂ ಅರ್ಧ ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿದ್ದರು. ಈಗ 60 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 20ರಿಂದ 37 ಸಾವಿರಕ್ಕೂ ಪ್ರಕರಣಗಳು ಪತ್ತೆಯಾಗಿದ್ದವು. ಬಳಿಕ ಆಗಸ್ಟ್ 1ರಂದು 54,736 ಪ್ರಕರಣಗಳು, ಆಗಸ್ಟ್ 2ರಂದು 52,972 ಪ್ರಕರಣಗಳು, ಆಗಸ್ಟ್ 3ರಂದು 52,050 ಪ್ರಕರಣಗಳು, ಆಗಸ್ಟ್ 4ರಂದು 52,509 ಪ್ರಕರಣಗಳು ವರದಿಯಾಗಿದ್ದವು. ಈಗ ಮತ್ತೆ ಹೆಚ್ಚಾಗಿ ಆಗಸ್ಟ್ 5ರಂದು 56,282, ಆಗಸ್ಟ್ 6ರಂದು 62,538 ಹಾಗೂ ಆಗಸ್ಟ್ 7ರಂದು 61,537 ಪ್ರಕರಣಗಳು ಕಂಡುಬಂದಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 20,88,612ಕ್ಕೆ ಏರಿಕೆಯಾಗಿದೆ.

ಶುಕ್ರವಾರ 933 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 42 ಸಾವಿರದ ಗಡಿ‌ ದಾಟಿದ್ದು 42,518ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 14,27,006 ಜನ ಮಾತ್ರ. ದೇಶದಲ್ಲಿ ಇನ್ನೂ 6,19,088 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು‌ 28,701, ಜುಲೈ 13ರಂದು 28,498, ಜುಲೈ 14ರಂದು 29,429, ಜುಲೈ 15ರಂದು 32,695, ಜುಲೈ 16ರಂದು‌ 34,956, ಜುಲೈ 17ರಂದು 34,884, ಜುಲೈ 18ರಂದು 38,902, ಜುಲೈ 19ರಂದು 40,425, ಜುಲೈ 20ರಂದು 37,148, ಜುಲೈ 21ರಂದು 37,724, ಜುಲೈ 22ರಂದು 45,720, ಜುಲೈ 23ರಂದು 49,310, ಜುಲೈ 24ರಂದು 48,916,‌ ಜುಲೈ 25ರಂದು 48,661, ಜುಲೈ 26ರಂದು 49,931, ಜುಲೈ 27ರಂದು 47,704, ಜುಲೈ 28ರಂದು 48,512 ಹಾಗೂ ಜುಲೈ 29ರಂದು 52,123, ಜುಲೈ 30ರಂದು 55,079, ಜುಲೈ‌ 31ರಂದು 57,117 ಕೇಸ್​ ಪತ್ತೆ ಆಗಿದೆ.

ಆಗಸ್ಟ್ 1ರಂದು 54,736, ಆಗಸ್ಟ್ 2ರಂದು 52,972, ಆಗಸ್ಟ್ 3ರಂದು 52,050, ಆಗಸ್ಟ್ 4ರಂದು 52,509, ಆಗಸ್ಟ್ 5ರಂದು 56,282, ಆಗಸ್ಟ್ 6ರಂದು 62,538 ಹಾಗೂ ಆಗಸ್ಟ್ 7ರಂದು 61,537 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Rajesh Duggumane
First published: August 8, 2020, 11:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading