• Home
  • »
  • News
  • »
  • state
  • »
  • Karnataka Politics: ಅಮಾವಾಸ್ಯೆಯ ದಿನ ಈಶ್ವರನ ಎದುರು ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

Karnataka Politics: ಅಮಾವಾಸ್ಯೆಯ ದಿನ ಈಶ್ವರನ ಎದುರು ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ

ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ. ಪಿ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದ್ದಾರೆ.

  • Share this:

ಚಿಕ್ಕಮಗಳೂರು (ನ. 23) : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ (Dipak Doddayya) ಸ್ಪಷ್ಟಪಡಿಸಿದ್ದಾರೆ. ಇಂದು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಓಂಕಾರೇಶ್ವರ ದೇವಾಲಯದಲ್ಲಿ (Omkareshwar Temple) ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ನಡೆದ ಶಾಸಕ ಕುಮಾರಸ್ವಾಮಿ (MP MLA Kumaraswamy) ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಸತ್ಯಾಸತ್ಯತೆಯನ್ನೂ ನೀನೇ ಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ನ್ಯಾಯ-ನೀತಿ-ಧರ್ಮದ ಆಧಾರದಲ್ಲಿ ಶಿಕ್ಷೆ ಕೊಡು ಎಂದು ಸೃಷ್ಠಿಕರ್ತ ಓಂಕಾರೇಶ್ವರನಲ್ಲಿ ಬೇಡಿಕೊಂಡಿದ್ದಾರೆ.


ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಪ್ರಮಾಣ


ನಾನು ಒಳ್ಳೆಯ ಸಂಸ್ಕೃತಿಯಿಂದ ಬಂದವನು. ಅಷ್ಟು ಕೀಳುಮಟ್ಟದ ರಾಜಕಾರಣವನ್ನ ನಾನು ಮಾಡಲ್ಲ ಎಂದಿದ್ದಾರೆ. ಮೂರು ದಿನಗಳ ಹಿಂದೆ ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನ ನೋಡಲು ಹೋದ ಸಂದರ್ಭದಲ್ಲಿ ಸ್ಥಳಿಯರು ಶಾಸಕರ ಮೇಲೆ ಹಲ್ಲೆ ಮಾಡಿದ್ದರು. ಈ ಹಲ್ಲೆಗೆ ದೀಪಕ್ ದೊಡ್ಡಯ್ಯನೇ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಅದಕ್ಕಾಗಿ ಇಂದು ದೀಪಕ್ ದೊಡ್ಡಯ್ಯ ಓಂಕಾರೇಶ್ವರ ದೇವಾಲಯದಲ್ಲಿ ಪ್ರಮಾಣ ಮಾಡಿದ್ದಾರೆ.


BJP ticket aspirant who took oath in front of Eshwar
ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ


ದೀಪಕ್ ದೊಡ್ಡಯ್ಯ ಸವಾಲು


ಆರೋಪ ಮಾಡುವವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ : ದೀಪಕ್ ದೊಡ್ಡಯ್ಯ ಶಾಸಕರ ಮೇಲೆನ ಹಲ್ಲೆಯ ಕುರಿತು ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು, ನನ್ನ ಮೇಲೆ ಆರೋಪ ಮಾಡಿದವರು ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಬೇಕು. ನನ್ನ ಕೈವಾಡವಿಲ್ಲ ಎಂದು ನಾನೂ ಕೂಡಾ ಪ್ರಮಾಣ ಮಾಡುತ್ತೇನೆ ಎಂದು ಬಿಜೆಪಿ ಪಕ್ಷದ ಜಿಲ್ಲಾ ವಕ್ತಾರ ದೀಪಕ್ ದೊಡ್ಡಯ್ಯ ಸವಾಲು ಹಾಕಿದರು.


ಗಲಾಟೆ ಮಾಡಿಸುವಂತಹ ವ್ಯಕ್ತಿ ನಾನಲ್ಲ


ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಮೂಡಿಗೆರೆ ತಾಲ್ಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಶಾಸಕರ ಮೇಲೆ ನಡೆದಿರುವ ಹಲ್ಲೆಗೂ ನನಗೂ ಸಂಬಂಧವಿಲ್ಲ. ಶಾಸಕ ಕುಮಾರಸ್ವಾಮಿಯವರು ನನ್ನ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು, ಅವರ ಮೇಲೆ ಗಲಾಟೆ ಮಾಡಿಸುವಂತಹ, ಅದಕ್ಕೆ ಕುಮ್ಮಕ್ಕು ಕೊಡುವ ವ್ಯಕ್ತಿ ನಾನಲ್ಲ ಎಂದ್ರು.


ಲಕ್ಷಾಂತರ ಜನರಿಗೆ ಪಾಠ ಮಾಡಿದ್ದೇನೆ


ಅದರಲ್ಲಿ ಯಾವುದೇ ರೀತಿಯಲ್ಲೂ ನನ್ನ ಕೈವಾಡವಿಲ್ಲ, ನಾನೊಬ್ಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕ, ಹತ್ತಾರು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದೇನೆ, ಲಕ್ಷಾಂತರ ಜನರಿಗೆ ಪಾಠ ಮಾಡಿದ್ದೇನೆ, ನನ್ನ ಬಳಿ ಪಾಠ ಕಲಿತ ಸಾವಿರಾರು ಜನ ದೇಶದ ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ: Milk Price Hike: ರಾಜ್ಯದ ಜನರಿಗೆ ಮತ್ತೊಂದು ಬಿಗ್​ ಶಾಕ್; ಹಾಲು, ಮೊಸರಿನ ದರ 2 ರೂ ಹೆಚ್ಚಳ​!


ನನಗೆ ನನ್ನದೇ ಆದ ವ್ಯಕ್ತಿತ್ವ, ಸಂಸ್ಕಾರ ಇದೆ


ನನಗೆ ನನ್ನದೇ ಆದ ವ್ಯಕ್ತಿತ್ವ, ಸಂಸ್ಕಾರ ಇದೆ. ಹಾಗಾಗಿ ಈ ಆರೋಪ ಸತ್ಯಕ್ಕೆ ಹತ್ತಿರವಿಲ್ಲ ಅದು ಸಂಪೂರ್ಣ ಸುಳ್ಳು, ನನ್ನ ಮೇಲೆ ಆರೋಪ ಮಾಡಿದವರು ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಬೇಕು. ನನ್ನ ಕೈವಾಡವಿಲ್ಲ ಎಂದು ನಾನೂ ಕೂಡಾ ಪ್ರಮಾಣ ಮಾಡುತ್ತೇನೆ ಎಂದು ಸವಾಲು ಹಾಕಿದರು.


ಇಂದು ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿದ್ದೇನೆ. ಆ ಸಮಯದಲ್ಲಿ ಹೇಳಿದ್ದೇನೆ ಆ ಘಟನೆಯಲ್ಲಿ ನನ್ನ ಪಾತ್ರವಿಲ್ಲ ಯಾರು ಆ ರೀತಿ ಆರೋಪ ಮಾಡಿದ್ದಾರೆ ಅದರ ಸತ್ಯಾಸತ್ಯತೆ ತಿಳಿಯಲಿ ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದರು.

Published by:ಪಾವನ ಎಚ್ ಎಸ್
First published: