ನಂದಿ ಬೆಟ್ಟ ಮಾರ್ಗ ಮಧ್ಯೆ ಕಾರು ಪಲ್ಟಿಯಾಗಿ 4 ಮಂದಿ ಸಾವು

ಮೃತರು ಹಾಗೂ ಗಾಯಾಳುಗಳು ಇಂದು ಬೆಳಗ್ಗೆ ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ತೆರಳುತ್ತಿದ್ದರು.

Latha CG | news18
Updated:August 24, 2019, 10:14 AM IST
ನಂದಿ ಬೆಟ್ಟ ಮಾರ್ಗ ಮಧ್ಯೆ ಕಾರು ಪಲ್ಟಿಯಾಗಿ 4 ಮಂದಿ ಸಾವು
ಸಾಂದರ್ಭಿಕ ಚಿತ್ರ
  • News18
  • Last Updated: August 24, 2019, 10:14 AM IST
  • Share this:
ಚಿಕ್ಕಬಳ್ಳಾಪುರ(ಆ.24): ಇಂದು ಬೆಳಗ್ಗೆ ನಂದಿ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿ ಬಳಿ ನಡೆದಿದೆ.

ನಕ್ಕಲಪಲ್ಲಿ ಗ್ರಾಮದ ರಮೇಶ್ (32), ಮಂಜುನಾಥ್ (25),ಅಶೋಕ್ ರೆಡ್ಡಿ (25), ಗೌರೀಶ್ (22) ಮೃತಪಟ್ಟವರು. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕನ ನಿಯಂತ್ರಣ ತಪ್ಪ ರಸ್ತೆಯಲ್ಲೇ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಹಾಗೂ ಗಾಯಾಳುಗಳು ಇಂದು ಬೆಳಗ್ಗೆ ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ತೆರಳುತ್ತಿದ್ದರು. ಕಾರಿನಲ್ಲಿ ಒಟ್ಟು ಒಟ್ಟು 9 ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಚನ್ನರಾಯಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್​ಸ್ಕ್ರೈಬ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ
First published: August 24, 2019, 10:08 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading