Honey Bee Farming: ಜೇನು ಕೃಷಿಯಲ್ಲಿ ರೈತನ ಸಾಧನೆ, ಮೋದಿ ತವರಲ್ಲಿ ತರಬೇತಿ ನೀಡಲು ಹೊರಟ ದಕ್ಷಿಣ ಕನ್ನಡದ ಯುವಕ

ಜೇನು ಕೃಷಿಯಲ್ಲಿ ಅಪ್ರತಿಮ ಸಾಧನೆ ತೋರುತ್ತಿರುವ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯ ಯುವಕ ಮನಮೋಹನ್ ಆರಂಬ್ಯ ತುಡುವೆ ಜೇನಿನ ಸಿಹಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಲ್ಲಿ ಹೆಜ್ಜೆ ಇರಿಸಿದ್ದು ಗುಜರಾತ್‍ನಲ್ಲಿಯೂ ಇವರ ಜೇನು ಕೃಷಿಗೆ ಬೇಡಿಕೆ ವ್ಯಕ್ತವಾಗಿದೆ.

ಸಾಧಕ ಯುವ ರೈತ

ಸಾಧಕ ಯುವ ರೈತ

  • Share this:
ಪುತ್ತೂರು, ದಕ್ಷಿಣ ಕನ್ನಡ: ಪ್ರಧಾನಿ ನರೇಂದ್ರ ಮೋದಿಯವರ ಕನಸಾದ (PM Narendra Modi’s Dreams) ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ (Honey bee farming) ಮೇಲೆ ಒಲವು ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಧಾನಿ ತವರು ಗುಜರಾತ್‌ನ ರೈತರು (Gujarat Farmer) ಜೇನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಲು ಆರಂಭಿಸಿದ್ದಾರೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ (Training) ನೀಡಲು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ (Rajyotsav Award) ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್ ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ 100 ಜೇನು ಕುಟುಂಬಗಳನ್ನು ಗುಜರಾತ್ ಗೆ ರವಾನಿಸಿರುವ ಇವರಿಗೆ ಒಟ್ಟು 1 ಸಾವಿರ ಜೇನು ಕುಟುಂಬಗಳನ್ನು ಗುಜರಾತ್ ನಲ್ಲಿ ಬೆಳೆಸುವ ಜವಾಬ್ದಾರಿಯನ್ನು ನೀಡಲಾಗಿದೆ.

ಪುತ್ತೂರಿನ ಯುವ ರೈತನಿಗೆ ಆಹ್ವಾನ

ಜೇನು ಕೃಷಿಯಲ್ಲಿ ಅಪ್ರತಿಮ ಸಾಧನೆ ತೋರುತ್ತಿರುವ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯ ಯುವಕ ಮನಮೋಹನ್ ಆರಂಬ್ಯ ತುಡುವೆ ಜೇನಿನ ಸಿಹಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಲ್ಲಿ ಹೆಜ್ಜೆ ಇರಿಸಿದ್ದು ಗುಜರಾತ್‍ನಲ್ಲಿಯೂ ಇವರ ಜೇನು ಕೃಷಿಗೆ ಬೇಡಿಕೆ ವ್ಯಕ್ತವಾಗಿದೆ.

ಜೇನು ಪೆಟ್ಟಿಗೆಗಳು


ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೈತ

ಜೇನು ಕೃಷಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಕರ್ನಾಟಕ ರಾಜ್ಯದ ಜೇನು ಉತ್ಪಾದನೆಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ಇರುವ ಇವರು ರಾಜ್ಯದಾದ್ಯಂತ ಜೇನು ಮತ್ತು ಕುಟುಂಬಗಳನ್ನ ಒದಗಿಸಿಕೊಟ್ಟು ಜೇನು ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ. ಜೇನು ಕೃಷಿಯಲ್ಲಿನ ಇವರ ಸಾಧನೆ ಮತ್ತು ಯಶಸ್ಸನ್ನು ಗುರುತಿಸಿಕೊಂಡ ಗುಜರಾತ್ ನ ಕೃಷಿಕರಿಂದ1000 ಪೆಟ್ಟಿಗೆಗೆ ಬೇಡಿಕೆ ಬಂದಿದೆ.

ಜೇನು ಕೃಷಿಯಲ್ಲಿ ತೊಡಗಿರುವ ಮನಮೋಹನ್


ಇದನ್ನೂ ಓದಿ: Coconut Husk: ತೆಂಗಿನ ಸಿಪ್ಪೆಗೂ ಡಿಮ್ಯಾಂಡ್! ರೈತರಿಗೆ ಮತ್ತು ಉದ್ಯಮಗಳಿಗೆ ಹೊಸ ದಾರಿ

ಗುಜರಾತ್‌ನಲ್ಲಿ ತುಡುವೆ ಜೇನಿನ ಕೃಷಿ ಬಗ್ಗೆ ಪಾಠ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ಆಗಿರುವ ಮಧು ಕ್ರಾಂತಿಯ ಕಲ್ಪನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಯೋಗಾತ್ಮಕ ವಾಗಿ ಮನಮೋಹನ್ ಅವರು ಗುಜರಾತ್‍ಗೆ 100 ಜೇನು ಕುಟುಂಬಗಳನ್ನು ಕಳುಹಿಸಿದ್ದಾರೆ. ಈಗಾಗಲೇ 1000 ಜೇನು ಕುಟುಂಬದ ಪೆಟ್ಟಿಗೆಗೆ ಬೇಡಿಕೆ ವ್ಯಕ್ತವಾಗಿದೆ. ಈ ಮೂಲಕ ರಾಜ್ಯದಾದ್ಯಂತ ಜೇನು ಕೃಷಿಯಲ್ಲಿ ಹೆಸರುವಾಸಿಯಾಗಿರುವ ಮನಮೋಹನ್ ರಾಷ್ಟ್ರದಾದ್ಯಂತ ತುಡುವೆ ಜೇನಿನ ಸಿಹಿ ಹಂಚಲು ಹೊರಟಿದ್ದಾರೆ.

ಪೆಟ್ಟಿಗೆಗಳಲ್ಲಿ ಜೇನು ಕೃಷಿ


8ನೇ ತರಗತಿಯಿಂದಲೇ ಜೇನು ಕೃಷಿಯಲ್ಲಿ ತೊಡಗಿದ ಯುವಕ

ಮನಮೋಹನ 8ನೇ ತರಗತಿಯಲ್ಲಿ ಇರುವಾಗಲೇ ಜೇನು ಕೃಷಿಗೆ ತೊಡಗಿದ್ದರು. ಕೇವಲ ಒಂದು ಪೆಟ್ಟಿಗೆಯಿಂದ ಆರಂಭಗೊಂಡ ಕಾಯಕ ನಾಲ್ಕು ಸಾವಿರ ದಾಟಿದೆ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 ಕಿಲೋ ಜೇನು ಸಂಗ್ರಹಿಸಿದ್ದೂ ಇದೆ. ಬೆಟ್ಟಂಪಾಡಿಯಿಂದ ತೊಡಗಿ ರಾಜ್ಯದ ನಾನಾ ಕಡೆಗಳಲ್ಲಿ ಜೇನು ಪೆಟ್ಟಿಗೆ ಇರಿಸಿದ್ದಾರೆ. ಇವರ ಜಾಗದಲ್ಲಿ ಅಲ್ಲ, ಯಾರದ್ದೋ ಜಮೀನಿನಲ್ಲಿ. ಸ್ಥಳ ಬಾಡಿಗೆಯಾಗಿ ಮಾಲಕನಿಗೆ ಒಂದಷ್ಟು ಜೇನು ಮತ್ತು ಪರಾಗಸ್ಪರ್ಶದಿಂದ ಫಸಲು ಹೆಚ್ಚಳವಾಗಿದೆ.

ಜೇನು ಕೃಷಿಯಲ್ಲಿ ನಿರಂತರ ಸಾಧನೆ

ವಾರ್ಷಿಕವಾಗಿ 20,000 ಕೆ. ಜಿ. ಜೇನು, 450 ಕೆ. ಜಿ. ಮೇಣ ಸಂಗ್ರಹ, 4000 ಜೇನುಕುಟುಂಬ ಮಾರಾಟ ಮನಮೋಹನರ ಸಾಧನೆ. 'ಹನಿ ವರ್ಲ್ಡ್' ಇವರ ಬ್ರಾಂಡ್. ಜೇನು ಕುಟುಂಬ ಮಾರಾಟ ಮಾಡುವ, ಹಾಗು ಶುದ್ಧ ಜೇನು ಸಂಗ್ರಹಿಸುವ ಕರ್ನಾಟಕದ ಏಕೈಕ ಯುವ ಕೃಷಿಕ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಕೇರಳ, ಕರ್ನಾಟಕ ರಾಜ್ಯದ ದಕ್ಷಿಣಕನ್ನಡ, ಕೊಡಗು, ಚಿತ್ರದುರ್ಗ ಹೀಗೆ ನಾನಾ ಕಡೆಗಳಲ್ಲಿ ಮನಮೋಹನ ಅವರ ಜೇನಿನ ಪೆಟ್ಟಿಗೆ ಇದೆ. ಜೇನು ಕೃಷಿಯಲ್ಲೇ ಸುಮಾರು 20 ಜನರಿಗೆ ನೇರ ಉದ್ಯೋಗ ನೀಡುತ್ತಿರುವ ಮನಮೋಹನ್ ಜೇನಿನ ಕೃಷಿ ತನ್ನ ಅಗಾಧ ಅನುಭವವನ್ನು ಜೇನು ಸಾಕಾಣಿಕೆಗಾಗಿ ತಮ್ಮ ಬಳಿ ಬರುವವರಿಗೆಲ್ಲಾ ಧಾರೆ ಎರೆದಿದ್ದಾರೆ.

ಇದನ್ನೂ ಓದಿ: Wild Mango: ಕಾಡಲ್ಲಿ ಸಿಗೋ ಮಾವನ್ನೂ ಈಗ ಕೃಷಿ ಮಾಡ್ತಿದ್ದಾರೆ, ಹೊಸ ಪ್ರಯತ್ನವಿದು

ಗುಜರಾತ್‌ಗೆ ತೆರಳಲು ಸಜ್ಜಾದ ಮನಮೋಹನ್

ಗುಜರಾತಿನಿಂದ 1000 ತುಡುವೆ ಜೇನಿನ ಕುಟುಂಬಕ್ಕೆ ಬೇಡಿಕೆ ವ್ಯಕ್ತವಾಗಿದೆ. 100 ಪೆಟ್ಟಿಗೆ, ಕುಟುಂಬವನ್ನು ಒದಗಿಸಿದ್ದೇನೆ. ನಾಲ್ಕು ದಿನದಲ್ಲಿ ಅಲ್ಲಿಗೆ ತೆರಳಿ ಕೃಷಿಗೆ ಸಹಕಾರ ನೀಡಲಿದ್ದೇನೆ. ಈಗಾಗಲೇ ವಾರ್ಷಿಕವಾಗಿ ಜೇನು ಕೃಷಿಯಿಂದ 20 ಟನ್ ಜೇನು ಉತ್ಪಾದನೆ ಆಗುತ್ತಿದೆ ಎನ್ನುತ್ತಾರೆ ಜೇನು ಕೃಷಿಯಲ್ಲಿ ಸಾಧನೆ ಯಶಸ್ಸನ್ನು ಕಂಡಿರುವಮನಮೋಹನ್ ಆರಂಬ್ಯ.
Published by:Annappa Achari
First published: