ರಾಯಚೂರು(ಜ.19): ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಮಂತ್ರಾಲಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಮೃತಪಟ್ಟವರು ಕರ್ನೂಲ್ ಜಿಲ್ಲೆ ನಾನಾಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಆದರೆ ಮೃತರ ಗುರುತು ಇನ್ನೂ ಸಹ ಪತ್ತೆಯಾಗಿಲ್ಲ. ಆಂಧ್ರಪ್ರದೇಶದ ಮಂತ್ರಾಲಯ ರೈಲ್ವೆ ನಿಲ್ದಾಣದಲ್ಲಿ ಗಂಡ, ಹೆಂಡತಿ ಮತ್ತು ಮಗ ರೈಲ್ವೆ ಹಳಿ ದಾಟುತ್ತಿದ್ದರು. ಈ ವೇಳೆ ಬಂದ ರೈಲು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದಿನಿಂದ 6 ದಿನಗಳ ಕಾಲ ಸಿಎಂ ಬಿ.ಎಸ್.ಯಡಿಯೂರಪ್ಪ ದಾವೋಸ್ ಪ್ರವಾಸ; ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗಿ
ಆ ಹಳಿಯಲ್ಲಿ ರೈಲು ಬರುತ್ತಿರುವುದು ಅವರ ಗಮನಕ್ಕೆ ಬರಲಿಲ್ಲ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂತ್ರಾಲಯ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಜೆಸಿಬಿ ಮೂಲಕ 3 ಸಾವಿರ ದಾಳಿಂಬೆ ಗಿಡಗಳು ಶಿಫ್ಟ್; ರಾಯಚೂರು ರೈತನ ಸಾಧನೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ