• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • BS Yediyurappa: ಮಾಜಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ ಲಿಂಗಾಯತ ಯುವ‌ ಮುಖಂಡ

BS Yediyurappa: ಮಾಜಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ ಲಿಂಗಾಯತ ಯುವ‌ ಮುಖಂಡ

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಮಂಜುನಾಥ್ ಯಂಟ್ರುವಿ ಎಂಬವರು ಬರೆದಿರುವ ಪತ್ರ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

  • News18 Kannada
  • 3-MIN READ
  • Last Updated :
  • Hubli-Dharwad (Hubli), India
  • Share this:

ಹುಬ್ಬಳ್ಳಿ: ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಈ ಬಾರಿ ಚುನಾವಣೆಯಲ್ಲಿ (Election) ಗೆಲ್ಲುವುದಿಲ್ಲ‌ ಎಂದು ರಕ್ತದಲ್ಲಿ ಬರೆದುಕೊಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ಹೇಳಿದ್ದರು. ಇದೀಗ ಯಡಿಯೂರಪ್ಪ ಅವರಿಗೆ ಲಿಂಗಾಯತ ಯುವ ಮುಖಂಡ (Lingayat Leader) ತಿರುಗೇಟು ನೀಡಿದ್ದಾರೆ. ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ್ದಾರೆ. ಮಂಜುನಾಥ್ ಯಂಟ್ರುವಿ ಬರೆದಿರುವ ಪತ್ರ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.


ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನತೆ ಹತ್ತಿರ ಕ್ಷಮೆ ಸಹ ಕೇಳಿದ್ದೇನೆ. ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ. ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ. ಜಗದೀಶ್ ಶೆಟ್ಟರ್ ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು.




ಶೆಟ್ಟರ್ ವಿರುದ್ಧ ಬಿಎಸ್​ವೈ ಗುಡುಗು


ವಿಶ್ವಾಸ ದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷೆಮಿಸುವುದಿಲ್ಲ. ಜಗದೀಶ್ ಶೆಟ್ಟರ್ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಶೆಟ್ಟರ್ ವಾಪಸು ಬಿಜೆಪಿಗೆ ಬರುವ ಪ್ರಶ್ನೆಯೆ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಗುಡುಗಿದ್ದರು.


ಇದನ್ನೂ ಓದಿ:  Narendra Modi Conversation: ರಾಜ್ಯದ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ; ಪಕ್ಷದಲ್ಲಿ ತುಂಬಿದ ಉತ್ಸಾಹ




ಶೆಟ್ಟರ್​ ಸೋಲ್ತಾರೆ ಎಂದ ಅಮಿತ್ ಶಾ


ಚುನಾವಣೆ ಪ್ರಚಾರದ ವೇಳೆ ಮಾತಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಪಕ್ಷ ಲಕ್ಷ್ಮಣ್ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ಎಲ್ಲವನ್ನೂ ನೀಡಿತ್ತು. ಆದರೂ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬಾರಿ ಇಬ್ಬರು ಭಾರೀ ಮತಗಳಿಂದ ಸೋಲಲಿದ್ದಾರೆ ಎಂದು ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ.

top videos
    First published: