ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನಕ್ಕೆ (Minister Oath Taking Ceremony) ಕ್ಷಣಗಣನೆ ಆರಂಭವಾಗಿದೆ. ಆದ್ರೆ ಸಚಿವ ಸ್ಥಾನ ವಂಚಿತರು ಅಸಮಾಧಾನಗೊಂಡಿದ್ದು, ಇವರನ್ನು ಮನವೊಲಿಸೋದು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ಗೆ (DCM DK Shivakumar) ಹೊಸ ಸವಾಲು ಎದುರಾಗಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (BK Hariprasad) ಸಹ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಸಚಿವ ಸ್ಥಾನ ತಪ್ಪಿದ್ದಕ್ಕೆ ಆಪ್ತರ ಮುಂದೆ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುವ ಕುರಿತು ಬಿಕೆ ಹರಿಪ್ರಸಾದ್ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇತ್ತ ಮತ್ತೋರ್ವ ಹಿರಿಯ ಶಾಸಕರಾಗಿರುವ ಪುಟ್ಟರಂಗಶೆಟ್ಟಿ (MLA Puttarangashetty) ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ನ್ಯೂಸ್ 18 ಜೊತೆ ಮಾತನಾಡಿದ ಪುಟ್ಟರಂಗಶೆಟ್ಟಿ, ಉಪ್ಪಾರ ಸಮುದಾಯದಿಂದ ನಾನೊಬ್ಬನೇ ಗೆದ್ದಿರೋದು. ನಿನ್ನೆವರೆಗೂ ನನ್ನ ಹೆಸರು ಚಾಲ್ತಿಯಲ್ಲಿತ್ತು. ಯಾಕೆ ನನ್ನ ಹೆಸರನ್ನ ಸಚಿವರ ಪಟ್ಟಿಯಿಂದ ಕೈ ಬಿಟ್ಟರೂ ಗೊತ್ತಿಲ್ಲ ಎಂದು ಬೇಸರ ಹೊರ ಹಾಕಿದರು.
ಡೆಪ್ಯೂಟಿ ಸ್ಪೀಕರ್ ಆಫರ್!
ಚಾಮರಾಜನಗರದಿಂದ ಮೂವರು ಗೆದ್ದಿದ್ದೇವೆ. ಮೂವರಲ್ಲಿ ಯಾರಿಗಾದರೂ ಮಂತ್ರಿ ಮಾಡಿ ಜಿಲ್ಲಾ ಉಸ್ತುವಾರಿ ಕೊಡಬಹುದಿತ್ತು. ಈಗ ನಾನು ಡೆಪ್ಯೂಟಿ ಸ್ಪೀಕರ್ ಹುದ್ದೆ ಸ್ವೀಕರಿಸಬೇಕೋ ಅಥವಾ ಬೇಡವೋ ಅಂತ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ: Praveen Nettar Wife: ಸರ್ಕಾರದ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗವೂ ರದ್ದು!
ಸಂಪುಟ ವಿಸ್ತರಣೆಗೂ ಮುನ್ನ ಸಿಎಂ ಸಿದ್ದರಾಮಯ್ಯಮ ನಿವಾಸಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಆಗಮಿಸುತ್ತಿದ್ದರು. ಅಂತಿಮ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಅವರ ನಿವಾಸದತ್ತ ಯಾವ ಶಾಸಕರು ಸುಳಿಯುತ್ತಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ