ಬಿಜೆಪಿ ಪಕ್ಷಕ್ಕೆ ರೌಡಿಶೀಟರ್ಗಳ ಸೇರ್ಪಡೆ ಹಾಗೂ ಚಾಮರಾಜಪೇಟೆಯಲ್ಲಿ (Chamarajapete) ಸೈಲೆಂಟ್ ಸುನೀಲ್ ಸ್ಫರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ (Government) ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅಂದ್ರೆ ಅದು ಬಿಜೆಪಿ (BJP) ಎಂದು ಕಾಂಗ್ರೆಸ್ ಟ್ವೀಟ್ (Congress Tweet) ಮಾಡಿದೆ. ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ರೌಡಿಶೀಟರ್ಗಳ ಸೇರ್ಪಡೆಗೆ ಕಾಂಗ್ರೆಸ್ ಕಿಡಿ
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ರೌಡಿಶೀಟರ್ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?
— Karnataka Congress (@INCKarnataka) November 28, 2022
ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿ ಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಈಗ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ ಎಂದು ಬಿಜೆಪಿ ನಡೆಗೆ ಟ್ವೀಟ್ ಮೂಲಕವೇ ಕಾಂಗ್ರೆಸ್ ಲೇವಡಿ ಮಾಡಿದೆ.
ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?
ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ?
— Karnataka Congress (@INCKarnataka) November 28, 2022
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಸಚಿವ ಜ್ಞಾನೇಂದ್ರ ಅರಗ ಅವರೇ, ಸೈಲೆಂಟ್ ಸುನೀಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿ ಸಂಸ್ಕೃತಿ ಗೊತ್ತಾಗಿದೆ- ಸಿದ್ದರಾಮಯ್ಯ
ಬಿಜೆಪಿ ಕಾರ್ಯಕ್ರಮದಲ್ಲಿ ರೌಡಿಶೀಟರ್ ಸೈಲೆಂಟ್ ಸುನೀಲ ಭಾಗಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸಂಸ್ಕೃತಿ ಗೊತ್ತಾಗಿದ್ದು ಅವರ ಆಚಾರ ವಿಚಾರ ಪ್ರಚಾರ ಆಗುತ್ತಿದ ಎಂದು ಹೇಳಿದ್ದಾರೆ.
ಇದನ್ನೂ ಓದಿ: Fighter Ravi: ಸೈಲೆಂಟ್ ಸುನೀಲ ಬೆನ್ನಲ್ಲೇ ಮತ್ತೊಬ್ಬ ರೌಡಿಶೀಟರ್ ಬಿಜೆಪಿ ಸೇರ್ಪಡೆ, ಕಮಲ ಹಿಡಿದ ಫೈಟರ್ ರವಿ
ಫೈಟರ್ ರವಿ ಬಿಜೆಪಿ ಸೇರ್ಪಡೆ
ರೌಡಿಶೀಟರ್ ಸೈಲೆಂಟ್ ಸುನೀಲ (Silent Sunil) ಬಿಜೆಪಿ ಪಕ್ಷಕ್ಕೆ ಸೇರಿದ ಬೆನ್ನಲ್ಲೇ ಬೆಂಗಳೂರು ನಗರದ ವೈಯಾಲಿಕಾವಲ್ ರೌಡಿಶೀಟರ್ ಮಲ್ಲಿಕಾರ್ಜುನ್ ಅಲಿಯಾಸ್ ಫೈಟರ್ ರವಿ (Fighter Ravi) ಕೂಡ ಕಮಲ ಹಿಡಿದಿದ್ದಾರೆ. ಈತ ಕ್ರಿಕೆಟ್ ಬುಕ್ಕಿಯಾಗಿದ್ದು ಅನೇಕ ಕಾನೂನು ಬಾಹಿರ ಚಟುವಟಕೆಯಲ್ಲಿ (Illegal Activity) ಭಾಗಿಯಾಗಿದ್ದಾನೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ