ಇದೀಗ ಬೆಳ್ತಂಗಡಿಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ಹೊಯ್‌ಕೈ ನೈತಿಕತೆಯ ಎಲ್ಲೆ ಮೀರಿದ್ದು, ನಾಮಪತ್ರ ಸಲ್ಲಿಕೆ ವೇಳೆ ಪರಸ್ಪರ ಗಲಾಟೆ ನಡೆದಿರುವ ಗಲಾಟೆ ನಡೆದಿದೆ.
ಇಂದು ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಶಕ್ತಿ ಪ್ರದರ್ಶನವನ್ನೂ ಆಯೋಜಿಸಲಾಗಿತ್ತು. ಹೀಗಾಗಿ ಎರಡೂ ಪಕ್ಷಗಳ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಆಗಮಿಸಿ ನಾವು ಯಾರಿಗೂ ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟರು.
ಆದರೆ ಬೆಳ್ತಂಗಡಿಯ ಸಂತೆಕಟ್ಟೆ ಬಳಿ ತಲುಪಬೇಕಾದರೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಮುಖಾಮುಖಿಯಾಗಿದ್ದು, ಪರಸ್ಪರ ಘೋಷಣೆಗಳನ್ನು ಕೂಗಿದ್ದಾರೆ.
ಒಂದು ಕಡೆಯಿಂದ ಬಿಜೆಪಿ ಶಾಸಕ ಹರೀಶ್ ಪೂಂಜಾ ತಂಡ ನಾಮಪತ್ರ ಸಲ್ಲಿಸಿ ವಾಪಸ್ ಬರುತ್ತಿತ್ತು. ಮತ್ತೊಂದು ಕಡೆ ಕಾಂಗ್ರೆಸ್‌ನ ರಕ್ಷಿತ್ ಶಿವರಾಂ ತಂಡ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಲು ಹೋಗುತ್ತಿತ್ತು.
ಆಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಪರ ಮತ್ತು ವಿರೋಧ ಘೋಷಣೆಗಳನ್ನು ಕೂಗಿದ್ದು, ಆಗ ಪರಿಸ್ಥಿತಿ ಮಿತಿ ಮೀರಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದೆ.
ಬಿಜೆಪಿಗರು ಕಾಂಗ್ರೆಸ್‌ನವರನ್ನು ಕೆಣಕಿದ್ರೆ, ಕಾಂಗ್ರೆಸ್‌ನವರು ಬಿಜೆಪಿಯವರನ್ನು ಪ್ರಚೋದಿಸಿದ್ರು. ಆಗ ಗಲಾಟೆ ಮಿತಿ ಮೀರಿ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿಯಾಗಿದೆ.
top videos
ಈ ವೇಳೆ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ರು. ಅಲ್ಲದೇ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕ್ಕೆ ಆಗ್ರಹಿಸಿದರು. ಬಳಿಕ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದರು.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ