• Home
  • »
  • News
  • »
  • state
  • »
  • Boy Death: ಗಲ್ಲಿಗೇರುವ ಸೀನ್‌ ಅಭ್ಯಾಸದ ವೇಳೆ ನಡೆಯಿತು ದುರಂತ, ಭಗತ್ ಸಿಂಗ್ ಪಾತ್ರ ಮಾಡಿದ್ದ ವಿದ್ಯಾರ್ಥಿ ಸಾವು!

Boy Death: ಗಲ್ಲಿಗೇರುವ ಸೀನ್‌ ಅಭ್ಯಾಸದ ವೇಳೆ ನಡೆಯಿತು ದುರಂತ, ಭಗತ್ ಸಿಂಗ್ ಪಾತ್ರ ಮಾಡಿದ್ದ ವಿದ್ಯಾರ್ಥಿ ಸಾವು!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮನೆಯಲ್ಲಿ ಪೋಷಕರು ಇಲ್ಲದೇ ಇರುವಾಗ ಸಂಜಯ್, ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದನು. ನೇಣಿಗೆ ಕೊರಳೊಡ್ಡುವ ಸಂದರ್ಭದ ಅಭಿನಯಕ್ಕೆ ಫ್ಯಾನಿಗೆ ನೂಲಿನ ಹಗ್ಗ ಕಟ್ಟಿಕೊಂಡಿದ್ದನು.

  • News18 Kannada
  • Last Updated :
  • Karnataka, India
  • Share this:

    ಚಿತ್ರದುರ್ಗ: ಭಗತ್ ಸಿಂಗ್ (Bhagath Singh) ನೇಣುಗಂಬಕ್ಕೆ ಏರುವ ಪಾತ್ರವನ್ನು ​ಅಭ್ಯಾಸ (Practicing) ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೇಣು ಹಾಕಿಕೊಂಡು ವಿದ್ಯಾರ್ಥಿಯೊಬ್ಬ (Student) ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಗರದ ಕೆಳಗೋಟೆಯಲ್ಲಿ ನಡೆದಿದೆ. 12 ವರ್ಷದ ಸಂಜಯ್ ಗೌಡ ಮೃತ ವಿದ್ಯಾರ್ಥಿಯಾಗಿದ್ದಾನೆ. ಮೃತ ಸಂಜಯ್ ಅವರು ನಾಗರಾಜ್ ಮತ್ತು ಭಾಗ್ಯಲಕ್ಷ್ಮಿ ದಂಪತಿಯ ಪುತ್ರ,  ನಗರದ ಎಸ್.ಎಲ್.ವಿ ಶಿಕ್ಷಣ ಸಂಸ್ಥೆಯಲ್ಲಿ (SLV Educational Institution) 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.


    ಭಗತ್ ಸಿಂಗ್​ ಪಾತ್ರ ಮಾಡ್ತಿದ್ದ ಸಂಜಯ್​


    ನವೆಂಬರ್‌ 1ರಂದು ರಾಜ್ಯೋತ್ಸವ ಸಮಾರಂಭದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜಯ್, ಭಗತ್ ಸಿಂಗ್ ಪಾತ್ರ ಮಾಡಬೇಕಿತ್ತು. ಇದಕ್ಕೆ ಸಿದ್ಧತೆ ಮಾಡಿಕೊಳ್ಳುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




    ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಅಭ್ಯಾಸ


    ಶನಿವಾರ ರಾತ್ರಿ ಮನೆಯಲ್ಲಿ ಪೋಷಕರು ಇಲ್ಲದೇ ಇರುವಾಗ ಸಂಜಯ್, ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದನು. ನೇಣಿಗೆ ಕೊರಳೊಡ್ಡುವ ಸಂದರ್ಭದ ಅಭಿನಯಕ್ಕೆ ಫ್ಯಾನಿಗೆ ನೂಲಿನ ಹಗ್ಗ ಕಟ್ಟಿಕೊಂಡಿದ್ದನು. ಸ್ಟೂಲ್ ಮೇಲೆ ನಿಂತು ಮುಖವನ್ನು ಟೋಪಿಯಿಂದ ಮುಚ್ಚಿಕೊಂಡು ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಟೂಲ್ ಜಾರಿ ನೇಣು ಬಿಗಿದುಕೊಂಡಿದೆ ಎಂದು ಬಡಾವಣೆ ಠಾಣೆಗೆ ನೀಡಿದ ದೂರಿನಲ್ಲಿ ಪೋಷಕರು ತಿಳಿಸಿದ್ದಾರೆ.


    ಮೀನು ಹಿಡಿಯಲು ಹೋಗಿದ್ದ ಯುವಕ ಸಾವು


    ಚಾಮರಾಜನಗರದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವನ್ನಪ್ಪಿದ್ದಾನೆ. ಚೆಕ್ ಡ್ಯಾಂ ನಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಳೇ ಮಾರ್ಟಳ್ಳಿ ಸಮೀಪ ದುರ್ಘಟನೆ ನಡೆದಿದೆ. ವಡ್ಡರದೊಡ್ಡಿಯ ಮುದಲೈ ಮುತ್ತು ಮೃತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಲವು ತಾಸು ಕಾರ್ಯಾಚರಣೆ ನಡೆಸಿ ಶವ ಹೊರ ತೆಗೆದಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಸರ್ಕಾರಿ ಶಾಲೆಗಳಿಗೆ ಬಂಪರ್ 

     ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ರೂಮ್, 50 ಸಾವಿರ ಡೆಸ್ಕ್, 100 ಹೈಟೆಕ್ ಅಂಗನವಾಡಿಗಳ ನಿರ್ಮಾಣದ ಗುರಿಯನ್ನ ಮುಂಬರುವ ಎರಡು ವರ್ಷದಲ್ಲಿ ಪೂರ್ಣಗೊಳಿಸಲು ನಿಶ್ಚಯಿಸಲಾಗಿದೆ. ಸಿ.ಎಸ್.ಆರ್ ಫಂಡ್ ಮುಖೇನ ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಪಂಚ ಯೋಜನೆಗಳನ್ನ ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.


    100 ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ ಕಾರ್ಯ




    ಧಾರವಾಡದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆಯಿಂದ ಆರಂಭವಾಗುವ ಬಣ್ಣದರ್ಪಣೆ ಕಾರ್ಯಕ್ರಮ ಮುಂದಿನ ವರ್ಷದ ದೀಪಾವಳಿ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರತಿ ತಿಂಗಳು 100 ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ ಕಾರ್ಯ ನಡೆಯಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1177 ಶಾಲಾ ಕಾಲೇಜುಗಳಿಗೆ ಹೊಸದಾಗಿ ಬಣ್ಣ ಹಚ್ಚಲು ನಿರ್ಧರಿಸಲಾಗಿದೆ.


    Published by:ಪಾವನ ಎಚ್ ಎಸ್
    First published: